AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಎದುರು ತೊಡೆತಟ್ಟಿದ ಅಕ್ಷಯ್ ಕುಮಾರ್; ನಡೆಯಲಿದೆ ದೊಡ್ಡ ಕ್ಲ್ಯಾಶ್

ಅಕ್ಷಯ್ ಕುಮಾರ್ ಅವರ ‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರವು ಅಜಯ್ ದೇವಗನ್ ಅವರ ‘ಮೈದಾನ್​’ ಚಿತ್ರದ ಎದುರು ರಿಲೀಸ್ ಆಗಿತ್ತು. ಆದರೆ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಗಳಿಕೆಯನ್ನು ಮಾಡಲಿಲ್ಲ. ಎರಡೂ ಸಿನಿಮಾಗಳು ಸೋತಿವೆ. ಈಗ ಅಕ್ಷಯ್ ಕುಮಾರ್ ನೇರವಾಗಿ ಸೌತ್ ಸ್ಟಾರ್ ಕಮಲ್ ಹಾಸನ್ ಅವರನ್ನು ಎದುರಿಸುತ್ತಿದ್ದಾರೆ.

ಕಮಲ್ ಹಾಸನ್ ಎದುರು ತೊಡೆತಟ್ಟಿದ ಅಕ್ಷಯ್ ಕುಮಾರ್; ನಡೆಯಲಿದೆ ದೊಡ್ಡ ಕ್ಲ್ಯಾಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 15, 2024 | 11:18 AM

Share

ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ (Akshay Kumar) ಬಾಕ್ಸ್ ಆಫೀಸ್‌ನಲ್ಲಿ ಇತ್ತೀಚೆಗೆ ಗೆಲುವು ಕಂಡಿಲ್ಲ. ಅವರಿಗೆ ದೊಡ್ಡ ಯಶಸ್ಸಿನ ಅಗತ್ಯವಿದೆ. ಅವರ ಬಳಿ ಈಗ 10ಕ್ಕೂ ಹೆಚ್ಚು ಸಿನಿಮಾಗಳಿವೆ. ವರ್ಷಕ್ಕೆ ನಾಲ್ಕೈದು  ಸಿನಿಮಾಗಳು ರಿಲೀಸ್ ಆಗುತ್ತವೆ. ನಟ ‘ಸರ್ಫಿರಾ’ ಚಿತ್ರದೊಂದಿಗೆ ಪ್ರೇಕ್ಷಕರ ಎದುರು ಬರಲು ಅವರು ರೆಡಿ ಆಗಿದ್ದಾರೆ. ಈ ಚಿತ್ರದ ಬಗೆಗಿನ ವಿವರಗಳು ನಿರಂತರವಾಗಿ ಬರುತ್ತಲೇ ಇವೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಯಾವಾಗ ಬರಲಿದೆ ಎಂಬ ಅಧಿಕೃತ ಘೋಷಣೆ ಕೂಡ ಹೊರಬಿದ್ದಿದೆ. ಈ ವೇಳೆ ರಿಲೀಸ್ ದಿನಾಂಕದ ಬಗ್ಗೆಯೂ ಮಾಹಿತಿ ನೀಡಲಾಗಿದೆ.

‘ಸರ್ಫಿರಾ’ ಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ‘ಜೀವನದಲ್ಲಿ ದೊಡ್ಡ ಕನಸು ಕಾಣುವ ವ್ಯಕ್ತಿಯ ಕಥೆ’ ಎಂದು ಅಕ್ಷಯ್ ಬರೆದುಕೊಂಡಿದ್ದಾರೆ. ‘ನನಗೆ ಈ ರೀತಿಯ ಕಥೆ, ಚಿತ್ರ ಮತ್ತು ಪಾತ್ರವನ್ನು ಮಾಡುವ ಅವಕಾಶ ಸಿಗೋದು ಜೀವನದಲ್ಲಿ ಒಮ್ಮೆ ಮಾತ್ರ. ಜೂನ್ 18 ರಂದು ಸರ್ಫಿರಾ ಚಿತ್ರದ ಟ್ರೈಲರ್ ಬರಲಿದೆ. ನೀವು ಈ ಚಿತ್ರವನ್ನು ಜುಲೈ 12 ರಂದು ಚಿತ್ರಮಂದಿರಗಳಲ್ಲಿ ವೀಕ್ಷಿಸಬಹುದು’ ಎಂದು ಬರೆಯಲಾಗಿದೆ.

View this post on Instagram

A post shared by Akshay Kumar (@akshaykumar)

ಅಕ್ಷಯ್ ಕುಮಾರ್ ಅವರ ‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರವು ಅಜಯ್ ದೇವಗನ್ ಅವರ ‘ಮೈದಾನ್​’ ಚಿತ್ರದ ಎದುರು ರಿಲೀಸ್ ಆಗಿತ್ತು. ಆದರೆ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಗಳಿಕೆಯನ್ನು ಮಾಡಲಿಲ್ಲ. ಎರಡೂ ಸಿನಿಮಾಗಳು ಸೋತಿವೆ. ಈಗ ಅಕ್ಷಯ್ ಕುಮಾರ್ ನೇರವಾಗಿ ಸೌತ್ ಸ್ಟಾರ್ ಕಮಲ್ ಹಾಸನ್ ಅವರನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ:ಒಂದೇ ತಿಂಗಳಲ್ಲಿ ಕಮಲ್ ಹಾಸನ್ ನಟನೆಯ ಎರಡು ಬಿಗ್ ಬಜೆಟ್ ಸಿನಿಮಾ ರಿಲೀಸ್ 

ಕಮಲ್ ಹಾಸನ್ ಅವರ ‘ಇಂಡಿಯನ್’ ಸಿನಿಮಾ ಬ್ಲಾಕ್​ಬಸ್ಟರ್ ಎನಿಸಿಕೊಂಡಿತ್ತು. ಈಗ ಅದರ ಸೀಕ್ವೆಲ್ ಬರುತ್ತಿದೆ. ಜುಲೈ 12ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಚಿತ್ರದ ಬಜೆಟ್ 250 ಕೋಟಿ ಎಂದು ಹೇಳಲಾಗುತ್ತಿದೆ. ಈ ಚಿತ್ರವನ್ನು ಎದುರಿಸುವುದು ಯಾರಿಗೂ ಸುಲಭವಲ್ಲ. ಆದರೆ ಈಗ ಅಕ್ಷಯ್ ಕುಮಾರ್ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರ ನಟನೆಯ ‘ಸರ್ಫಿರಾ’ ಚಿತ್ರ ‘ಇಂಡಿಯನ್ 2’ ಎದುರು ರಿಲೀಸ್ ಆಗುತ್ತಿದೆ. ಸೌತ್ ಸೂಪರ್ ಸ್ಟಾರ್ ಸೂರ್ಯ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ