AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಜನಸಾಮಾನ್ಯರಂತೆ ರಸ್ತೆ ಬದಿಯಲ್ಲಿ ಬಟ್ಟೆ ಖರೀದಿಸಿದ ಸಾರಾ ಅಲಿ ಖಾನ್; ಇಲ್ಲಿದೆ ವಿಡಿಯೋ

ಸಾರಾ ಅಲಿ ಖಾನ್ ಸೋಲಿನ ಸುಳಿಯಲ್ಲಿದ್ದರು. ಇತ್ತೀಚೆಗೆ ತೆರೆಗೆ ಬಂದ ಅವರ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಮೂಲಕ ಗೆದ್ದರು. ಆದರೂ ಅವರು ಸರಳತೆ ಬಿಟ್ಟಿಲ್ಲ.

Sara Ali Khan: ಜನಸಾಮಾನ್ಯರಂತೆ ರಸ್ತೆ ಬದಿಯಲ್ಲಿ ಬಟ್ಟೆ ಖರೀದಿಸಿದ ಸಾರಾ ಅಲಿ ಖಾನ್; ಇಲ್ಲಿದೆ ವಿಡಿಯೋ
ಸಾರಾ ಅಲಿ ಖಾನ್
ರಾಜೇಶ್ ದುಗ್ಗುಮನೆ
|

Updated on:Jul 15, 2023 | 11:51 AM

Share

ಸಾರಾ ಅಲಿ ಖಾನ್ (Sara Ali Khan) ಅವರು ಸ್ಟಾರ್ ನಟನ ಮಗಳು. ಇವರು ಕೂಡ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರಿಗೆ ಸೆಲೆಬ್ರಿಟಿ ಪಟ್ಟ ಸಿಕ್ಕಿದೆ. ಆದರೆ, ಜನಸಾಮಾನ್ಯರಂತೆ ಇರಲು ಅವರು ಬಯಸುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ. ಅವರು ರಸ್ತೆ ಬದಿಯ ಅಂಗಡಿಯಲ್ಲಿ ಶಾಪಿಂಗ್ ಮಾಡಿದ್ದಾರೆ. ಅವರ ಸಿಂಪ್ಲಿಸಿಟಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ.

ಸಾರಾ ಅಲಿ ಖಾನ್ ಸೋಲಿನ ಸುಳಿಯಲ್ಲಿದ್ದರು. ಇತ್ತೀಚೆಗೆ ತೆರೆಗೆ ಬಂದ ಅವರ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಕೂಡ ಸೋಲಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಸಿನಿಮಾ ಗೆದ್ದಿದೆ. ವಿಕ್ಕಿ ಕೌಶಲ್ ನಟನೆಯ ಈ ಚಿತ್ರ ಸೂಪರ್ ಹಿಟ್ ಎನಿಸಿಕೊಂಡಿದೆ. ಹಾಗಿದ್ದರೂ ಕೂಡ ಸಾರಾ ಅವರು ಅಟ್ಟಕ್ಕೆ ಏರಿ ಕುಳಿತಿಲ್ಲ. ತಮ್ಮ ಸರಳತೆಯನ್ನು ಅವರು ಮುಂದುವರಿಸಿಕೊಂಡು ಹೋಗಿದ್ದಾರೆ.

ಬಾಂದ್ರಾದಲ್ಲಿ ಸಾರಾ ಅಲಿ ಖಾನ್ ನಡೆದುಕೊಂಡು ಹೋಗಿದ್ದಾರೆ. ರಸ್ತೆ ಬದಿ ಅಂಗಡಿಯಲ್ಲಿ ಸಾಮಾನ್ಯರಂತೆ ತೆರಳಿ ಬಟ್ಟೆ ಖರೀದಿ ಮಾಡಿದ್ದಾರೆ. ಈ ವಿಡಿಯೋನ ಪಾಪರಾಜಿಗಳು ಹಂಚಿಕೊಂಡಿದ್ದಾರೆ. ಸಾರಾ ಅವರನ್ನು ಎಲ್ಲರೂ ಹೊಗಳಿದ್ದಾರೆ. ಈ ಸರಳತೆ ಹೀಗೆಯೇ ಮುಂದುವರಿಯಲಿ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ‘ನಿಮಗೆ ಇಷ್ಟ ಇಲ್ಲ ಅಂತ ನಾನು ದೇವಸ್ಥಾನಕ್ಕೆ ಹೋಗೋದು ನಿಲ್ಲಿಸಲ್ಲ’: ಸಾರಾ ಅಲಿ ಖಾನ್​

ಸಾರಾ ಅಲಿ ಖಾನ್ ಅವರು ಸಿನಿಮೇತರ ವಿಚಾರಕ್ಕೂ ಸುದ್ದಿ ಆಗುತ್ತಾರೆ. ಅವರು ಆಗಾಗ ಹಿಂದೂ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇದರಿಂದ ಅವರು ಟ್ರೋಲ್ ಆದ ಉದಾಹರಣೆ ಇದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ‘ನಿಮಗೆ ಇಷ್ಟ ಇಲ್ಲ ಎನ್ನುವ ಕಾರಣಕ್ಕೆ ನಾನು ದೇವಸ್ಥಾನಕ್ಕೆ ತೆರಳುವುದನ್ನು ನಿಲ್ಲಿಸುವುದಿಲ್ಲ’ ಎಂದು ಸಾರಾ ಅಲಿ ಖಾನ್ ಅವರು ಓಪನ್ ಆಗಿಯೇ ಹೇಳಿಕೊಂಡಿದ್ದರು.

ದೇವಸ್ಥಾನಕ್ಕೆ ತೆರಳುವುದು ಒಂದು ಪ್ರಚಾರದ ಗಿಮಿಕ್​ ಎಂದು ನೆಟ್ಟಿಗರು ಸಾರಾ ಅಲಿ ಖಾನ್​ ಅವರ ಕಾಲೆಳೆದಿದ್ದರು. ಚಿತ್ರದ ಗೆಲುವಿಗಾಗಿ ಸೆಲೆಬ್ರಿಟಿಗಳು ಇಂಥದ್ದನ್ನೆಲ್ಲ ಮಾಡುತ್ತಾರೆ ಎಂಬ ಕಮೆಂಟ್​ಗಳು ಕೂಡ ಬಂದಿದ್ದವು. ಅದಕ್ಕೆಲ್ಲ ಸಾರಾ ಅಲಿ ಖಾನ್​ ಅವರು ತಲೆಕೆಡಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:46 am, Sat, 15 July 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್