ದಕ್ಷಿಣ ಭಾರತಕ್ಕೆ ವಲಸೆ ಹೊರಟ ಬಾಲಿವುಡ್​ನ ಖ್ಯಾತ ನಟಿಯರು; ಅದ್ದೂರಿ ಚಿತ್ರಗಳಲ್ಲಿ ಬಣ್ಣಹಚ್ಚಲು ತಯಾರು!

Bollywood Actress: ಬಾಲಿವುಡ್​ನ ಖ್ಯಾತ ನಟಿಮಣಿಯರ ದಂಡು ದಕ್ಷಿಣ ಭಾರತಕ್ಕೆ ಕಾಲಿಡುತ್ತಿದೆ. ಹೌದು. ಅದ್ದೂರಿ ಬಜೆಟ್​ಗಳ, ದೊಡ್ಡ ತಾರಾಗಣದ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಬಾಲಿವುಡ್ ನಟಿಯರು ಬಣ್ಣ ಹಚ್ಚುತ್ತಿದ್ದಾರೆ. ದೀಪಿಕಾ ಪಡುಕೋಣೆ, ಆಲಿಯಾ ಭಟ್, ಐಶ್ವರ್ಯಾ ರೈ, ಕೃತಿ ಸನೊನ್, ಕಿಯಾರಾ ಅಡ್ವಾಣಿ ಸೇರಿದಂತೆ ಖ್ಯಾತ ತಾರೆಯರು ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

TV9 Web
| Updated By: shivaprasad.hs

Updated on:Aug 05, 2021 | 3:54 PM

‘ಹೀರೋಪಂತಿ’ ಚಿತ್ರದ ಮೂಲಕ ಗುರುತಿಸಿಕೊಂಡ ಕೃತಿ ಸನೊನ್, ಈಗ ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರಕ್ಕೆ ನಾಯಕಿ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್, ಸನ್ನಿ ಸಿಂಗ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Bollywood star heroin's are appearing in big budget South Indian Movies

1 / 7
ಈಗಾಗಲೇ ಬಾಲಿವುಡ್​ನಲ್ಲಿ ಮನೆಮಾತಾಗಿರುವ ಕಿಯಾರಾ ಅಡ್ವಾನಿ, ತಮ್ಮ ಮುಂದಿನ ಚಿತ್ರದಲ್ಲಿ ರಾಮ್​ಚರಣ್ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಶಂಕರ್ ನಿರ್ದೇಶನದ ಈ ಚಿತ್ರವನ್ನು ದಿಲ್​ರಾಜು ನಿರ್ಮಾಣ ಮಾಡಲಿದ್ದಾರೆ.

Bollywood star heroin's are appearing in big budget South Indian Movies

2 / 7
ದೀಪಿಕಾ ಪಡುಕೋಣೆ ಪ್ರಭಾಸ್ ನಟನೆಯ ಚಿತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರವನ್ನು ನಿಭಾಯಿಸುತ್ತಿದ್ದು, ಚಿತ್ರವು ಸುಮಾರು 400ಕೋಟಿ ರೂಗಳಲ್ಲಿ ತಯಾರಾಗಲಿದೆ ಎನ್ನಲಾಗುತ್ತಿದೆ.

ಕನ್ನಡ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿ, ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡ ಬಳಿಕ ದೀಪಿಕಾ ದಕ್ಷಿಣ ಭಾರತ ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಮನಸ್ಸು ಮಾಡಿಲ್ಲ. ಆದರೆ ಈ ಚಿತ್ರದ ಮೂಲಕ ಅವರು ಮರಳಿ ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುತ್ತವೆ ಮೂಲಗಳು.

3 / 7
ಆರ್​ಆರ್​ಆರ್​ ಚಿತ್ರದ ಮೂಲಕ ದಕ್ಷಿಣ ಭಾರತ ಚಿತ್ರರಂಗಕ್ಕೆ ಆಲಿಯಾ ಭಟ್ ಕಾಲಿಟ್ಟಿದ್ದಾರೆ.

Alia Bhatt Decided to not to take single penny for Sanjay Leela Bansali Heera Mandi

4 / 7
ರವೀನಾ ಟಂಡನ್ ಕೆಜಿಎಫ್-2 ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿನ ರವೀನಾ ಪಾತ್ರ ಎಲ್ಲರ ಗಮನ ಸೆಳೆದಿದೆ. ಯಶ್, ಸಂಜಯ್ ದತ್ ಸೇರಿದಂತೆ ಬಹುದೊಡ್ಡ ತಾರಾಗಣದ ಚಿತ್ರ ಇದಾಗಿದೆ.

5 / 7
ತಾಪ್ಸಿ ಪನ್ನು ತೆಲುಗಿನ ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಸ್ವರೂಪ್ ಆರ್​ಎಸ್​ಜೆ ನಿರ್ದೇಶಿಸಲಿದ್ದಾರೆ.

ತಾಪ್ಸಿ ಅವರು ಈ ಮೊದಲೂ ತೆಲುಗು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಪ್ರಭಾಸ್, ಕಾಜಲ್ ಅಗರವಾಲ್ ಜೊತೆ ಇವರು ನಟಿಸಿದ ಮಿ.ಫರ್​ಫೆಕ್ಟ್ ಚಿತ್ರ ಮೆಚ್ಚುಗೆ ಗಳಿಸಿತ್ತು.

6 / 7
ದಕ್ಷಿಣ ಭಾರತ ಚಿತ್ರರಂಗಕ್ಕೆ ಐಶ್ವರ್ಯಾ ರೈ ಹೊಸಬರೇನಲ್ಲ. ಈಗ ಅವರು ಮಣಿ ರತ್ನಂ ಅವರ ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ವಿಕ್ರಮ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಜಯಂ ರವಿ, ತ್ರಿಷಾ, ಕಾರ್ತಿ ಮೊದಲಾದವರು ನಟಿಸಲಿದ್ದಾರೆ. ಈ ಹಿಂದೆ ಮಣಿ ರತ್ನಂ ಅವರ ಕೆಲ ಚಿತ್ರಗಳಲ್ಲಿ, ಶಂಕರ್ ನಿರ್ದೇಶನದ ಚಿತ್ರಗಳಲ್ಲಿ ಐಶ್ವರ್ಯಾ ನಟಿಸಿದ್ದರು.

7 / 7

Published On - 3:44 pm, Thu, 5 August 21

Follow us
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ