Akanksha Dubey: ಶೂಟಿಂಗ್ ತೆರಳಿದ್ದ ಭೋಜಪುರಿ ನಟಿ ಅನುಮಾನಾಸ್ಪದ ಸಾವು

ಭೋಜ್​ಪುರಿ ಚಿತ್ರರಂಗದ ಜನಪ್ರಿಯ ನಟಿ ಆಕಾಂಕ್ಷಾ ದುಬೆ ನಿಧನ ಹೊಂದಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇನ್​ಸ್ಟಾಗ್ರಾಂನಲ್ಲಿ ತಮ್ಮ ಡ್ಯಾನ್ಸ್ ವಿಡಿಯೋ ಅಪ್​ಲೋಡ್ ಮಾಡಿದ ಕೆಲವೇ ಗಂಟೆಗಳ ಬಳಿಕ ಅವರು ನಿಧನ ಹೊಂದಿದ್ದಾರೆ.

Akanksha Dubey: ಶೂಟಿಂಗ್ ತೆರಳಿದ್ದ ಭೋಜಪುರಿ ನಟಿ ಅನುಮಾನಾಸ್ಪದ ಸಾವು
ಆಕಾಂಕ್ಷಾ ದುಬೆ
Follow us
ಮಂಜುನಾಥ ಸಿ.
|

Updated on: Mar 26, 2023 | 4:29 PM

ಭೂಜ್​ಪುರಿ ಚಿತ್ರರಂಗದ (Bhojpuri Industry) ಜನಪ್ರಿಯ ನಟಿ ಆಕಾಂಕ್ಷಾ ದುಬೆಯ (Akanksha Dubey) ಮೃತದೇಹ ವಾರಣಾಸಿಯ (Varanasi) ಹೋಟೆಲ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಟಿಯು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆಕಾಂಕ್ಷಾ ದುಬೆ, ನಾಯಕ್ ಹೆಸರಿನ ಭೋಜ್​ಪುರಿ ಸಿನಿಮಾದ ಚಿತ್ರೀಕರಣಕ್ಕಾಗಿ ವಾರಣಾಸಿಗೆ ತೆರಳಿದ್ದರು. ಈ ವೇಳೆ ಅವರು ಸಾರಾನಾಥ್ ಹೋಟೆಲ್​ನಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ಹೋಟೆಲ್ ಸಿಬ್ಬಂದಿ ಕೋಣೆಯ ಒಳಗೆ ಹೋದಾಗ ನಟಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದಿದ್ದು ಗಮನಿಸಿ, ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಭೊಜ್​ಪುರಿ ಚಿತ್ರರಂಗದಲ್ಲಿ ಸಪ್ನೋಂಕಿ ರಾಣಿ (ಕನಸಿನ ರಾಣಿ) ಎಂದೇ ಹೆಸರು ಗಳಿಸಿದ್ದ ನಟಿ ಆಕಾಂಕ್ಷಾ ದುಬೆ, ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ನಿನ್ನೆಯಷ್ಟೆ ಅವರ ನಟನೆಯ ಹಾಡೊಂದು ಬಿಡುಗಡೆ ಆಗಿತ್ತು. ಹಾಡನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು, ಮಾತ್ರವೇ ಅಲ್ಲದೆ ತಾವೇ ಬೆಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಒಂದನ್ನು ಸಹ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಕೇವಲ 19 ಗಂಟೆಗಳ ಹಿಂದೆ ತಮ್ಮ ವಿಡಿಯೋ ಹಂಚಿಕೊಂಡಿದ್ದ ಆಕಾಂಕ್ಷಾ ವಿಡಿಯೋನಲ್ಲಿ ಖುಷಿಯಾಗಿ ನೃತ್ಯ ಮಾಡಿದ್ದರು. ಆದರೆ ವಿಡಿಯೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಇಲ್ಲವಾಗಿದ್ದಾರೆ.

ಆಕಾಂಕ್ಷಾ ದುಬೆ ತಮ್ಮ ನಟನೆ, ಗ್ಲಾಮರಸ್ ಲುಕ್​ಗಳಿಂದ ಭೋಜ್​ಪುರಿ ಚಿತ್ರರಂಗದಲ್ಲಿ ಜನಪ್ರಿಯರಾಗಿದ್ದರು. ಜೊತೆಗೆ ಅವರ ಪ್ರೇಮ ಪ್ರಕರಣವೂ ಸಖತ್ ಸದ್ದು ಮಾಡಿತ್ತು. ತಮ್ಮ ಸಹನಟ ಸಮರ್ ಸಿಂಗ್ ಅವರನ್ನು ಆಕಾಂಕ್ಷಾ ದುಬೆ ಪ್ರೀತಿಸುತ್ತಿದ್ದರು. ಪ್ರೇಮಿಗಳ ದಿನದಂದು ಸಮೀರ್ ಸಿಂಗ್ ಜೊತೆಗೆ ಕಳೆದ ಆತ್ಮೀಯ ಕ್ಷಣಗಳ ಫೋಟೊಗಳನ್ನು ಆಕಾಂಕ್ಷಾ ಹಂಚಿಕೊಂಡಿದ್ದರು.

ನಟಿಯ ಸಾವಿಗೆ ಅವರ ಪ್ರೇಮ ಪ್ರಕರಣವೇ ಕಾರಣವಾಗಿರಬಹುದೆಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು, ಸಮರ್​ ಸಿಂಗ್​ ಅನ್ನು ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ಮೂಲಗಳ ಪ್ರಕಾರ ಸಮರ್ ಸಿಂಗ್ ಪೊಲೀಸರ ಸಂಪರ್ಕಕ್ಕೆ ಸಿಕ್ಕಿಲ್ಲ.

ಮಿರ್ಜಾಪುರ್ ಮೂಲದ ಆಕಾಂಕ್ಷಾ ದುಬೆ ಐಎಎಸ್ ಅಧಿಕಾರಿ ಆಗುವ ಆಸೆಯೊಂದಿಗೆ ಮುಂಬೈಗೆ ಬಂದರು. ಆದರೆ ಅಚಾನಕ್ಕಾಗಿ ಭೋಜ್​ಪುರಿ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಮೇರಿ ಜಂಗ್ ಮೇರಾ ಫೈಸ್ಲಾ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಕಾಂಕ್ಷಾ ಆ ಬಳಿಕ ಮುಝ್ಸೆ ಶಾದಿ ಕರೋಗಿ, ಸಾಜನ್, ಮಿಟ್ಟಿ, ವೀರೋಂಕಿ ವೀರಾ, ಕಸಂ ಫೈದಾ ಕರ್ನೆ ವಾಲೇ ಕಿ 2 ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟಿಯ ಅಗಲಿಕೆಗೆ ಭೋಜ್​ಪುರಿ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ