Akshay Kumar: ಅಕ್ಷಯ್​ ಕುಮಾರ್​ಗೆ ಮಾತೃ ವಿಯೋಗ; ಅಗಲಿದ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ನಟ

ತಮ್ಮ ತಾಯಿ ನಿಧನವಾಗಿರುವ ಸುದ್ದಿಯನ್ನು ಸ್ವತಃ ನಟ ಅಕ್ಷಯ್ ಕುಮಾರ್ ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡಿರುವ ಅವರು, ನನ್ನ ತಾಯಿಯೇ ನನ್ನ ಸರ್ವಸ್ವ. ಇಂದು ಅವರನ್ನು ಕಳೆದುಕೊಂಡು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ ಎಂದಿದ್ದಾರೆ.

Akshay Kumar: ಅಕ್ಷಯ್​ ಕುಮಾರ್​ಗೆ ಮಾತೃ ವಿಯೋಗ; ಅಗಲಿದ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ನಟ
ತಾಯಿಯೊಂದಿಗೆ ಅಕ್ಷಯ್​ ಕುಮಾರ್
Follow us
TV9 Web
| Updated By: Skanda

Updated on: Sep 08, 2021 | 11:45 AM

ಬಾಲಿವುಡ್​​ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಅವರ ತಾಯಿ ಅರುಣಾ ಭಾಟಿಯಾ (Aruna Bhatia) ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3 ರಂದು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಕಣ್ಮುಚ್ಚಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾದಾಗಿನಿಂದ ಆಸ್ಪತ್ರೆಯ ಐಸಿಯು ಘಟಕದಲ್ಲಿರಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ತಮ್ಮ ತಾಯಿ ನಿಧನವಾಗಿರುವ ಸುದ್ದಿಯನ್ನು ಸ್ವತಃ ನಟ ಅಕ್ಷಯ್ ಕುಮಾರ್ ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡಿರುವ ಅವರು, ನನ್ನ ತಾಯಿಯೇ ನನ್ನ ಸರ್ವಸ್ವ. ಇಂದು ಅವರನ್ನು ಕಳೆದುಕೊಂಡು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಶ್ರೀಮತಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬದವರು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ತನ್ನ ಮುಂದಿನ ಸಿನಿಮಾ ಸಿಂಡ್ರೆಲ್ಲಾ ಚಿತ್ರೀಕರಣದ ಪ್ರಯುಕ್ತ ಯುಕೆಯಲ್ಲಿದ್ದ  ಅಕ್ಷಯ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ತನ್ನ ತಾಯಿ ಜತೆ ಇರಲೆಂದೇ ಇರಲು ಸೋಮವಾರ ಬೆಳಗ್ಗೆ ಮುಂಬೈಗೆ ಮರಳಿದ್ದರು. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅಕ್ಷಯ್​ ಕುಮಾರ್​ ತಾಯಿಯನ್ನು ಹಿರಾನಂದನಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

2015 ರಲ್ಲಿ ಅಕ್ಷಯ್ ತನ್ನ ಹಾಗೂ ತಾಯಿ ನಡುವಿನ ಅಮೂಲ್ಯ ಸಂಬಂಧದ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ನನ್ನ ಮತ್ತು ತಾಯಿ ನಡುವಿನ ಬಾಂಧವ್ಯ ತುಂಬಾ ಬಲವಾಗಿದೆ. ನಮ್ಮ ನಡುವೆ ಏನೂ ತಡೆ ಬರಲು ಸಾಧ್ಯವಿಲ್ಲ, ಯಾವುದೇ ಮೈಲಿ ಅಥವಾ ಖಂಡಗಳು ನಮ್ಮಿಬ್ಬರನ್ನು ದೂರಾಗಿಸದು. ಪ್ರತಿದಿನವೂ ನಾವು ಒಬ್ಬರಿಗೊಬ್ಬರು ಮಾತನಾಡುತ್ತೇವೆ, ಸಮಯ ನೀಡುತ್ತೇವೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Akshay Kumar: ಅಕ್ಷಯ್ ಕುಮಾರ್ ತಾಯಿಯ ಸ್ಥಿತಿ ಗಂಭೀರ; ಇಂಗ್ಲೆಂಡ್​ನಿಂದ ಶೂಟಿಂಗ್ ಬಿಟ್ಟು ಬಂದ ನಟ

(Bollywood actor Akshay Kumar Mother Aruna Bhatia dies in Mumbai suffering from severe health issues)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ