ಹಿರಿಯ ನಟ ವಿಕ್ರಮ್ ಗೋಖಲೆ ನಿಧನ; ಫಲಿಸಲಿಲ್ಲ ವೈದ್ಯರ ಪ್ರಯತ್ನ, ಅಭಿಮಾನಿಗಳ ಪ್ರಾರ್ಥನೆ

ಬಹು ಅಂಗಾಂಗ ವೈಫಲ್ಯದಿಂದ ಅವರು ಬಳಲುತ್ತಿದ್ದರು. ಅವರಿಗೆ ಚಿಕಿತ್ಸೆ ನೀಡಿ ಬದುಕಿಸಲು ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು. ಕಳೆದ ಕೆಲ ದಿನಗಳಿಂದ ಅವರನ್ನು ವೆಂಟಿಲೇಟರ್​ನಲ್ಲೇ ಇಡಲಾಗಿತ್ತು. ಆದರೆ, ವೈದ್ಯರ ಶ್ರಮ, ಅಭಿಮಾನಿಗಳ ಪ್ರಾರ್ಥನೆ ಫಲ ನೀಡಲಿಲ್ಲ.

ಹಿರಿಯ ನಟ ವಿಕ್ರಮ್ ಗೋಖಲೆ ನಿಧನ; ಫಲಿಸಲಿಲ್ಲ ವೈದ್ಯರ ಪ್ರಯತ್ನ, ಅಭಿಮಾನಿಗಳ ಪ್ರಾರ್ಥನೆ
ವಿಕ್ರಮ್ ಗೋಖಲೆ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 26, 2022 | 3:41 PM

ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ನಟಿಸಿ ಜನಪ್ರಿಯರಾದ ಹಿರಿಯ ನಟ ವಿಕ್ರಮ್ ಗೋಖಲೆ (Vikram Gokhale) ಅವರು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು (ನವೆಂಬರ್ 26) ಮಧ್ಯಾಹ್ನ ಮೃತಪಟ್ಟಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ವಿಕ್ರಮ್ (Vikram Gokhale Death) ಅವರನ್ನು ಕಳೆದುಕೊಂಡ ಚಿತ್ರರಂಗದ ಹಲವರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ವಿಕ್ರಮ್ ಅವರ ಆರೋಗ್ಯ ತೀವ್ರಗತಿಯಲ್ಲಿ ಹದಗೆಟ್ಟಿತ್ತು. ಬಹು ಅಂಗಾಂಗ ವೈಫಲ್ಯದಿಂದ ಅವರು ಬಳಲುತ್ತಿದ್ದರು. ಅವರಿಗೆ ಚಿಕಿತ್ಸೆ ನೀಡಿ ಬದುಕಿಸಲು ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು. ಕಳೆದ ಕೆಲ ದಿನಗಳಿಂದ ಅವರನ್ನು ವೆಂಟಿಲೇಟರ್​ನಲ್ಲೇ ಇಡಲಾಗಿತ್ತು. ಆದರೆ, ವೈದ್ಯರ ಶ್ರಮ, ಅಭಿಮಾನಿಗಳ ಪ್ರಾರ್ಥನೆ ಫಲ ನೀಡಲಿಲ್ಲ. ಅವರನ್ನು ಕಳೆದುಕೊಂಡ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ವಿಕ್ರಮ್ ಅವರ ಅಂತ್ಯಸಂಸ್ಕಾರ ಇಂದು ಸಂಜೆಯೇ ನಡೆಯಲಿದೆ. ಸದ್ಯ ಬಾಲಗಂಧರ್ವ ಆಡಿಟೋರಿಯಂನಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ವಾರದ ಆರಂಭದಲ್ಲಿ ವಿಕ್ರಮ್ ಅವರು ಮೃತಪಟ್ಟ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಅನೇಕ ಸೆಲೆಬ್ರಿಟಿಗಳು ವಿಕ್ರಮ್ ಸಾವಿಗೆ ಸಂತಾಪ ಸೂಚಿಸಿದ್ದರು. ಆದರೆ, ವಿಕ್ರಮ್ ಮೃತಪಟ್ಟಿರಲಿಲ್ಲ ಎಂಬುದನ್ನು ಕುಟುಂಬದವರು ಸ್ಪಷ್ಟಪಡಿಸಿದರು. ಈಗ ಅವರು ಮೃತಪಟ್ಟ ವಿಚಾರವನ್ನು ಕುಟುಂಬದವರೇ ಅಧಿಕೃತ ಮಾಡಿದ್ದಾರೆ.

ಗುರುವಾರ (ನವೆಂಬರ್ 24) ಮಾತನಾಡಿದ್ದ ವಿಕ್ರಮ್ ಅವರ ಪತ್ನಿ ವೃಶಾಲಿ ಗೋಖಲೆ, ‘ಪತಿ ವಿಕ್ರಮ್ ಗೋಖಲೆ ಆರೋಗ್ಯ ಹದಗೆಟ್ಟಿದೆ. ವೈದ್ಯರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಹೇಳಿದ್ದರು.

ಇದನ್ನೂ ಓದಿ: ಮಗಳು ಏನು ನಿರ್ಧಾರ ತೆಗೆದುಕೊಳ್ಳುತ್ತಾಳೋ ಅದನ್ನು ನಾವು ಒಪ್ಪುತ್ತೇವೆ ಎಂದ ವೈಷ್ಣವಿ ಪಾಲಕರು

ಹಿಂದಿ ಚಿತ್ರರಂಗಕ್ಕೆ ಕಾಲಿಡುವುದಕ್ಕೂ ಮೊದಲು ವಿಕ್ರಮ್ ಅವರು ಮರಾಠಿ ಚಿತ್ರರಂಗ ಹಾಗೂ ಮರಾಠಿ ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದರು. ವಿಕ್ರಮ್ 26 ವರ್ಷ ವಯಸ್ಸಿನವರಿದ್ದಾಗ ಅಮಿತಾಭ್ ಬಚ್ಚನ್ ನಟನೆಯ ‘ಪರ್ವಾನ’ (1971) ಸಿನಿಮಾದಲ್ಲಿ ನಟಿಸಿದರು. ನಂತರ ಸುಮಾರು ನಾಲ್ಕು ದಶಕಗಳ ಕಾಲ ಹಿಂದಿ ಬಣ್ಣದ ಲೋಕದಲ್ಲಿ ಅವರು ಬ್ಯುಸಿ ಆದರು. 2019ರಲ್ಲಿ ತೆರೆಗೆ ಬಂದ ‘ಮಿಷನ್​ ಮಂಗಳ್’ ಚಿತ್ರದಲ್ಲಿ ಅವರು ನಟಿಸಿದ್ದರು. 2010ರಲ್ಲಿ ಅವರಿಗೆ ಮರಾಠಿಯ ‘ಅನುಮತಿ’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:35 pm, Sat, 26 November 22

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ