ತೀವ್ರವಾಗಿ ಕುಸಿದ ‘ಬಾರ್ಡರ್ 2’ ಸಿನಿಮಾ ಕಲೆಕ್ಷನ್; ಮುಂದೇನು ಪರಿಸ್ಥಿತಿ?

‘ಧುರಂಧರ್’ ರೀತಿಯೇ ‘ಬಾರ್ಡರ್ 2’ ಕೂಡ ಕಲೆಕ್ಷನ್ ಮಾಡಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಆ ರೀತಿ ಆಗಿಲ್ಲ. ದಿನ ಕಳೆದಂತೆ ಈ ಸಿನಿಮಾದ ಕಲೆಕ್ಷನ್ ಗಣನೀಯವಾಗಿ ಕುಸಿಯಲು ಶುರುವಾಗಿದೆ. 11ನೇ ದಿನದಲ್ಲಿ ‘ಬಾರ್ಡರ್ 2’ ಕಲೆಕ್ಷನ್ ಒಂದಂಕಿಗೆ ಕುಸಿದಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ..

ತೀವ್ರವಾಗಿ ಕುಸಿದ ‘ಬಾರ್ಡರ್ 2’ ಸಿನಿಮಾ ಕಲೆಕ್ಷನ್; ಮುಂದೇನು ಪರಿಸ್ಥಿತಿ?
Border 2 Poster
Image Credit source: T-Series Films

Updated on: Feb 03, 2026 | 1:20 PM

ಬಹುತಾರಾಗಣ ಇರುವ ‘ಬಾರ್ಡರ್ 2’ ಸಿನಿಮಾ (Border 2 Movie) ಆರಂಭದಲ್ಲೇ ಜೋರಾಗಿ ಅಬ್ಬರಿಸಿತು. ದೇಶಭಕ್ತಿ ಕಥೆ ಹೊಂದಿರುವ ಈ ಚಿತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿತು. ಅದರ ಪರಿಣಾಮವಾಗಿ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಆಯಿತು. ಆದರೆ ಈಗ ಈ ಸಿನಿಮಾದ ಕಲೆಕ್ಷನ್ (Border 2 Collection) ಕುಸಿತ ಕಂಡಿದೆ. 11ನೇ ದಿನಕ್ಕೆ ಈ ಸಿನಿಮಾದ ಕಲೆಕ್ಷನ್ ತೀವ್ರವಾಗಿ ಕುಸಿದಿದೆ. ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ, ದಿಲ್ಜಿತ್ ದೊಸಾಂಜ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಮೊದಲ ದಿನ ‘ಬಾರ್ಡರ್ 2’ ಸಿನಿಮಾ 30 ಕೋಟಿ ರೂಪಾಯಿ ಗಳಿಸಿತ್ತು. 2ನೇ ದಿನ 36.5 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. ಮೂರನೇ ದಿನ 54.5 ಕೋಟಿ ರೂಪಾಯಿ ಗಳಿಕೆ ಆಯಿತು. 4ನೇ ದಿನ ಬರೋಬ್ಬರಿ 59 ಕೋಟಿ ರೂಪಾಯಿ ಆದಾಯ ಹರಿದುಬಂತು. ಆ ಬಳಿಕ ‘ಬಾರ್ಡರ್ 2’ ಸಿನಿಮಾದ ಕಲೆಕ್ಷನ್​​ನಲ್ಲಿ ಕುಸಿತ ಕಾಣಲು ಆರಂಭ ಆಯಿತು.

‘ಬಾರ್ಡರ್ 2’ ಚಿತ್ರದ ಕಲೆಕ್ಷನ್ 11ನೇ ದಿನಕ್ಕೆ ಒಂದಕ್ಕಿಗೆ ಕುಸಿದಿದೆ. Sacnilk ವರದಿ ಪ್ರಕಾರ 11ನೇ ದಿನ ಈ ಸಿನಿಮಾಗೆ ಕೇವಲ 5.75 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಆದ್ದರಿಂದ ಚಿತ್ರತಂಡಕ್ಕೆ ಮುಂದೇನು ಎಂಬ ಚಿಂತೆ ಶುರು ಆಗಿರುತ್ತದೆ. ವಾರಾಂತ್ಯದ ದಿನಗಳಲ್ಲಿ ಮಾತ್ರ ಸ್ವಲ್ಪ ಚೇತರಿಕೆ ಕಾಣುವ ಸಾಧ್ಯತೆ ಇರುತ್ತದೆ. ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ಈವರೆಗೂ ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಬಾರ್ಡರ್ 2’ ಸಿನಿಮಾಗೆ 281 ಕೋಟಿ ರೂಪಾಯಿ ಕಮಾಯಿ ಆಗಿದೆ. ಇದು ಉತ್ತಮ ಕಲೆಕ್ಷನ್ ಹೌದಾದರೂ ದೊಡ್ಡ ಮಟ್ಟದ ನಿರೀಕ್ಷೆಯನ್ನು ತಲುಪಿಲ್ಲ ಎನ್ನಬಹುದು. ವಿಮರ್ಶೆಯ ದೃಷ್ಟಿಯಿಂದ ನೋಡಿದರೆ ಪ್ರೇಕ್ಷಕರು ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ವಿಎಫ್​ಎಕ್ಸ್ ಗುಣಮಟ್ಟದ ಬಗ್ಗೆ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ‘ಬಾರ್ಡರ್ 2’ ಸಿನಿಮಾ ಯಶಸ್ಸು: ‘ಬಾರ್ಡರ್ 3’ ಬರೋದು ಖಚಿತ

‘ಧುರಂಧರ್’ ಸಿನಿಮಾದಲ್ಲಿ ಕೂಡ ದೇಶಭಕ್ತಿ ಕಥಾಹಂದರ ಇತ್ತು. ಆ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆ ಬಳಿಕ ರಿಲೀಸ್ ಆಗಿದ್ದೇ ‘ಬಾರ್ಡರ್ 2’ ಸಿನಿಮಾ. ಈ ಸಿನಿಮಾ ನೋಡಿದ ಎಲ್ಲರೂ ‘ಧುರಂದರ್’ ಜೊತೆ ಹೋಲಿಕೆ ಮಾಡಲು ಆರಂಭಿಸಿದರು. ಜನರಿಗೆ ‘ಧುರಂಧರ್’ ರೀತಿಯ ಗುಣಮಟ್ಟ ‘ಬಾರ್ಡರ್ 2’ ಸಿನಿಮಾದಲ್ಲಿ ಕಾಣಿಸಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us