Amitabh Bachchan: 2ನೇ ಬಾರಿ ಅಮಿತಾಭ್ ಬಚ್ಚನ್ಗೆ ಕೊರೊನಾ ಪಾಸಿಟಿವ್; ಅಭಿಮಾನಿಗಳಲ್ಲಿ ಮೂಡಿತು ಆತಂಕ
Corona Positive | Amitabh Bachchan Health Update: ‘ಈಗತಾನೇ ನನಗೆ ಕೊವಿಡ್ ಪಾಸಿಟಿವ್ ಆಗಿದೆ. ನನ್ನ ಸುತ್ತಮುತ್ತ ಇದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅಮಿತಾಭ್ ಬಚ್ಚನ್ ಅವರು ಹೇಳಿದ್ದಾರೆ.
ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ಈ ವಿಷಯವನ್ನು ಸ್ವತಃ ಅವರು ಸೋಶಿಯಲ್ ಮೀಡಿಯಾ ಮೂಲಕ ಖಚಿತ ಪಡಿಸಿದ್ದಾರೆ. ನೆಚ್ಚಿನ ನಟನಿಗೆ ಕೊವಿಡ್ (Covid 19) ವೈರಸ್ ತಗುಲಿರುವ ಸುದ್ದಿ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಅಮಿತಾಭ್ ಬಚ್ಚನ್ ಅವರಿಗೆ ಈಗ 79 ವರ್ಷ ವಯಸ್ಸು. ಈ ವಯಸ್ಸಿನಲ್ಲಿ ಅವರು ಕೊರೊನಾ ವಿರುದ್ಧ ಹೋರಾಡಬೇಕಿದೆ. ಅಂದಹಾಗೆ, ಅವರಿಗೆ ಕೊವಿಡ್ ಪಾಸಿಟಿವ್ (Corona Positive) ಆಗುತ್ತಿರುವುದು ಇದೇ ಮೊದಲೇನಲ್ಲ. 2020ರಲ್ಲಿ ಅವರು ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹಲವು ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಈ ಬಾರಿ ಕೂಡ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ.
ಅಮಿತಾಭ್ ಬಚ್ಚನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ತಮ್ಮ ಪ್ರತಿದಿನದ ಆಗುಹೋಗುಗಳ ಬಗ್ಗೆ ಅವರು ಟ್ವಿಟರ್ ಮೂಲಕ ಅಭಿಮಾನಿಗಳಿಗೆ ಅಪ್ಡೇಟ್ ನೀಡುತ್ತಾರೆ. ಈಗ ಅವರು ತಮಗೆ ಕೊರೊನಾ ಪಾಸಿಟಿವ್ ಆಗಿರುವ ವಿಷಯವನ್ನು ಕೂಡ ತಿಳಿಸಿದ್ದಾರೆ. ‘ಈಗತಾನೇ ನನಗೆ ಕೊವಿಡ್ ಪಾಸಿಟಿವ್ ಆಗಿದೆ. ನನ್ನ ಸುತ್ತಮುತ್ತ ಇದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅಮಿತಾಭ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.
ಅಮಿತಾಭ್ ಬಚ್ಚನ್ ಅವರನ್ನು ದಣಿವರಿಯದ ಕಲಾವಿದ ಎಂದು ಕರೆದರೆ ಅತಿಶಯೋಕ್ತಿ ಅಲ್ಲ. ಇನ್ನೆರಡು ತಿಂಗಳು ಕಳೆದರೆ ಅವರು 80ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಆದರೂ ಕೂಡ ಅವರ ಉತ್ಸಾಹ ಹದಿಹರೆಯದ ಯುವಕನಂತಿದೆ. ಚಿತ್ರರಂಗಕ್ಕೆ ಕಾಲಿಟ್ಟು ಹಲವು ದಶಕಗಳು ಕಳೆದಿದ್ದರೂ ಕೂಡ ಅವರ ಚಾರ್ಮ್ ಕಮ್ಮಿ ಆಗಿಲ್ಲ. ಈಗಲೂ ಅವರು ಹಲವು ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ. ಹೊಸ ಹೊಸ ಆಫರ್ಗಳು ಅವರನ್ನು ಹುಡುಕಿಕೊಂಡು ಬರುತ್ತಲೇ ಇವೆ.
ಪ್ರಸ್ತುತ ಅಮಿತಾಭ್ ಬಚ್ಚನ್ ಅವರು ‘ಗುಡ್ ಬೈ’, ‘ಉಂಚಾಯಿ’ ಮುಂತಾದ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕಿರುತೆರೆಯ ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮವನ್ನು ಅವರು ನಡೆಸಿಕೊಡುತ್ತಿದ್ದಾರೆ. ಶೀಘ್ರದಲ್ಲೇ ದೀಪಿಕಾ ಪಡುಕೋಣೆ ಜೊತೆ ‘ದಿ ಇಂಟರ್ನ್’ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ. ಕೊವಿಡ್ನಿಂದ ಗುಣಮುಖರಾಗುತ್ತಿದ್ದಂತೆಯೇ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ.
T 4388 – I have just tested CoViD + positive .. all those that have been in my vicinity and around me, please get yourself checked and tested also .. ?
— Amitabh Bachchan (@SrBachchan) August 23, 2022
2020ರಲ್ಲಿ ಅಮಿತಾಭ್ ಬಚ್ಚನ್ ಅವರ ಇಡೀ ಕುಟುಂಬಕ್ಕೆ ಕೊವಿಡ್ ಪಾಸಿಟಿವ್ ಅಂಟಿತ್ತು. ಈಗ ಮತ್ತೊಮ್ಮೆ ಅವರಿಗೆ ಕೊರೊನಾ ವೈರಸ್ ಕಾಟ ಕೊಡಲು ಆರಂಭಿಸಿದೆ. ಅವರ ಹೆಲ್ತ್ ಅಪ್ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:12 am, Wed, 24 August 22