ಕೊನೆಗೂ ಬಂತು ಬಾಲಿವುಡ್​ಗೆ ಬೂಸ್ಟ್ ಕೊಡುವ ಚಿತ್ರ; ಮೊದಲ ದಿನ ಭರ್ಜರಿ ಕಲೆಕ್ಷನ್

2007ರಲ್ಲಿ ‘ಭೂಲ್​ ಭುಲಯ್ಯ’ ಸಿನಿಮಾ ತೆರೆಗೆ ಬಂದು ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ಟೀ-ಸೀರಿಸ್ ನಿರ್ಮಾಣ ಮಾಡಿತ್ತು. ಈಗ ‘ಭೂಲ್​ ಭುಲಯ್ಯ 2’ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದಿದೆ ಟೀ-ಸೀರಿಸ್.

ಕೊನೆಗೂ ಬಂತು ಬಾಲಿವುಡ್​ಗೆ ಬೂಸ್ಟ್ ಕೊಡುವ ಚಿತ್ರ; ಮೊದಲ ದಿನ ಭರ್ಜರಿ ಕಲೆಕ್ಷನ್
ಭೂಲ್ ಭುಲಯ್ಯ 2 ತಂಡ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 21, 2022 | 3:05 PM

ಇತ್ತೀಚೆಗೆ ಬಾಲಿವುಡ್​ನಲ್ಲಿ ತಯಾರಾದ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುತ್ತಿಲ್ಲ ಎಂಬ ಬೇಸರ ಅಲ್ಲಿಯವರಿಗೆ ಕಾಡುತ್ತಲೇ ಇತ್ತು. ಎಷ್ಟೇ ಪ್ರಚಾರ ಮಾಡಿದರೂ ಜನರು ಮಾತ್ರ ಚಿತ್ರಮಂದಿರದತ್ತ ಹೆಜ್ಜೆ ಹಾಕಿಲ್ಲ. ಒಳ್ಳೆಯ ಸಿನಿಮಾಗಳು ಬರದೇ ಇರುವುದೇ ಇದಕ್ಕೆ ಕಾರಣವಾಗಿತ್ತು. ಕೊನೆಗೂ ಬಾಲಿವುಡ್​ಗೆ ಚೇತರಿಕೆ ಕೊಡುವ ಸಿನಿಮಾ ಎಂಟ್ರಿ ಕೊಟ್ಟಿದೆ. ಕಾರ್ತಿಕ್ ಆರ್ಯನ್ (Kartik Aaryan) ಹಾಗೂ ಕಿಯಾರಾ ಅಡ್ವಾಣಿ ನಟನೆಯ ‘ಭೂಲ್​ ಭುಲಯ್ಯ 2’ (Bhool Bhulaiyaa 2) ಸಿನಿಮಾ ಕಮಾಲ್ ಮಾಡಿದೆ. ಮೊದಲ ದಿನ ಈ ಚಿತ್ರ 14 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಸಿನಿಮಾ ಒಳ್ಳೆಯ ಗಳಿಕೆ ಮಾಡುವ ಸೂಚನೆ ಸಿಕ್ಕಿದೆ.

2007ರಲ್ಲಿ ‘ಭೂಲ್​ ಭುಲಯ್ಯ’ ಸಿನಿಮಾ ತೆರೆಗೆ ಬಂದು ಸೂಪರ್ ಹಿಟ್ ಆಯಿತು. ಅಕ್ಷಯ್ ಕುಮಾರ್ ನಟನೆಯ ಈ ಸಿನಿಮಾ 80 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತು. ಈ ಚಿತ್ರವನ್ನು ಟೀ-ಸೀರಿಸ್ ನಿರ್ಮಾಣ ಮಾಡಿತ್ತು. ಈಗ ‘ಭೂಲ್​ ಭುಲಯ್ಯ 2’ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬಂದಿದೆ ಟೀ-ಸೀರಿಸ್. ಈ ಚಿತ್ರದಲ್ಲಿ ಕಾರ್ತಿಕ್ ಆರ್ಯನ್ ಹಾಗೂ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
‘ಗಡಂಗ್​ ರಕ್ಕಮ್ಮ’ ಎಂಟ್ರಿಗೆ ದಿನಾಂಕ ಫಿಕ್ಸ್​; ಹೊಸ ಮಾಹಿತಿ ಹಂಚಿಕೊಂಡ ಸುದೀಪ್
Image
ಬ್ರೇಕಪ್​ ಗಾಸಿಪ್​ಗೆ ಕಿವಿಗೊಡದೇ ‘ಭೂಲ್​ ಭುಲಯ್ಯ 2’ ಪ್ರಮೋಷನ್​ನಲ್ಲಿ ಬ್ಯುಸಿ ಆದ ಕಿಯಾರಾ ಅಡ್ವಾಣಿ
Image
Kiara Advani: ಬೋಲ್ಡ್ ವಿಡಿಯೋ ಹಂಚಿಕೊಂಡ ಕಿಯಾರಾ; ಸಮಂತಾ ರಿಯಾಕ್ಷನ್ ಏನಿತ್ತು?
Image
Kartik Aaryan: ಲ್ಯಾಂಬೋರ್ಗಿನಿಯಲ್ಲಿ ತೆರಳಿ ರಸ್ತೆ ಬದಿ ತಿಂಡಿ ಸವಿದ ಕಾರ್ತಿಕ್ ಆರ್ಯನ್

ಇದನ್ನೂ ಓದಿ: ಬ್ರೇಕಪ್​ ಗಾಸಿಪ್​ಗೆ ಕಿವಿಗೊಡದೇ ‘ಭೂಲ್​ ಭುಲಯ್ಯ 2’ ಪ್ರಮೋಷನ್​ನಲ್ಲಿ ಬ್ಯುಸಿ ಆದ ಕಿಯಾರಾ ಅಡ್ವಾಣಿ

ಮೇ 20ರಂದು ‘ಭೂಲ್​ ಭುಲಯ್ಯ 2’ ಸಿನಿಮಾ ರಿಲೀಸ್ ಆಗಿದೆ. ಮೊದಲ ದಿನವೇ ವಿಮರ್ಶಕರು ಹಾಗೂ ಸಿನಿಪ್ರಿಯರಿಂದ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಕಾಮಿಡಿ ಹಾಗೂ ಹಾರರ್​ ಮಿಶ್ರಣ ಸಿನಿಮಾದ ಹೈಲೈಟ್. ಈ ಚಿತ್ರವನ್ನು ಎಲ್ಲರೂ ಮೆಚ್ಚಿಕೊಂಡರು. ಹೀಗಾಗಿ, ಈ ಸಿನಿಮಾ ಮೊದಲ ದಿನ 14.11 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಬಾಲಿವುಡ್​ ಚಿತ್ರ ಈ ವರ್ಷ ಮೊದಲ ದಿನ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದ್ದು ಇದೇ ಮೊದಲು ಅನ್ನೋದು ವಿಶೇಷ. ಈ ಮೊದಲು ರಿಲೀಸ್ ಆದ ‘ಬಚ್ಚನ್ ಪಾಂಡೆ’ (13.25 ಕೋಟಿ ರೂಪಾಯಿ) ಹಾಗೂ ‘ಗಂಗೂಬಾಯಿ ಕಾಠಿಯಾವಾಡಿ’ (10.25) ಚಿತ್ರವನ್ನು ‘ಭೂಲ್​ ಭುಲಯ್ಯ 2’ ಹಿಂದಿಕ್ಕಿದೆ.

ವೀಕೆಂಡ್ ಆಗಿರುವುದರಿಂದ ಇಂದು (ಮೇ 21) ಹಾಗೂ ನಾಳೆ (ಮೇ 22) ‘ಭೂಲ್​ ಭುಲಯ್ಯ 2’ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಈ ಚಿತ್ರ 100 ಕೋಟಿ ಕ್ಲಬ್ ಅನಾಯಾಸವಾಗಿ ಸೇರಲಿದೆ ಎಂಬುದು ತಜ್ಞರ ಲೆಕ್ಕಾಚಾರ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ