Satish Kaushik: ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ

ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್ ಜೊತೆ ಸತೀಶ್​​ ಕೌಶಿಕ್​ಗೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಸತೀಶ್ ನಿಧನ ವಾರ್ತೆಯನ್ನು ಅನುಪಮ್​ ಖೇರ್​ ಅವರು ತಿಳಿಸಿದ್ದಾರೆ.

Satish Kaushik: ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Mar 09, 2023 | 9:11 AM

ಭಾರತೀಯ ಚಿತ್ರರಂಗ ಇತ್ತೀಚೆಗೆ ಅನೇಕರನ್ನು ಕಳೆದುಕೊಳ್ಳುತ್ತಿದೆ. ಈಗ ಬಾಲಿವುಡ್​​ನ ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ (Satish Kaushik) ಅವರು ಬುಧವಾರ (ಮಾರ್ಚ್​ 8) ರಾತ್ರಿ ನಿಧನ ಹೊಂದಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್ (Anupam Kher) ಜೊತೆ ಸತೀಶ್​​ ಕೌಶಿಕ್​ಗೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಸತೀಶ್ ನಿಧನ ವಾರ್ತೆಯನ್ನು ಅನುಪಮ್​ ಖೇರ್​ ಅವರು ತಿಳಿಸಿ, ಟ್ವಿಟರ್​ನಲ್ಲಿ ಸಂತಾಪ ಸೂಚಿಸಿದ್ದಾರೆ. ‘ನನಗೆ ಗೊತ್ತು ಸಾವು ಈ ಜಗತ್ತಿನ ಪರಮ ಸತ್ಯ. ನಾನು ಬದುಕಿರುವಾಗ ನನ್ನ ಆತ್ಮೀಯ ಗೆಳೆಯ ಸತೀಶ್ ಕೌಶಿಕ್ ಬಗ್ಗೆ ಈ ವಿಷಯ ಬರೆಯುತ್ತೇನೆ ಎಂದು ನಾನು ನನ್ನ ಕನಸಿನಲ್ಲೂ ಯೋಚಿಸಿರಲಿಲ್ಲ. 45 ವರ್ಷಗಳ ಸ್ನೇಹಕ್ಕೆ ಇದ್ದಕ್ಕಿದ್ದಂತೆ ಪೂರ್ಣ ವಿರಾಮ. ನೀನಿಲ್ಲದೆ ನನ್ನ ಜೀವನ ಎಂದಿಗೂ ಮೊದಲಿನಂತೆ ಆಗುವುದಿಲ್ಲ ಸತೀಶ್. ಓಂ ಶಾಂತಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅನುಪಮ್ ಖೇರ್​ನ ಟ್ವೀಟ್​ನ ಎಲ್ಲರೂ ಶೇರ್ ಮಾಡಿಕೊಂಡು ಸಂತಾಪ ಸೂಚಿಸುತ್ತಿದ್ದಾರೆ. ಗೆಳೆಯನನ್ನು ಕಳೆದುಕೊಂಡ ಅನುಪಮ್​​ಗೆ ಫ್ಯಾನ್ಸ್ ಕಡೆಯಿಂದ ಧೈರ್ಯ ತುಂಬುವ ಕೆಲಸ ಆಗಿದೆ.

ಸತೀಶ್ ಅವರು ಹಲವು ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಅವರು ಪೋಷಕ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. 1983ರಲ್ಲಿ ಮೊದಲ ಬಾರಿಗೆ ಅವರು ಬಣ್ಣ ಹಚ್ಚಿದರು. ‘ಜಲ್ವಾ’, ‘ಸ್ವರ್ಗ್​’, ‘ಆಂಟಿ ನಂಬರ್ 1’, ‘ಕಲ್ಕತ್ತಾ ಮೇಲ್​’, ‘ಭಾಗಿ 3’ ಸೇರಿ ನೂರಾರು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕಂಗನಾ ರಣಾವತ್ ನಿರ್ದೇಶಿಸಿ, ನಟಿಸುತ್ತಿರುವ ‘ಎಮರ್ಜೆನ್ಸಿ’ ಚಿತ್ರದಲ್ಲಿ ಜಗ್​ಜೀವನ್ ರಾಮ್ ಪಾತ್ರವನ್ನು ಅವರು ಮಾಡುತ್ತಿದ್ದರು. ಈ ಸಿನಿಮಾ ತೆರೆಗೆ ಬರುವುದಕ್ಕೂ ಮೊದಲೇ ಸತೀಶ್​ ನಿಧನ ಹೊಂದಿದ್ದು ನಿಜಕ್ಕೂ ದುಃಖದ ಸಂಗತಿ. ಈ ಬಗ್ಗೆ ಕಂಗನಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Anupam Kher Birthday: ‘ಘೋಸ್ಟ್​’ ನಟ ಅನುಪಮ್​ ಖೇರ್​ಗೆ ಜನ್ಮದಿನದ ಸಡಗರ; 68ನೇ ವಯಸ್ಸಲ್ಲೂ ಫುಲ್​ ಆ್ಯಕ್ಟೀವ್​

1992ರಲ್ಲಿ ಷೇರು ಮಾರುಕಟ್ಟೆಯಲ್ಲಿ ದೊಡ್ಡ ಸ್ಕ್ಯಾಮ್ ನಡೆದಿತ್ತು. ಇದನ್ನು ಆಧರಿಸಿ ಸಿದ್ಧಗೊಂಡ ‘ಸ್ಕ್ಯಾಮ್​ 1992’ ವೆಬ್ ಸೀರಿಸ್ 2020ರಲ್ಲಿ ರಿಲೀಸ್ ಆಯಿತು. ಇದರಲ್ಲಿ ಮನು ಮುಂದ್ರಾ ಪಾತ್ರವನ್ನು ಸತೀಶ್ ಕೌಶಿಕ್ ನಿರ್ವಹಿಸಿದ್ದರು. ಈ ಪಾತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ತುಂಬಲಾರದ ನಷ್ಟ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ..

Published On - 6:52 am, Thu, 9 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ