Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರಹ್ಮಾಸ್ತ್ರ 2’ ಸೆಟ್ಟೇರಿತಾ? ವೈರಲ್ ಆಗುತ್ತಿದೆ ದೀಪಿಕಾ-ರಣಬೀರ್ ಕಪೂರ್ ಪೋಸ್ಟರ್

‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್ ಆಗಿ ವರ್ಷದ ಮೇಲಾಗಿದೆ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಅಯಾನ್ ಮುಖರ್ಜಿ ಅವರು.  ಸದ್ಯ ಅವರು ‘ವಾರ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ರಿಲೀಸ್ ಆಗೋದು 2025ರಲ್ಲಿ! ‘ಬ್ರಹ್ಮಾಸ್ತ್ರ: ಪಾರ್ಟ್ 2- ದೇವ್’ ರಿಲೀಸ್ ಆಗೋದು 2026ರಲ್ಲಿ!

‘ಬ್ರಹ್ಮಾಸ್ತ್ರ 2’ ಸೆಟ್ಟೇರಿತಾ? ವೈರಲ್ ಆಗುತ್ತಿದೆ ದೀಪಿಕಾ-ರಣಬೀರ್ ಕಪೂರ್ ಪೋಸ್ಟರ್
ದೀಪಿಕಾ-ರಣಬೀರ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Oct 03, 2023 | 3:25 PM

‘ಬ್ರಹ್ಮಾಸ್ತ್ರ: ಶಿವ ಪಾರ್ಟ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರಕ್ಕೆ ಎರಡನೇ ಪಾರ್ಟ್ ಸಿದ್ಧಗೊಳ್ಳಬೇಕಿದೆ. ಅದಕ್ಕೂ ಮೊದಲೇ ಫ್ಯಾನ್ ಮೇಡ್​​ ಪೋಸ್ಟರ್ ಒಂದು ವೈರಲ್ ಆಗಿದೆ. ಈ ಪೋಸ್ಟರ್​ನಲ್ಲಿ ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ಅವರು ಗಮನ ಸೆಳೆದಿದ್ದಾರೆ.

‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್ ಆಗಿ ವರ್ಷದ ಮೇಲಾಗಿದೆ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಅಯಾನ್ ಮುಖರ್ಜಿ ಅವರು.  ಸದ್ಯ ಅವರು ‘ವಾರ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ರಿಲೀಸ್ ಆಗೋದು 2025ರಲ್ಲಿ! ‘ಬ್ರಹ್ಮಾಸ್ತ್ರ: ಪಾರ್ಟ್ 2- ದೇವ್’ ರಿಲೀಸ್ ಆಗೋದು 2026ರಲ್ಲಿ! ಅಂದರೆ ಇದಕ್ಕೆ ಇನ್ನೂ ಮೂರು ವರ್ಷ ಸಮಯ ಇದೆ. ಹೀಗಾಗಿ, ಸದ್ಯಕ್ಕಂತೂ ಈ ಚಿತ್ರದ ಬಗ್ಗೆ ಅಪ್​ಡೇಟ್ ಸಿಗೋದು ಅನುಮಾನವೇ. ಆದರೆ, ಕೆಲ ಅಭಿಮಾನಿಗಳಿಗೆ ಸುಮ್ಮನೆ ಕೂರೋಕೆ ಸಾಧ್ಯವಾಗುತ್ತಿಲ್ಲ.

ಈ ಚಿತ್ರದ ಬಗ್ಗೆ ಏನಾದರೂ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಕಾರಣದಿಂದಲೇ ಕೆಲವರು ತಾವೇ ಪೋಸ್ಟರ್ ಮಾಡಿ ಹರಿಬಿಡುತ್ತಿದ್ದಾರೆ. ‘ಬ್ರಹ್ಮಾಸ್ತ್ರ ಸೀಕ್ವೆಲ್​ನಲ್ಲಿ ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ಅವರು ದೇವ್ ಮತ್ತು ಅಮೃತಾ ಆಗಿ ಕಾಣಿಸಿಕೊಳ್ಳಲಿದ್ದಾರೆ’ ಎಂದು ಪೋಸ್ಟರ್​ಗೆ ಕ್ಯಾಪ್ಶನ್ ನೀಡಲಾಗಿದೆ. ಇದು ನಿಜವಾದ ಪೋಸ್ಟರ್ ಎಂದು ಅನೇಕರು ನಂಬಿದ್ದಾರೆ. ಇದಕ್ಕೆ ಸಾವಿರಾರು ಲೈಕ್ಸ್ ಸಿಕ್ಕಿದೆ.

‘ಆಲಿಯಾ ಹಾಗೂ ರಣಬೀರ್ ಕಪೂರ್ ಕೆಮಿಸ್ಟ್ರಿ ಇಷ್ಟವಾಗಿದೆ. ಈಗ ಮತ್ತೊಮ್ಮೆ ರಣಬೀರ್ ಹಾಗೂ ದೀಪಿಕಾ ಕೆಮಿಸ್ಟ್ರಿ ನೋಡಲು ಕಾದಿದ್ದೇವೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಈ ಪೋಸ್ಟರ್​ಗೆ ಅಯಾನ್ ಮುಖರ್ಜಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

View this post on Instagram

A post shared by DEEPIKA NATION! (@pikag0d)

ಅಯಾನ್ ಮುಖರ್ಜಿ ಅವರು ಈವರೆಗೆ ನಿರ್ದೇಶನ ಮಾಡಿದ್ದು ಕೇವಲ ಮೂರು ಚಿತ್ರವನ್ನು. ವಿಶೇಷ ಎಂದರೆ ಈ ಮೂರು ಸಿನಿಮಾಗಳನ್ನು ಅವರು ರಣಬೀರ್ ಕಪೂರ್ ಜೊತೆಯೇ ಮಾಡಿದ್ದಾರೆ. ‘ಬ್ರಹ್ಮಾಸ್ತ್ರ’ ಸೂಪರ್ ಹಿಟ್ ಆದ ಬಳಿಕ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ‘ವಾರ್’ ಸಿನಿಮಾಗೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಿದ್ದರು. ಈ ಚಿತ್ರದ ಸೀಕ್ವೆಲ್​ ಆಫರ್ ಅಯಾನ್ ಮುಖರ್ಜಿ ಪಾಲಾಗಿದೆ.

ಇದನ್ನೂ ಓದಿ: ರಣಬೀರ್ ಕಪೂರ್ ಒಟ್ಟೂ ಆಸ್ತಿ ಎಷ್ಟು? ಎಲ್ಲಿಂದ ಬಂತು ಇಷ್ಟೊಂದು ಹಣ?

ಇನ್ನು ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಡಿಸೆಂಬರ್ 1ರಂದು ಸಿನಿಮಾ ರಿಲೀಸ್ ಆಗಲಿದೆ. ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿ. ದೀಪಿಕಾ ಅವರು ‘ಫೈಟರ್’ ಮೊದಲಾದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್