AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ಇತ್ತೀಚೆಗೆ ನಡೆದ ಆರ್​​ಎಸ್​​ಎಸ್​​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಭಾಗವಹಿಸಿದ್ದರು. ಈ ವೇಳೆ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸಲ್ಮಾನ್ ಖಾನ್ ಅವರನ್ನು ಹೊಗಳಿದರು. ಅವರ ಈ ಮಾತು ವೈರಲ್ ಆಗಿದ್ದು, ಅನೇಕರು ಪ್ರತಿಕ್ರಿಯಿಸಿದ್ದಾರೆ. ಅಕ್ಷಯ್ ಕುಮಾರ್, ಕರಣ್ ಜೋಹರ್ ಸೇರಿದಂತೆ ಇಡೀ ಬಾಲಿವುಡ್ ಈ ಕಾರ್ಯಕ್ರಮದಲ್ಲಿ ಹಾಜರಿತ್ತು.

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್
ಮೋಹನ್ ಭಾಗ್ವತ್-ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Feb 09, 2026 | 2:54 PM

Share

ಇತ್ತೀಚೆಗೆ ನಡೆದ ಆರ್​​ಎಸ್​​ಎಸ್​​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಭಾಗಿ ಆಗಿದ್ದರು. ಮುಂಬೈನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ವೇಳೆ ಸ್ವಯಂ ಸೇವಕ್ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ.

ಆರ್​​ಎಸ್​​ಎಸ್​ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಬಾಲಿವುಡ್​​ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಈ ರೀತಿ ಭಾಗಿ ಆದವರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ವೇದಿಕೆ ಏರಿದ ಮೋಹನ್ ಭಾಗ್ವತ್ ಅವರ ಬಗ್ಗೆ ಮೆಚ್ಚುಗೆ ಸೂಚಿಸಿದರು. ‘ಸಲ್ಮಾನ್ ಖಾನ್ ಕಾಲೇಜು ವಿದ್ಯಾರ್ಥಿಗಳು ಹಾಗೆ ಬಟ್ಟೆ ಧರಿಸುತ್ತಾರೆ. ಅವರು ಅದನ್ನು ಏಕೆ ಧರಿಸುತ್ತಾರೆ ಗೊತ್ತಾ? ಅವರು ಅದನ್ನು ಧರಿಸಲೇಬೇಕು ಅದಕ್ಕೆ. ಸಲ್ಮಾನ್ ಇದನ್ನು ಏಕೆ ಧರಿಸುತ್ತಾರೆ? ಅದು ನನಗೆ ಗೊತ್ತಿಲ್ಲ’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.

‘ಒಳ್ಳೆಯದಿರಲಿ ಅಥವಾ ಕೆಟ್ಟದ್ದಾಗಿರಲಿ, ಅದನ್ನು ಮುನ್ನಡೆಸುವುದು ಫ್ಯಾಷನ್. ಫ್ಯಾಷನ್ ಅನ್ನು ಸೃಷ್ಟಿಸುವವರು ವಿಶ್ವಾಸಾರ್ಹರು, ಶ್ರೇಷ್ಠರು ಮತ್ತು ಗೌರವಕ್ಕೆ ಅರ್ಹರು ಎಂದು ಪರಿಗಣಿಸಲಾಗುತ್ತದೆ’ ಎಂದು ಅವರು ಹೇಳಿದ್ದಾರೆ. ಸಲ್ಮಾನ್ ಖಾನ್ ಅವರು ಈ ಮಾತುನ್ನು ಆಲಿಸುತ್ತಾ ಇದ್ದರು. ಅವರು ಇದಕ್ಕೆ ಪ್ರೀತಿಯಿಂದ ಮುಗುಳುನಗೆ ಬೀರಿದ್ದಾರೆ.

ಸಲ್ಮಾನ್ ಖಾನ್ ಅವರ ಬಗ್ಗೆ ಮೋಹನ್ ಭಾಗ್ವತ್ ಹೇಳಿದ ಮಾತು ಅನೇಕರಿಗೆ ಖುಷಿ ನೀಡಿದೆ. ಈ ಬಗ್ಗೆ ಎಲ್ಲರೂ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ‘ಸಲ್ಮಾನ್ ಖಾನ್ ಅವರ ರೀತಿ ಯಾರೂ ಇಲ್ಲ. ಅವರು ಸರಳ ವ್ಯಕ್ತಿತ್ವದ ಜೀವಿ’ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಸ್ಯಾಂಡ್​​ವಿಚ್​ ಆಗೋದನ್ನು ತಪ್ಪಿಸಿಕೊಳ್ಳಲು ನಿರ್ಧರಿಸಿದ ಸಲ್ಮಾನ್ ಖಾನ್

ಆರ್​​ಎಸ್​​ಎಸ್ ಕಾರ್ಯಕ್ರಮಕ್ಕೆ ಇಡೀ ಬಾಲಿವುಡ್ ಹಾಜರಿ ಹಾಕಿತ್ತು ಎಂದರೂ ತಪ್ಪಾಗಲಾರದು. ಸಲ್ಮಾನ್ ಖಾನ್ ಜೊತೆ, ಅಕ್ಷಯ್ ಕುಮಾರ್, ಕರಣ್ ಜೋಹರ್, ರವೀನಾ ಟಂಡನ್, ಅನನ್ಯಾ ಪಾಂಡೆ ಸೇರಿದಂತೆ ಅನೇಕರು ಹಾಜರಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್