AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?

Brahmastra Part 1 Shiva: ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ರಣಬೀರ್​ ಕಪೂರ್​, ಆಲಿಯಾ ಭಟ್, ಅಮಿತಾಭ್​ ಬಚ್ಚನ್​, ಮೌನಿ ರಾಯ್​, ಅಕ್ಕಿನೇನಿ ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಇದರ ಟ್ರೇಲರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
ರಣಬೀರ್ ಕಪೂರ್
TV9 Web
| Edited By: |

Updated on:Jun 15, 2022 | 1:20 PM

Share

ಹಿಂದಿ ಪ್ರೇಕ್ಷಕರು ‘ಬ್ರಹ್ಮಾಸ್ತ್ರ’ (Brahmastra Part 1: Shiva) ಸಿನಿಮಾಗಾಗಿ ಕಾದಿದ್ದಾರೆ. ಭಾರಿ ನಿರೀಕ್ಷೆ ಮೂಡಿಸಿರುವ ಈ ಚಿತ್ರದ ಟ್ರೇಲರ್​ ಇಂದು (ಜೂನ್​ 15) ಬಿಡುಗಡೆ ಆಗಿದೆ. ಸಿನಿಮಾದ ಕಥೆ ಏನು ಎಂಬುದರ ಸುಳಿವನ್ನು ಈ ಟ್ರೇಲರ್​ನಲ್ಲಿ ಬಿಟ್ಟುಕೊಡಲಾಗಿದೆ. ನಟ ರಣಬೀರ್​ ಕಪೂರ್​ (Ranbir Kapoor) ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ಜೋಡಿ ಆಗಿರುವುದು ಖ್ಯಾತ ನಟಿ ಆಲಿಯಾ ಭಟ್​ (Alia Bhatt). ಇವರಿಬ್ಬರು ರಿಯಲ್​ ಲೈಫ್​ನಲ್ಲಿ ದಂಪತಿಗಳಾಗಿರುವುದರಿಂದ ಪ್ರೇಕ್ಷಕರಿಗೆ ಈ ಕಾಂಬಿನೇಷನ್​ ಹೆಚ್ಚು ಇಷ್ಟವಾಗುತ್ತಿದೆ. ಅಯಾನ್​ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಸ್ಟಾರ್​ ಸ್ಟುಡಿಯೋ’, ‘ಧರ್ಮ ಪ್ರೊಡಕ್ಷನ್ಸ್​’, ‘ಪ್ರೈಂ ಫೋಕಸ್​’ ಮತ್ತು ‘ಸ್ಟಾರ್​ ಲೈಟ್​ ಪಿಕ್ಚರ್ಸ್​’ ಸಂಸ್ಥೆಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿವೆ. ಸದ್ಯ ಬಿಡುಗಡೆ ಆಗಿರುವ ಟ್ರೇಲರ್​ ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದೊಂದು ಫ್ಯಾಂಟಸಿ ಸಿನಿಮಾ. ಅತಿಮಾನುಷ ಶಕ್ತಿ ಹೊಂದಿರುವ ಶಿವ ಎಂಬ ವ್ಯಕ್ತಿಯಾಗಿ ರಣಬೀರ್​ ಕಪೂರ್​ ಕಾಣಿಸಿಕೊಳ್ಳಲಿದ್ದಾರೆ. ಬೆಂಕಿಯ ಜೊತೆ ಶಿವನಿಗೆ ಒಂದು ವಿಶೇಷವಾದ ಕನೆಕ್ಷನ್​ ಇದೆ. ಆತನನ್ನು ಬೆಂಕಿ ಸುಡುವುದಿಲ್ಲ. ಹಾಗಾದರೆ ಅವನ ಹಿನ್ನೆಲೆ ಏನು? ಇಂಥ ಶಕ್ತಿ ಆತನಿಗೆ ಬಂದಿದ್ದು ಹೇಗೆ? ಅವನ ಹಿಂದೆ ದುಷ್ಟಶಕ್ತಿಗಳು ಯಾಕೆ ಬೆನ್ನುಬಿದ್ದಿವೆ ಎಂಬಿತ್ಯಾದಿ ಕೌತುಕದ ಪ್ರಶ್ನೆಗಳನ್ನು ಮೂಡಿಸುವಲ್ಲಿ ಈ ‘ಬ್ರಹ್ಮಾಸ್ತ್ರ’ ಟ್ರೇಲರ್ ಯಶಸ್ವಿ ಆಗಿದೆ.

‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ರಣಬೀರ್​ ಕಪೂರ್​, ಆಲಿಯಾ ಭಟ್​ ಮಾತ್ರವಲ್ಲದೇ ಅಮಿತಾಭ್​ ಬಚ್ಚನ್​, ಮೌನಿ ರಾಯ್​, ಅಕ್ಕಿನೇನಿ ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಅತಿಥಿ ಪಾತ್ರದಲ್ಲಿ ಶಾರುಖ್​ ಖಾನ್​ ಅವರು ಕಾಣಿಸಿಕೊಳ್ಳಲಿರುವುದು ವಿಶೇಷ. ಇಡೀ ಟ್ರೇಲರ್​ನಲ್ಲಿ ಗ್ರಾಫಿಕ್ಸ್​ ದೃಶ್ಯಗಳು ಹೈಲೈಟ್​ ಆಗಿವೆ. ಅದನ್ನು ದೊಡ್ಡ ಪರದೆ ಮೇಲೆ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ
Image
ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?
Image
‘ರಣಬೀರ್​-ಆಲಿಯಾ ಒಟ್ಟಾಗಿ ನನ್ನ ಸಿನಿಮಾವನ್ನು ಹಾಳು ಮಾಡುತ್ತಿದ್ದಾರೆ ಅನಿಸುತ್ತಿತ್ತು; ‘ಬ್ರಹ್ಮಾಸ್ತ್ರ’ ನಿರ್ದೇಶಕ 
Image
ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​
Image
Ranbir Kapoor: ಅಂಗಾಂಗ ದಾನ ಮಾಡಲು ನಿರ್ಧರಿಸಿದ ಬ್ರಹ್ಮಾಸ್ತ್ರ ಚಿತ್ರತಂಡ

ಸೆಪ್ಟೆಂಬರ್​ 9ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್​ ಆಗಲಿದೆ. ಮೂರು ಪಾರ್ಟ್​ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ ಪಾರ್ಟ್​ 1: ಶಿವ’ ಎಂದು ಶೀರ್ಷಿಕೆ ಇಡಲಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಇದು ರಿಲೀಸ್​ ಆಗಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಮುಂತಾದ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:20 pm, Wed, 15 June 22

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್