Ranbir Kapoor: ‘ಬ್ರಹ್ಮಾಸ್ತ್ರ’ ಸಿನಿಮಾಗಾಗಿ ತ್ರಿಶೂಲ ಹಿಡಿದು ಭಿನ್ನ ಅವತಾರ ತಾಳಿದ ರಣಬೀರ್​ ಕಪೂರ್​

Brahmastra Motion Poster: ಈ ಸಿನಿಮಾ ಮೂರು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಮೊದಲ ಭಾಗವಾಗಿ ‘ಬ್ರಹ್ಮಾಸ್ತ್ರ ಭಾಗ ಒಂದು​: ಶಿವ’ ತೆರೆಗೆ ಬರುತ್ತಿದೆ. ರಣಬೀರ್​ ಕಪೂರ್​ ಶಿವನಾಗಿ ಕಾಣಿಸಿಕೊಂಡಿದ್ದಾರೆ.

Ranbir Kapoor: ‘ಬ್ರಹ್ಮಾಸ್ತ್ರ’ ಸಿನಿಮಾಗಾಗಿ ತ್ರಿಶೂಲ ಹಿಡಿದು ಭಿನ್ನ ಅವತಾರ ತಾಳಿದ ರಣಬೀರ್​ ಕಪೂರ್​
ರಣಬೀರ್​ ಕಪೂರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 15, 2021 | 7:46 PM

ನಟ ರಣಬೀರ್​ ಕಪೂರ್ (Ranbir Kapoor) ​ ಹಾಗೂ ಆಲಿಯಾ ಭಟ್ (Alia Bhatt)​ ನಿಜ ಜೀವನದಲ್ಲಿ ಪರಸ್ಪರ ಪ್ರೀತಿಸುತ್ತಿದ್ದಾರೆ. ಅಚ್ಚರಿ ಎಂದರೆ, ಇವರ ನಟನೆಯ ಒಂದೇಒಂದು ಸಿನಿಮಾ ಕೂಡ ತೆರೆಗೆ ಬಂದಿಲ್ಲ. ಇವರು ಒಟ್ಟಾಗಿ ನಟಿಸುತ್ತಿರುವ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾದ ಕೆಲಸಗಳು ಸಾಕಷ್ಟು ವಿಳಂಬವಾಗಿದೆ. ಚಿತ್ರ ಸೆಟ್ಟೇರಿ ಕೆಲ ವರ್ಷಗಳೇ ಕಳೆದರೂ ಸಿನಿಮಾ ಮಾತ್ರ ಪೂರ್ಣಗೊಂಡಿಲ್ಲ. ಚಿತ್ರತಂಡ ಕೂಡ ಈ ಬಗ್ಗೆ ಅಪ್ಡೇಟ್​ ನೀಡಿರಲಿಲ್ಲ. ಈಗ ಈ ಚಿತ್ರದ ಮೋಷನ್​ ಪೋಸ್ಟರ್​ (Brahmastra Motion Poster) ರಿಲೀಸ್​ ಆಗಿದೆ. ಇದನ್ನು ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಈ ಸಿನಿಮಾ ಮೂರು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಮೊದಲ ಭಾಗವಾಗಿ ‘ಬ್ರಹ್ಮಾಸ್ತ್ರ ಭಾಗ ಒಂದು​: ಶಿವ’ ತೆರೆಗೆ ಬರುತ್ತಿದೆ. ರಣಬೀರ್​ ಕಪೂರ್​ ಶಿವನಾಗಿ ಕಾಣಿಸಿಕೊಂಡಿದ್ದಾರೆ. ಇಂದು ರಿಲೀಸ್​ ಆದ ಮೋಷನ್​ ಪೋಸ್ಟರ್​ನಲ್ಲಿ ತ್ರಿಶೂಲ ಹಿಡಿದು ಕಾಣಿಸಿಕೊಂಡಿದ್ದಾರೆ. ಅವರ ಹಿಂದೆ ಶಿವನ ವಿಗ್ರಹ ಇದೆ. ಸದ್ಯ, ಈ ಪೋಸ್ಟರ್​ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

‘ಈಶಾ ವಿಶ್ವದಲ್ಲಿ ಏನೋ ನಡೆಯುತ್ತಿದೆ. ಇದು ಸಾಮಾನ್ಯ ಜೀವಿಗಳ ತಿಳುವಳಿಕೆಯನ್ನು ಮೀರಿದೆ’ ಎಂದು ರಣಬೀರ್​ ಕಪೂರ್​​ ಮೋಷನ್​ ಪೋಸ್ಟರ್​ನಲ್ಲಿ ಹೇಳಿದ್ದಾರೆ. ಅಂದಹಾಗೆ, ಈ ಸಿನಿಮಾ 2022ರ ಸೆಪ್ಟೆಂಬರ್ 9ರಂದು ತೆರೆಗೆ ಬರುತ್ತಿದೆ.

ಈ ಚಿತ್ರಕ್ಕೆ ಆಲಿಯಾ ಭಟ್​ ನಾಯಕಿ. ಅಮಿತಾಭ್​ ಬಚ್ಚನ್​, ನಾಗಾರ್ಜುನ, ಮೌನಿ ರಾಯ್​ ಮತ್ತು ಡಿಂಪಲ್​ ಕಪಾಡಿಯ ಮೊದಲಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಮತ್ತು ಫಾಕ್ಸ್ ಸ್ಟಾರ್ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ತೆರೆ ಕಾಣಲಿದೆ. ಸಿನಿಮಾ ವಿಳಂಬವಾಗುವ ಬಗ್ಗೆ ಈ ಮೊದಲು ಮಾತನಾಡಿದ್ದ ಆಲಿಯಾ ಭಟ್​, ‘ಇದೊಂದು ವಿಭಿನ್ನ ಚಿತ್ರ. ಉತ್ತಮ ಚಿತ್ರ ಹೆಚ್ಚು ಸಮಯವನ್ನು ಬೇಡುತ್ತದೆ’ ಎಂದಿದ್ದರು.

ಇದನ್ನೂ ಓದಿ: ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ

ಕತ್ರಿನಾ ಕೈಫ್​ಗೆ ಗಿಫ್ಟ್​ ಕೊಡೋಕೆ ಕೋಟಿಕೋಟಿ ಖರ್ಚು ಮಾಡಿದ ಸಲ್ಮಾನ್​, ರಣಬೀರ್​?

Published On - 7:45 pm, Wed, 15 December 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ