AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಸಾಯ್ತು ಎಂದು ಟೀಕಿಸಿದವರಿಗೆ ಖಡಕ್ ಉತ್ತರ ಕೊಟ್ಟ ಸಲ್ಮಾನ್ ಖಾನ್

ಇತ್ತೀಚೆಗೆ ಸಲ್ಮಾನ್ ಖಾನ್ ಅವರ ಕೆಲವು ವಿಡಿಯೋಗಳನ್ನು ನೋಡಿ ನೆಟ್ಟಿಗರು ಟ್ರೋಲ್ ಮಾಡಿದ್ದರು. ಸಲ್ಮಾನ್ ಖಾನ್ ಅವರಿಗೆ ವಯಸ್ಸು ಆಯ್ತು ಎಂದು ಒಂದಷ್ಟು ಜನರು ಲೇವಡಿ ಮಾಡಿದ್ದರು. ಆದರೆ ಅಂಥವರಿಗೆಲ್ಲ ಈ ಫೋಟೋಗಳ ಮೂಲಕ ಸಲ್ಮಾನ್ ಖಾನ್ ಖಡಕ್ ತಿರುಗೇಟು ನೀಡಿದ್ದಾರೆ. ಅವರ ಹೊಸ ಫೋಟೋಗಳು ವೈರಲ್ ಆಗಿವೆ.

ವಯಸ್ಸಾಯ್ತು ಎಂದು ಟೀಕಿಸಿದವರಿಗೆ ಖಡಕ್ ಉತ್ತರ ಕೊಟ್ಟ ಸಲ್ಮಾನ್ ಖಾನ್
Salman Khan
ಮದನ್​ ಕುಮಾರ್​
|

Updated on: Apr 29, 2025 | 5:26 PM

Share

ನಟ ಸಲ್ಮಾನ್ ಖಾನ್ (Salman Khan) ಅವರ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡುತ್ತಿಲ್ಲ. ಹಾಗಾಗಿ ಕೆಲವರು ಅವರನ್ನು ಟೀಕಿಸಿದ್ದುಂಟು. ಅಲ್ಲದೇ, ಸಲ್ಮಾನ್ ಖಾನ್ ಅವರಿಗೆ ವಯಸ್ಸಾಗಿದೆ ಎಂದು ಕೂಡ ಕೆಲವರು ಲೇವಡಿ ಮಾಡಿದ್ದರು. ಸಾರ್ವಜನಿಕವಾಗಿ ಸಲ್ಮಾನ್ ಖಾನ್ ಕಾಣಿಸಿಕೊಂಡಾಗ ಅವರ ಲುಕ್ ನೋಡಿ ಜನರು ಈ ರೀತಿ ಟೀಕಿಸಿದ್ದರು. ಅಂಥವರಿಗೆ ಈಗ ಸಲ್ಲು ಖಡಕ್ ಉತ್ತರ ನೀಡಿದ್ದಾರೆ. ಕಟ್ಟುಮಸ್ತಾದ ಬಾಡಿಯ (Salman Khan Body) ಫೋಟೋವನ್ನು ಅಪ್​ಲೋಡ್ ಮಾಡುವ ಮೂಲಕ ಸಲ್ಮಾನ್ ಖಾನ್ ಅವರು ಟ್ರೋಲಿಗರ ಬಾಯಿ ಮುಚ್ಚಿಸಿದ್ದಾರೆ.

ಸಲ್ಮಾನ್ ಖಾನ್ ಅವರಿಗೆ ಈಗ 59 ವರ್ಷ ವಯಸ್ಸು. ಈ ವಯಸ್ಸಿನಲ್ಲಿ ಕೂಡ ಅವರು ಕಟ್ಟುಮಸ್ತಾಗಿದ್ದಾರೆ. ಆ್ಯಕ್ಷನ್ ಸಿನಿಮಾಗಳ ಮೂಲಕ ಅಬ್ಬರಿಸುತ್ತಾರೆ. ಹಾಗಾಗಿದ್ದರೂ ಕೂಡ ಅವರನ್ನು ಕೆಲವರು ಲೇವಡಿ ಮಾಡುತ್ತಿದ್ದಾರೆ. ಆದರೆ ಈಗ ಸಲ್ಮಾನ್ ಖಾನ್ ಅವರು ಸ್ವಿಮಿಂಗ್ ಪೂಲ್​ನಲ್ಲಿ ಶರ್ಟ್​ಲೆಸ್​ ಫೋಟೋಶೂಟ್ ಮಾಡಿಸಿ, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಈ ಫೋಟೋಗಳು ವೈರಲ್ ಆಗಿವೆ. ಈ ಮೊದಲು ಕೂಡ ಸಲ್ಮಾನ್ ಖಾನ್ ಅವರು ವರ್ಕೌಟ್ ಮಾಡುತ್ತಿರುವ ಫೋಟೋಗಳನ್ನು ಶೇರ್ ಮಾಡಿದ್ದರು. ಅದನ್ನು ಕಂಡು ಕೂಡ ನೆಟ್ಟಿಗರು ಬೆರಗಾಗಿದ್ದರು. ಫಿಟ್ನೆಸ್​ಗೆ ಸಲ್ಮಾನ್ ಖಾನ್ ಹೆಚ್ಚು ಆದ್ಯತೆ ನೀಡುತ್ತಾರೆ. ಎಷ್ಟೇ ತಾಪತ್ರಯಗಳು ಇದ್ದರೂ ಕೂಡ ಅವರು ವರ್ಕೌಟ್ ಮಾಡುವುದು ತಪ್ಪಿಸಲ್ಲ. ಅದರ ಪರಿಣಾಮವಾಗಿಯೇ ಅವರು ಕಟ್ಟುಮಸ್ತಾದ ಬಾಡಿ ಹೊಂದಿದ್ದಾರೆ.

ಆಮಿರ್ ಖಾನ್ ಮತ್ತು ಸಲ್ಮಾನ್ ಖಾನ್ ಅವರು ಒಟ್ಟಿಗೆ ನಟಿಸಿದ್ದ ‘ಅಂದಾಜ್ ಅಪ್ನ ಅಪ್ನ’ ಸಿನಿಮಾ ಈಗ ಮರು ಬಿಡುಗಡೆ ಆಗಿದೆ. ಮೂರು ದಿನಕ್ಕೆ 1.2 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಹಳೇ ಸಿನಿಮಾಗೆ ಅಭಿಮಾನಿಗಳು ಪ್ರೀತಿ ತೋರಿಸಿದ್ದಾರೆ. ಆ ಸಿನಿಮಾಗೆ ರಾಜ್​ಕುಮಾರ್ ಸಂತೋಷಿ ನಿರ್ದೇಶನವಿದೆ. ಕರೀಷ್ಮಾ ಕಪೂರ್, ಜೂಹಿ ಚಾವ್ಲಾ, ರವೀನಾ ಟಂಡನ್ ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಕಾಶ್ಮೀರ ನರಕ ಆಗುತ್ತಿದೆ’: ಪಹಲ್ಗಾಮ್‌ ಉಗ್ರರ ದಾಳಿಗೆ ನಟ ಸಲ್ಮಾನ್ ಖಾನ್ ಖಂಡನೆ

ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಸಲ್ಮಾನ್ ಖಾನ್ ಅವರು ಲಂಡನ್​ಗೆ ತೆರಳಿ ಮನರಂಜನಾ ಕಾರ್ಯಕ್ರಮ ನೀಡಬೇಕಿತ್ತು. ಮೇ 4 ಮತ್ತು 5ರಂದು ಅಲ್ಲಿ ಶೋ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಸಲ್ಮಾನ್ ಖಾನ್ ಅವರು ಲಂಡನ್ ಟೂರ್ ಮುಂದೂಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ