‘ಇಷ್ಟ ಇಲ್ಲ ಅಂದ್ರೆ ನನ್ನ ನೋಡ್ಬೇಡಿ’: ಕರೀನಾ ರೀತಿ ಹೇಳಿಕೆ ನೀಡಿ ಟ್ರೋಲ್​ ಆಗುತ್ತಿರುವ ಆಲಿಯಾ ಭಟ್​

Alia Bhatt | Boycott Bollywood: ‘ಎಷ್ಟು ದರ್ಪದಿಂದ ಆಲಿಯಾ ಭಟ್​ ಈ ರೀತಿ ಹೇಳಿದ್ದಾರೆ ನೋಡಿ. ಬ್ರಹ್ಮಾಸ್ತ್ರ ಸಿನಿಮಾವನ್ನು ಬಹಿಷ್ಕರಿಸೋಣ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

‘ಇಷ್ಟ ಇಲ್ಲ ಅಂದ್ರೆ ನನ್ನ ನೋಡ್ಬೇಡಿ’: ಕರೀನಾ ರೀತಿ ಹೇಳಿಕೆ ನೀಡಿ ಟ್ರೋಲ್​ ಆಗುತ್ತಿರುವ ಆಲಿಯಾ ಭಟ್​
ಆಲಿಯಾ ಭಟ್
Follow us
TV9 Web
| Updated By: ಮದನ್​ ಕುಮಾರ್​

Updated on:Aug 23, 2022 | 11:42 AM

ಭಾರತೀಯ ಚಿತ್ರರಂಗದಲ್ಲಿ ನಟಿ ಆಲಿಯಾ ಭಟ್ (Alia Bhatt)​ ದೊಡ್ಡ ಸಾಧನೆ ಮಾಡಿದ್ದಾರೆ. ತಮ್ಮದೇ ರೀತಿಯಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ಇಷ್ಟೆಲ್ಲ ಮಾಡಿದರೂ ಕೂಡ ಅವರಿಗೆ ಟ್ರೋಲ್​ ಕಾಟ ತಪ್ಪಿದ್ದಲ್ಲ. ಆಗಾಗ ಅವರನ್ನು ಜನರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಾರೆ. ಒಂದಷ್ಟು ವರ್ಷಗಳ ಹಿಂದೆ ಆಲಿಯಾ ಭಟ್​ ಅವರಿಗೆ ಸಾಮಾನ್ಯ ಜ್ಞಾನ ಇಲ್ಲ ಎಂಬ ಕಾರಣಕ್ಕೆ ಜನರು ಕಟು ಟೀಕೆ ಮಾಡಿದ್ದರು. ನಂತರ ನೆಪೋಟಿಸಂ ಕಾರಣದಿಂದ ಟ್ರೋಲ್​ (Troll) ಮಾಡಿದರು. ಈಗ ಒಂದೇ ಒಂದು ಹೇಳಿಕೆ ನೀಡಿ ಆಲಿಯಾ ಅವರು ನೆಟ್ಟಿಗರ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾ (Brahmastra) ಬಿಡುಗಡೆಗೆ ಸಜ್ಜಾಗುತ್ತಿರುವ ಈ ಹೊತ್ತಿನಲ್ಲಿ ಆಲಿಯಾ ಭಟ್​ ಅನಗತ್ಯವಾಗಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಬಾಲಿವುಡ್​ ಮಂದಿಗೆ ಈಗ ಬಹಿಷ್ಕಾರದ ಭಯ ಕಾಡುತ್ತಿದೆ. ದಕ್ಷಿಣ ಭಾರತದ ಸಿನಿಮಾಗಳ ಎದುರಿನಲ್ಲಿ ಹಿಂದಿ ಸಿನಿಮಾಗಳು ಸೋಲುತ್ತಿವೆ. ಅದರ ಜೊತೆಯಲ್ಲೇ ಬಾಲಿವುಡ್​ನ ಅನೇಕ ಸ್ಟಾರ್​ ಕಲಾವಿದರ ಸಿನಿಮಾಗಳನ್ನು ಜನರು ಬಹಿಷ್ಕರಿಸುತ್ತಿದ್ದಾರೆ. #BoycottBollywood ಎಂಬ ಟ್ರೆಂಡ್​ ಜೋರಾಗಿದೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಆಲಿಯಾ ಭಟ್​ ಅವರು ಜನರನ್ನು ಕೆಣಕುವಂತಹ ಹೇಳಿಕೆ ನೀಡಿದ್ದಾರೆ.

‘ನಾನು ಏನು ಎಂಬುದನ್ನು ಪದೇಪದೇ ಕೂಗಿ ಹೇಳಲು ಸಾಧ್ಯವಿಲ್ಲ. ನಿಮಗೆ ನಾನು ಇಷ್ಟ ಎಲ್ಲ ಎಂದಾದರೆ ನನ್ನನ್ನು ನೋಡಬೇಡಿ’ ಎಂದು ಆಲಿಯಾ ಭಟ್​ ಹೇಳಿದ್ದಾರೆ. ಈ ಮೊದಲು ಕರೀನಾ ಕಪೂರ್ ಖಾನ್ ಕೂಡ ಇದೇ ರೀತಿ ಹೇಳಿಕೆ ನೀಡಿ ಟ್ರೋಲ್​ಗೆ ಒಳಗಾಗಿದ್ದರು. ಈಗ ಆಲಿಯಾ ಭಟ್​ ಅವರನ್ನು ಜನರು ಕಮೆಂಟ್​ಗಳ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Image
Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
Image
ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?

‘ಎಷ್ಟು ದರ್ಪದಿಂದ ಆಲಿಯಾ ಭಟ್​ ಈ ರೀತಿ ಹೇಳಿದ್ದಾರೆ ನೋಡಿ. ಅವರು ಹೇಳಿದನ್ನು ನಾವು ಸವಾಲು ಅಂತ ಸ್ವೀಕರಿಸೋಣ. ಬ್ರಹ್ಮಾಸ್ತ್ರ ಸಿನಿಮಾವನ್ನು ಬಹಿಷ್ಕರಿಸೋಣ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಬಹಿಷ್ಕಾರದ ಟ್ರೆಂಡ್​ನಿಂದಾಗಿ ಬಾಲಿವುಡ್​ ಸೆಲೆಬ್ರಿಟಿಗಳಿಗೆ ತಲೆ ಹಾಳಾಗಿದೆ ಎನಿಸುತ್ತದೆ. ನಿಮ್ಮ ಆಯ್ಕೆಯಂತೆಯೇ ಆಗಲಿ ಆಲಿಯಾ’ ಎಂದು ವ್ಯಕ್ತಿಯೊಬ್ಬರು ವ್ಯಂಗ್ಯವಾಡಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿರುವಾಗ ಆಲಿಯಾ ಇಂಥ ಹೇಳಿಕೆ ನೀಡಬಾರದಿತ್ತು ಎಂದು ಜನರು ಅಭಿಪ್ರಾಯ ಪಟ್ಟಿದ್ದಾರೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್​ ಜೋಡಿಯಾಗಿ ನಟಿಸಿರುವ ‘ಬ್ರಹ್ಮಾಸ್ತ್ರ’ ಸಿನಿಮಾ ಸೆಪ್ಟೆಂಬರ್​ 9ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಮಾಡಿದ್ದಾರೆ. ಕಳಪೆ ಗ್ರಾಫಿಕ್ಸ್​ ಕಾರಣದಿಂದ ಈ ಚಿತ್ರದ ಟ್ರೇಲರ್​ ಕೂಡ ಟೀಕೆಗೆ ಒಳಗಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:42 am, Tue, 23 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ