ಬಾಕ್ಸ್ ಆಫೀಸ್ ಕಲೆಕ್ಷನ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ಹಿಂದಿಕ್ಕಲಿದೆ ‘ಬ್ರಹ್ಮಾಸ್ತ್ರ’ ಸಿನಿಮಾ; ಸೈಲೆಂಟ್ ಆಯ್ತು ಬಾಯ್ಕಾಟ್ ಟ್ರೆಂಡ್

ಸೆಪ್ಟೆಂಬರ್ 17ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​ನಲ್ಲಿ 16.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 197 ಕೋಟಿ ರೂಪಾಯಿ ಆಗಿದೆ.

ಬಾಕ್ಸ್ ಆಫೀಸ್ ಕಲೆಕ್ಷನ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ಹಿಂದಿಕ್ಕಲಿದೆ ‘ಬ್ರಹ್ಮಾಸ್ತ್ರ’ ಸಿನಿಮಾ; ಸೈಲೆಂಟ್ ಆಯ್ತು ಬಾಯ್ಕಾಟ್ ಟ್ರೆಂಡ್
ಕಾಶ್ಮೀರ್ ಫೈಲ್ಸ್-ಬ್ರಹ್ಮಾಸ್ತ್ರ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 18, 2022 | 10:59 AM

ರಣಬೀರ್ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾಗೆ (Brahmastra Movie) ರಿಲೀಸ್​ಗೂ ಮೊದಲೇ ಸಂಕಷ್ಟ ಎದುರಾಗಿತ್ತು. ಈ ಸಿನಿಮಾಗೆ ಬಾಯ್ಕಾಟ್ ಟ್ರೆಂಡ್​​ನ ಬೆದರಿಕೆ ಇತ್ತು. ಇದಕ್ಕೆ ಕಾರಣ ಆಗಿದ್ದು ಆಲಿಯಾ ಹಾಗೂ ರಣಬೀರ್ ಹೇಳಿಕೆ. ‘ನಿಮಗೆ ಇಷ್ಟವಿಲ್ಲದಿದ್ದರೆ ಸಿನಿಮಾ ನೋಡಬೇಡಿ’ ಎಂದು ಆಲಿಯಾ ಹೇಳಿದ್ದರು. ಇನ್ನು, ರಣಬೀರ್ ಕಪೂರ್ ಅವರು ಗೋಮಾಂಸ ತಿನ್ನುತ್ತೇನೆ ಎಂದು ಒಪ್ಪಿಕೊಂಡ ಹೇಳಿಕೆ ವೈರಲ್ ಆಗಿತ್ತು. ಇವೆರಡು ವಿಚಾರಗಳನ್ನು ಇಟ್ಟುಕೊಂಡು ಸಿನಿಮಾ ಬ್ಯಾನ್ ಮಾಡುವ ಆಗ್ರಹ ಕೇಳಿ ಬಂದಿತ್ತು. ಆದರೆ, ಅಚ್ಚರಿ ಎಂಬಂತೆ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಭಾನುವಾರದ (ಸೆಪ್ಟೆಂಬರ್ 18) ಕಲೆಕ್ಷನ್ ಸೇರಿದರೆ ಈ ಚಿತ್ರದ ಕಲೆಕ್ಷನ್ 200+ ಕೋಟಿ ರೂ. (ಭಾರತದ ಬಾಕ್ಸ್ ಆಫೀಸ್ ಲೆಕ್ಕಾಚಾರ) ಆಗಲಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಇದರ ಜತೆಗೆ ಬಾಯ್ಕಾಟ್ ಟ್ರೆಂಡ್ ಸೈಲೆಂಟ್ ಆಗಿದೆ.

‘ಬ್ರಹ್ಮಾಸ್ತ್ರ’ ಸಿನಿಮಾ ಬಾಲಿವುಡ್​ನಲ್ಲಿ ಗೆಲುವಿನ ನಗೆ ಬೀರಿದೆ. ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ತೆರೆಗೆ ಬಂದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 250+ ಕೋಟಿ ಕಲೆಕ್ಷನ್ ಮಾಡಿದ್ದು ಹೊರತುಪಡಿಸಿ ಮತ್ತಾವ ಚಿತ್ರವೂ ದೊಡ್ಡ ಗಳಿಕೆ ಮಾಡಿಲ್ಲ. ಈಗ ‘ಬ್ರಹ್ಮಾಸ್ತ್ರ’ ಸಿನಿಮಾ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ದಾಖಲೆ ಮುರಿಯಲು ರೆಡಿ ಆಗಿದೆ.

ಸೆಪ್ಟೆಂಬರ್ 17ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​ನಲ್ಲಿ 16.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 197 ಕೋಟಿ ರೂಪಾಯಿ ಆಗಿದೆ. ಇಂದಿನ ಕಲೆಕ್ಷನ್ ಸೇರಿದರೆ ಸಿನಿಮಾದ ಒಟ್ಟೂ ಕಲೆಕ್ಷನ್ 215 ಕೋಟಿ ರೂಪಾಯಿ ದಾಟಬಹುದು. ಮುಂದಿನ ದಿನಗಳಲ್ಲಿ ಸಿನಿಮಾದ ಗಲ್ಲಾಪಟ್ಟಿಗೆ ಗಳಿಕೆ ಇದೇ ರೀತಿ ಇದ್ದರೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಈ ಚಿತ್ರ ಹಿಂದಿಕ್ಕಲಿದೆ.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಇದನ್ನೂ ಓದಿ: ರಣಬೀರ್ ನಟನೆಯ ‘ಬ್ರಹ್ಮಾಸ್ತ್ರ’ ಗೆಲುವಿನಲ್ಲಿ ಆಲಿಯಾ ಭಟ್​ಗಿಲ್ಲ ಪಾಲು; ಯಾಕೀ ತಾರತಮ್ಯ?

ಅಯಾನ್ ಮುಖರ್ಜಿ ನಿರ್ದೇಶನದ ‘ಬ್ರಹ್ಮಾಸ್ತ್ರ’ ಸಿನಿಮಾದ ಗ್ರಾಫಿಕ್ಸ್ ಬಗ್ಗೆ ಹಲವರಿಂದ ಟೀಕೆ ವ್ಯಕ್ತವಾಗಿತ್ತು. ಈ ಸಿನಿಮಾ ಒಳ್ಳೆಯ ಗಳಿಕೆ ಮಾಡುವುದಿಲ್ಲ ಎಂದೇ ಹೇಳಲಾಗಿತ್ತು. ಆದರೆ, ಅಚ್ಚರಿಯ ರೀತಿಯಲ್ಲಿ ಸಿನಿಮಾ ಗಳಿಕೆ ಮಾಡುತ್ತಿದೆ. ಈ ಚಿತ್ರ ವಿಶ್ವ ಬಾಕ್ಸ್​ಆಫೀಸ್​ನಲ್ಲಿ ಈಗಾಗಲೇ 300+ ಕೋಟಿ ರೂಪಾಯಿ ಬಾಚಿಕೊಂಡಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ