ಮುಂಬೈ: ಬಾಲಿವುಡ್ನ ಖ್ಯಾತ ನಟ ಸೋನು ಸೋದ್ ಮನೆ ಹಾಗೂ ಕಛೇರಿಗಳ ಮೇಲಿನ ಸಮೀಕ್ಷೆಯ ಕುರಿತಂತೆ ಐಟಿ ಇಲಾಖೆ ಮಾಹಿತಿ ನೀಡಿದ್ದು, ಅವರು ₹ 20 ಕೋಟಿಗೂ ಅಧಿಕ ಮೊತ್ತದ ತೆರಿಗೆಯನ್ನು ವಂಚಿಸಿದ್ಧಾರೆ ಎಂದಿದೆ. ಸತತ ಮೂರು ದಿನಗಳ ಕಾಲ ಸೋನು ಅವರ ಮನೆ, ಕಚೇರಿಗಳ ಮೇಲೆ ಸಮೀಕ್ಷೆ ನಡೆಸಿದ ಐಟಿ ಅಧಿಕಾರಿಗಳು, ನಟನಿಗೆ ಸಂಬಂಧಿಸಿದ ನಾನ್ ಪ್ರಾಫಿಟ್ ಸಂಸ್ಥೆಯು, ₹ 2.1 ಕೋಟಿಗಳನ್ನು ವಿದೇಶಿ ಮೂಲಗಳಿಂದ ಸಂಗ್ರಹಿಸಿದೆ ಎಂದಿದೆ. ಇದು ಸರ್ಕಾರದ ವಿದೇಶಿ ಹಣ ಸ್ವೀಕಾರದ ಕಾನೂನಿಗೆ ವಿರುದ್ಧವಾಗಿದೆ ಎಂದು ಇಲಾಖೆ ತಿಳಿಸಿದೆ.
ಸೋನು ಅವರ ಮನೆಯ ಮೇಲಿನ ಸಮೀಕ್ಷೆಯ ವೇಳೆ ಅವರು ತಮ್ಮ ಸಹವರ್ತಿಗಳೊಂದಿಗೆ ಕೂಡಿ ತೆರಿಗೆ ವಂಚನೆ ನಡೆಸಿದ್ದರ ಕುರಿತು ಸಾಕ್ಷ್ಯಗಳು ಪತ್ತೆಯಾಗಿವೆ. ಇದರಲ್ಲಿ ಮುಖ್ಯವಾಗಿ ಲೆಕ್ಕವಿಲ್ಲದ ಆದಾಯವನ್ನು ನಕಲಿ ಸಂಸ್ಥೆಗಳ ಮೂಲಕ ಸಾಗಿಸಲಾಗಿದೆ ಎಂದು ಸಿಬಿಡಿಟಿ ಮಾಹಿತಿ ನೀಡಿದೆ. ಐಟಿ ಇಲಾಖೆಯು ಸೋನು ಸೂದ್ ಹಾಗೂ ಲಕ್ನೋ ಮೂಲದ ಸಂಸ್ಥೆಯೊಂದರ ಮೇಲೆ ಸಮೀಕ್ಷೆ ನಡೆಸಿತ್ತು.ಇದಕ್ಕೆ ಸಂಬಂಧಪಟ್ಟಂತೆ, ಮುಂಬೈ, ಲಕ್ನೋ, ಕಾನ್ಪುರ, ಜೈಪುರ, ದೆಹಲಿ, ಗುರುಗ್ರಾಮಗಳಲ್ಲಿ ಶೋಧ ನಡೆಸಲಾಗಿತ್ತು ಎಂದು ಕೇಂದ್ರ ಆದಾಯ ತೆರಿಗೆ ಮಂಡಳಿ ತಿಳಿಸಿದೆ.
ಈ ಕುರಿತ ಎಎನ್ಐ ಮಾಹಿತಿ:
The total amount of tax evaded unearthed so far, amounts to more than Rs 20 crore: Central Board of Direct Taxes (CBDT)
— ANI (@ANI) September 18, 2021
ನಟನ ವಿರುದ್ಧದ ಆರೋಪಗಳ ಪ್ರಕಾರ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಕಷ್ಟಪಡುತ್ತಿರುವವರಿಗೆ ಸಹಾಯ ಮಾಡಿದ ಪ್ರಯತ್ನಗಳು ಭಾರೀ ಪ್ರಶಂಸೆಯನ್ನು ಗಳಿಸಿತ್ತು. ಆದರೆ ಕಳೆದ ವರ್ಷ ಜುಲೈನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಸ್ಥಾಪಿಸಲಾದ ಅವರ ಲಾಭರಹಿತ ಸೂದ್ ಚಾರಿಟಿ ಫೌಂಡೇಶನ್ ₹ 18 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಅದು ಈ ವರ್ಷದ ಏಪ್ರಿಲ್ ವರೆಗೆ, ಅದರಲ್ಲಿ ₹ 1.9 ಕೋಟಿ ಪರಿಹಾರ ಕಾರ್ಯಕ್ಕಾಗಿ ಖರ್ಚು ಮಾಡಿದೆ. ಉಳಿದ ₹ 17 ಕೋಟಿ ಹಣ ಲಾಭರಹಿತ ಬ್ಯಾಂಕ್ ಖಾತೆಯಲ್ಲಿ ಬಳಕೆಯಾಗದೆ ಉಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳು ತಿಳಿಸಿರುವ ಪ್ರಕಾರ, “ಸೋನು ಸೂದ್ ಅವರ ಕಂಪನಿ ಮತ್ತು ಲಕ್ನೋ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯ ನಡುವಿನ ಇತ್ತೀಚಿನ ಒಪ್ಪಂದದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ” ಮತ್ತು ಈ ಒಪ್ಪಂದದ ಆಧಾರದ ಮೇಲೆ ತೆರಿಗೆ ವಂಚನೆಯ ಆರೋಪದ ಕುರಿತು ಸಮೀಕ್ಷೆ ನಡೆಸಲಾಗಿದೆ. ಲಕ್ನೋದ ಸಂಸ್ಥೆಯಲ್ಲಿ ಸೋನು ಸೂದ್ ಅಕ್ರಮ ಹಣವನ್ನು ಹೂಡಿದ್ದಾರೆ. ಈ ಕುರಿತು ಸಾಕ್ಷಾಧಾರಗಳು ಲಭ್ಯವಾಗಿವೆ. ಜೊತೆಗೆ ಲಕ್ನೋದ ಕಂಪೆನಿಯು ₹ 65 ಕೋಟಿಗೂ ಅಧಿಕ ಬೋಗಸ್ ಕಾಂಟ್ರಾಕ್ಟ್ ಪಡೆದಿದೆ. ಹೆಚ್ಚಿನ ತನಿಖೆ ನಡೆದಿದೆ ಎಂದು ಮಾಹಿತಿ ನೀಡಲಾಗಿದೆ.
ಇತ್ತೀಚೆಗಷ್ಟೇ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದ ಸೋನು, ವಿರುದ್ಧ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಕುರಿತು ಎಎಪಿ ಹಾಗೂ ಶಿವಸೇನಾ ಟೀಕೆ ಮಾಡಿದ್ದು, ಬಿಜೆಪಿ ಇದರಲ್ಲಿ ರಾಜಕೀಯ ಕೈವಾಡವಿಲ್ಲ ಎಂದಿದೆ.
ಇದನ್ನೂ ಓದಿ:
ಪ್ರತಿಷ್ಠಿತ ಬ್ರ್ಯಾಂಡ್‌ಗಳ ಹೆಸರಲ್ಲಿ ಬ್ಯಾಗ್ ತಯಾರಿಸಿ ಮಾರಾಟ; ನಕಲಿ ಬ್ಯಾಗ್ ಕಂಪನಿಗಳ ಮೇಲೆ ಪೊಲೀಸ್ ದಾಳಿ
Upendra Rao: ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್ನಲ್ಲಿ ಅಬ್ಬರಿಸಿದ ಉಪ್ಪಿ; ಚಿತ್ರದ ಟೀಸರ್ ಬಿಡುಗಡೆ ಯಾವಾಗ ಗೊತ್ತಾ?
(Bollywood actor Sonu Sood evaded tax of over 20 Cr Rs says IT Department)