AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Sood: ನಟ ಸೋನು ಸೂದ್ ₹ 20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ: ಆದಾಯ ತೆರಿಗೆ ಇಲಾಖೆ

ನಟ ಸೋನು ಸೂದ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ಸತತ ಮೂರು ದಿನಗಳ ಕಾರ್ಯಾಚರಣೆ ಮುಗಿದಿದೆ. ಈ ಕುರಿತಂತೆ ಇಲಾಖೆ ಮಾಹಿತಿ ನೀಡಿದ್ದು, ನಟ ₹ 20ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ ಎಂದಿದೆ.

Sonu Sood: ನಟ ಸೋನು ಸೂದ್ ₹ 20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ: ಆದಾಯ ತೆರಿಗೆ ಇಲಾಖೆ
ಸೋನು ಸೂದ್​
TV9 Web
| Updated By: shivaprasad.hs|

Updated on: Sep 18, 2021 | 1:25 PM

Share

ಮುಂಬೈ: ಬಾಲಿವುಡ್​ನ ಖ್ಯಾತ ನಟ ಸೋನು ಸೋದ್ ಮನೆ ಹಾಗೂ ಕಛೇರಿಗಳ ಮೇಲಿನ ಸಮೀಕ್ಷೆಯ ಕುರಿತಂತೆ ಐಟಿ ಇಲಾಖೆ ಮಾಹಿತಿ ನೀಡಿದ್ದು, ಅವರು ₹ 20 ಕೋಟಿಗೂ ಅಧಿಕ ಮೊತ್ತದ ತೆರಿಗೆಯನ್ನು ವಂಚಿಸಿದ್ಧಾರೆ ಎಂದಿದೆ. ಸತತ ಮೂರು ದಿನಗಳ ಕಾಲ ಸೋನು ಅವರ ಮನೆ, ಕಚೇರಿಗಳ ಮೇಲೆ ಸಮೀಕ್ಷೆ ನಡೆಸಿದ ಐಟಿ ಅಧಿಕಾರಿಗಳು, ನಟನಿಗೆ ಸಂಬಂಧಿಸಿದ ನಾನ್ ಪ್ರಾಫಿಟ್ ಸಂಸ್ಥೆಯು, ₹ 2.1 ಕೋಟಿಗಳನ್ನು ವಿದೇಶಿ ಮೂಲಗಳಿಂದ ಸಂಗ್ರಹಿಸಿದೆ ಎಂದಿದೆ. ಇದು ಸರ್ಕಾರದ ವಿದೇಶಿ ಹಣ ಸ್ವೀಕಾರದ ಕಾನೂನಿಗೆ ವಿರುದ್ಧವಾಗಿದೆ ಎಂದು ಇಲಾಖೆ ತಿಳಿಸಿದೆ.

ಸೋನು ಅವರ ಮನೆಯ ಮೇಲಿನ ಸಮೀಕ್ಷೆಯ ವೇಳೆ ಅವರು ತಮ್ಮ ಸಹವರ್ತಿಗಳೊಂದಿಗೆ ಕೂಡಿ ತೆರಿಗೆ ವಂಚನೆ ನಡೆಸಿದ್ದರ ಕುರಿತು ಸಾಕ್ಷ್ಯಗಳು ಪತ್ತೆಯಾಗಿವೆ. ಇದರಲ್ಲಿ ಮುಖ್ಯವಾಗಿ ಲೆಕ್ಕವಿಲ್ಲದ ಆದಾಯವನ್ನು ನಕಲಿ ಸಂಸ್ಥೆಗಳ ಮೂಲಕ ಸಾಗಿಸಲಾಗಿದೆ ಎಂದು ಸಿಬಿಡಿಟಿ ಮಾಹಿತಿ ನೀಡಿದೆ. ಐಟಿ ಇಲಾಖೆಯು ಸೋನು ಸೂದ್ ಹಾಗೂ ಲಕ್ನೋ ಮೂಲದ ಸಂಸ್ಥೆಯೊಂದರ ಮೇಲೆ ಸಮೀಕ್ಷೆ ನಡೆಸಿತ್ತು.ಇದಕ್ಕೆ ಸಂಬಂಧಪಟ್ಟಂತೆ, ಮುಂಬೈ, ಲಕ್ನೋ, ಕಾನ್ಪುರ, ಜೈಪುರ, ದೆಹಲಿ, ಗುರುಗ್ರಾಮಗಳಲ್ಲಿ ಶೋಧ ನಡೆಸಲಾಗಿತ್ತು ಎಂದು ಕೇಂದ್ರ ಆದಾಯ ತೆರಿಗೆ ಮಂಡಳಿ ತಿಳಿಸಿದೆ.

ಈ ಕುರಿತ ಎಎನ್​ಐ ಮಾಹಿತಿ:

ನಟನ ವಿರುದ್ಧದ ಆರೋಪಗಳ ಪ್ರಕಾರ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಕಷ್ಟಪಡುತ್ತಿರುವವರಿಗೆ ಸಹಾಯ ಮಾಡಿದ  ಪ್ರಯತ್ನಗಳು ಭಾರೀ ಪ್ರಶಂಸೆಯನ್ನು ಗಳಿಸಿತ್ತು. ಆದರೆ ಕಳೆದ ವರ್ಷ ಜುಲೈನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಸ್ಥಾಪಿಸಲಾದ ಅವರ ಲಾಭರಹಿತ ಸೂದ್ ಚಾರಿಟಿ ಫೌಂಡೇಶನ್ ₹ 18 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಅದು ಈ ವರ್ಷದ ಏಪ್ರಿಲ್ ವರೆಗೆ, ಅದರಲ್ಲಿ ₹ 1.9 ಕೋಟಿ ಪರಿಹಾರ ಕಾರ್ಯಕ್ಕಾಗಿ ಖರ್ಚು ಮಾಡಿದೆ. ಉಳಿದ ₹ 17 ಕೋಟಿ ಹಣ ಲಾಭರಹಿತ ಬ್ಯಾಂಕ್ ಖಾತೆಯಲ್ಲಿ ಬಳಕೆಯಾಗದೆ ಉಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಗಳು ತಿಳಿಸಿರುವ ಪ್ರಕಾರ, “ಸೋನು ಸೂದ್ ಅವರ ಕಂಪನಿ ಮತ್ತು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವಿನ ಇತ್ತೀಚಿನ ಒಪ್ಪಂದದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ” ಮತ್ತು ಈ ಒಪ್ಪಂದದ ಆಧಾರದ ಮೇಲೆ ತೆರಿಗೆ ವಂಚನೆಯ ಆರೋಪದ ಕುರಿತು ಸಮೀಕ್ಷೆ ನಡೆಸಲಾಗಿದೆ. ಲಕ್ನೋದ ಸಂಸ್ಥೆಯಲ್ಲಿ ಸೋನು ಸೂದ್ ಅಕ್ರಮ ಹಣವನ್ನು ಹೂಡಿದ್ದಾರೆ. ಈ ಕುರಿತು ಸಾಕ್ಷಾಧಾರಗಳು ಲಭ್ಯವಾಗಿವೆ. ಜೊತೆಗೆ ಲಕ್ನೋದ ಕಂಪೆನಿಯು ₹ 65 ಕೋಟಿಗೂ ಅಧಿಕ ಬೋಗಸ್ ಕಾಂಟ್ರಾಕ್ಟ್ ಪಡೆದಿದೆ. ಹೆಚ್ಚಿನ ತನಿಖೆ ನಡೆದಿದೆ  ಎಂದು ಮಾಹಿತಿ ನೀಡಲಾಗಿದೆ.

ಇತ್ತೀಚೆಗಷ್ಟೇ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದ ಸೋನು, ವಿರುದ್ಧ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಕುರಿತು ಎಎಪಿ ಹಾಗೂ ಶಿವಸೇನಾ ಟೀಕೆ ಮಾಡಿದ್ದು, ಬಿಜೆಪಿ ಇದರಲ್ಲಿ ರಾಜಕೀಯ ಕೈವಾಡವಿಲ್ಲ ಎಂದಿದೆ.

ಇದನ್ನೂ ಓದಿ:

ಪ್ರತಿಷ್ಠಿತ ಬ್ರ್ಯಾಂಡ್‌ಗಳ ಹೆಸರಲ್ಲಿ ಬ್ಯಾಗ್ ತಯಾರಿಸಿ ಮಾರಾಟ; ನಕಲಿ ಬ್ಯಾಗ್ ಕಂಪನಿಗಳ ಮೇಲೆ ಪೊಲೀಸ್ ದಾಳಿ

Upendra Rao: ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್​ನಲ್ಲಿ ಅಬ್ಬರಿಸಿದ ಉಪ್ಪಿ; ಚಿತ್ರದ ಟೀಸರ್ ಬಿಡುಗಡೆ ಯಾವಾಗ ಗೊತ್ತಾ?

(Bollywood actor Sonu Sood evaded tax of over 20 Cr Rs says IT Department)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!