Boycott Pathaan: ‘ಪಠಾಣ್​’ ಸಿನಿಮಾ ಬಹಿಷ್ಕಾರಕ್ಕೆ ಅಭಿಯಾನ ಶುರು; ಶಾರುಖ್​ ಚಿತ್ರಕ್ಕೆ ಸೋಲಿನ ಭಯ

Besharam Rang Song: ‘ಪಠಾಣ್​’ ಚಿತ್ರದಲ್ಲಿ ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಬಹಿಷ್ಕಾರದ ಬಿಸಿಯಿಂದಾಗಿ ಈ ಸಿನಿಮಾಗೆ ಸೋಲಿನ ಭಯ ಎದುರಾಗಿದೆ.

Boycott Pathaan: ‘ಪಠಾಣ್​’ ಸಿನಿಮಾ ಬಹಿಷ್ಕಾರಕ್ಕೆ ಅಭಿಯಾನ ಶುರು; ಶಾರುಖ್​ ಚಿತ್ರಕ್ಕೆ ಸೋಲಿನ ಭಯ
ಶಾರುಖ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on:Dec 15, 2022 | 9:23 AM

ನಟ ಶಾರುಖ್​ ಖಾನ್​ (Shah Rukh Khan) ಅವರು ಗಲ್ಲಾಪೆಟ್ಟಿಗೆಯಲ್ಲಿ ಗೆಲುವು ಕಾಣದೇ ಬಹಳ ವರ್ಷಗಳಾಗಿವೆ. 2018ರಲ್ಲಿ ಬಂದ ‘ಜೀರೋ’ ಸಿನಿಮಾ ಹೀನಾಯವಾಗಿ ಸೋತ ಬಳಿಕ ಅವರು ನಾಲ್ಕು ವರ್ಷ ಬ್ರೇಕ್​ ತೆಗೆದುಕೊಂಡರು. ಈಗ ‘ಪಠಾಣ್​’ ಚಿತ್ರದ (Pathaan Movie) ಮೂಲಕ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡಲು ಸಜ್ಜಾಗಿದ್ದಾರೆ. ಈ ಸಿನಿಮಾ 2023ರ ಜನವರಿ 25ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಆದರೆ ಅದಕ್ಕೂ ಮುನ್ನವೇ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಬೇಷರಂ ರಂಗ್​..’ (Besharam Rang) ಹಾಡು ಬಿಡುಗಡೆಯಾದ ಬೆನ್ನಲ್ಲೇ ಪರ-ವಿರೋಧದ ಚರ್ಚೆ ಜೋರಾಗಿದೆ. ಈ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂದು ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಲಾಗಿದೆ. ಟ್ವಿಟರ್​​ನಲ್ಲಿ #BoycottPathan ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ.

ಶಾರುಖ್​ ಖಾನ್​ ಅವರು ಏನೇ ಮಾಡಿದರೂ ಒಂದು ವರ್ಗದ ನೆಟ್ಟಿಗರು ಅದನ್ನು ವಿರೋಧಿಸುತ್ತಾರೆ. ಅದು ಅವರ ಸಿನಿಮಾಗಳ ಮೇಲೆ ನೇರ ಪರಿಣಾಮ ಬೀರುತ್ತಿದೆ. ಸಾಕಷ್ಟು ಕಷ್ಟಪಟ್ಟು ಶಾರುಖ್​ ಅವರು ‘ಪಠಾಣ್​’ ಚಿತ್ರ ಮಾಡಿದ್ದಾರೆ. ಇದರ ಮೇಲೆ ಅವರಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆದರೆ ಬಹಿಷ್ಕಾರದ ಬಿಸಿಯಿಂದಾಗಿ ಈ ಸಿನಿಮಾಗೆ ಸೋಲಿನ ಭಯ ಎದುರಾಗಿದೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ

ಸಿದ್ದಾರ್ಥ್​ ಆನಂದ್​ ಅವರು ‘ಪಠಾಣ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರದಲ್ಲಿ ಜಾನ್​ ಅಬ್ರಾಹಂ ಅಭಿನಯಿಸಿದ್ದಾರೆ. ಟೀಸರ್​ ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಫ್ಯಾನ್ಸ್​ಗೆ ‘ಬೇಷರಂ ರಂಗ್​..’ ಹಾಡು ಕೂಡ ಮೆಚ್ಚುಗೆ ಆಗಿದೆ. ಆದರೆ ಟ್ರೋಲ್​ ಮಾಡುವವರು ಮಾತ್ರ ಈ ಹಾಡನ್ನು ಟಾರ್ಗೆಟ್​ ಮಾಡಿದ್ದಾರೆ.

ಇದನ್ನೂ ಓದಿ: Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು

‘ಯಶ್​ ರಾಜ್​ ಫಿಲ್ಮ್ಸ್​’ ಬ್ಯಾನರ್​ ಮೂಲಕ ‘ಪಠಾಣ್​’ ಸಿನಿಮಾ ತಯಾರಾಗಿದೆ. ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಲಾಗಿದೆ. ಒಂದು ವೇಳೆ ಸಿನಿಮಾ ಸೋತರೆ ಎಲ್ಲ ಪ್ರಯತ್ನವೂ ನೀರಿನಲ್ಲಿ ಹೋಮ ಮಾಡಿದಂತೆ ಆಗಲಿದೆ. ‘ಬೇಷರಂ ರಂಗ್​..’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕಾಣಿಸಿಕೊಂಡ ರೀತಿ ಅಶ್ಲೀಲವಾಗಿದೆ ಎಂದು ಕೆಲವರು ತಕರಾರು ತೆಗೆದಿದ್ದಾರೆ.

ಸದ್ಯಕ್ಕಂತೂ ಬಾಲಿವುಡ್​ ಸಿನಿಮಾಗಳಿಗೆ ಟೈಮ್​ ಚೆನ್ನಾಗಿಲ್ಲ. ರಿಲೀಸ್​ ಆದ ಬಹುತೇಕ ಚಿತ್ರಗಳು ಸೋಲುತ್ತಿವೆ. ಈ ಸಮಯದಲ್ಲಿ ಬಹಿಷ್ಕಾರದ ಬಿಸಿ ಕೂಡ ತಟ್ಟಿದರೆ ಗಲ್ಲಾ ಪೆಟ್ಟಿಗೆ ಕಲೆಕ್ಷನ್​ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ‘ಪಠಾಣ್​’ ಚಿತ್ರದ ಭವಿಷ್ಯ ಏನಾಗಬಹುದು ಎಂಬ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:23 am, Thu, 15 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ