ಹಲವು ತಿಂಗಳಿನಿಂದ ಕಳೆಗುಂದಿದ್ದ ಹಿಂದಿ ಚಿತ್ರರಂಗಕ್ಕೆ (Bollywood) ಈಗ ಹೊಸ ಚೈತನ್ಯ ಬಂದಂತೆ ಆಗಿದೆ. ಎರಡೇ ದಿನದಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಬಲ್ಲಂತಹ ಸಿನಿಮಾಗಾಗಿ ಇಡೀ ಬಿ-ಟೌನ್ ಕಾದು ಕುಳಿತಿತ್ತು. ಅದನ್ನು ನಿಜ ಮಾಡುವ ರೀತಿಯಲ್ಲಿ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾ ಬಿಡುಗಡೆ ಆಗಿದೆ. ಸೆಪ್ಟೆಂಬರ್ 9ರಂದು ರಿಲೀಸ್ ಆದ ಈ ಚಿತ್ರ ವಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ವಿಮರ್ಶಕರು ಈ ಸಿನಿಮಾವನ್ನು ತೆಗಳಿದ್ದಾರೆ. ಆದರೆ ಬಾಕ್ಸ್ ಆಫೀಸ್ ಕಲೆಕ್ಷನ್ (Brahmastra Box Office Collection) ವಿಚಾರದಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ಹಿಂದೆ ಬಿದ್ದಿಲ್ಲ. ಎರಡು ದಿನಕ್ಕೆ ಈ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 160 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೂರನೇ ದಿನದ ಕಲೆಕ್ಷನ್ ಸೇರಿದರೆ ಅನಾಯಾಸವಾಗಿ 200 ಕೋಟಿ ರೂಪಾಯಿ ದಾಟಲಿದೆ ಎಂದು ಅಂದಾಜಿಸಲಾಗಿದೆ. ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರ ವೃತ್ತಿಜೀವನಕ್ಕೆ ಈ ಸಿನಿಮಾದಿಂದ ಬ್ರೇಕ್ ಸಿಕ್ಕಿದೆ.
ಅಯಾನ್ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಒಟ್ಟು ಮೂರು ಪಾರ್ಟ್ಗಳಲ್ಲಿ ಈ ಚಿತ್ರ ಬರಲಿದೆ. ಅದರಲ್ಲಿ ಮೊದಲ ಪಾರ್ಟ್ ಈಗ ಬಿಡುಗಡೆ ಆಗಿದೆ. ಅದ್ದೂರಿ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಮಾಯಿ ಆಗುತ್ತಿರುವುದಕ್ಕೆ ಚಿತ್ರತಂಡಕ್ಕೆ ಸಖತ್ ಖುಷಿ ಆಗಿದೆ.
ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರು ಈ ವರ್ಷ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಅವರಿಬ್ಬರು ಜೋಡಿಯಾಗಿ ನಟಿಸಿದ ಮೊದಲ ಸಿನಿಮಾ ‘ಬ್ರಹ್ಮಾಸ್ತ್ರ’. ಇಬ್ಬರ ಮೊದಲ ಕಾಂಬಿನೇಷನ್ಗೆ ಜನರು ಫಿದಾ ಆಗಿದ್ದಾರೆ. ವೀಕೆಂಡ್ನಲ್ಲಿ ಈ ಚಿತ್ರವನ್ನು ಪ್ರೇಕ್ಷಕರು ಮುಗಿಬಿದ್ದು ನೋಡಿದ್ದಾರೆ. ಅದರ ಪರಿಣಾಮವಾಗಿ ದೊಡ್ಡ ಮೊತ್ತದ ಕಲೆಕ್ಷನ್ ಆಗುತ್ತಿದೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್, ಅಕ್ಕಿನೇನಿ ನಾಗಾರ್ಜುನ ಮುಂತಾದ ಸ್ಟಾರ್ ಕಲಾವಿದರು ಅಭಿನಯಿಸಿದ್ದಾರೆ. ಶಾರುಖ್ ಖಾನ್ ಅವರು ಒಂದು ಅತಿಥಿ ಪಾತ್ರ ಮಾಡಿರುವುದು ವಿಶೇಷ.
ರಣಬೀರ್ ಕಪೂರ್ ಅವರು ನಟಿಸಿದ ‘ಶಂಷೇರಾ’ ಸಿನಿಮಾ ಈ ವರ್ಷ ತೆರೆಕಂಡು ಹೀನಾಯವಾಗಿ ಸೋತಿತ್ತು. ಆ ಬೇಸರವನ್ನು ಮರೆಸುವ ರೀತಿಯಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾದ ಕಲೆಕ್ಷನ್ ಆಗುತ್ತಿದೆ. ಇನ್ನು, ಆಲಿಯಾ ಭಟ್ ಅವರಿಗೆ ಈ ವರ್ಷ ‘ಗಂಗೂಬಾಯಿ ಕಾಠಿಯಾವಾಡಿ’, ‘ಆರ್ಆರ್ಆರ್’ ಸಿನಿಮಾದ ಬಳಿಕ ಸಿಗುತ್ತಿರುವ ಮೂರನೇ ಗೆಲುವು ಇದಾಗಿದೆ. ಕಳಪೆ ಗ್ರಾಫಿಕ್ಸ್ ಇದೆ ಎಂಬ ಕಾರಣಕ್ಕೆ ಒಂದು ವರ್ಗದ ಪ್ರೇಕ್ಷಕರು ‘ಬ್ರಹ್ಮಾಸ್ತ್ರ’ ಚಿತ್ರವನ್ನು ಜರಿದಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.