ಹೃತಿಕ್ ರೋಷನ್-ದೀಪಿಕಾ ಚುಂಬನ ದೃಶ್ಯಕ್ಕೆ ಆಕ್ಷೇಪ: ‘ಫೈಟರ್’ ವಿರುದ್ಧ ದೂರು

Fighter: ಹೃತಿಕ್ ರೋಷನ್-ದೀಪಿಕಾ ಪಡುಕೋಣೆ ನಟನೆಯ ‘ಫೈಟರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಿರೀಕ್ಷಿಸದಷ್ಟು ಯಶಸ್ಸು ಗಳಿಸಲಿಲ್ಲ. ಇದರ ನಡುವೆ ಸಿನಿಮಾದ ವಿರುದ್ಧ ವಾಯುಸೇನೆ ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ.

ಹೃತಿಕ್ ರೋಷನ್-ದೀಪಿಕಾ ಚುಂಬನ ದೃಶ್ಯಕ್ಕೆ ಆಕ್ಷೇಪ: ‘ಫೈಟರ್’ ವಿರುದ್ಧ ದೂರು
ದೀಪಿಕಾ-ಹೃತಿಕ್
Follow us
ಮಂಜುನಾಥ ಸಿ.
|

Updated on: Feb 06, 2024 | 5:38 PM

ಹೃತಿಕ್ ರೋಷನ್ (Hrithik Roshan) ಹಾಗೂ ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಫೈಟರ್’ ಸಿನಿಮಾ ಜನವರಿ 25ಕ್ಕೆ ಬಿಡುಗಡೆ ಆಗಿ ಉತ್ತಮ ಗಳಿಕೆ ಕಂಡಿದೆ. ಆದರೆ ಬ್ಲಾಕ್ ಬಸ್ಟರ್ ಸಿನಿಮಾ ಎನಿಸಿಕೊಂಡಿಲ್ಲ. ಇದಕ್ಕೆ ಕೆಲವು ಕಾರಣಗಳನ್ನು ಸಿನಿಮಾದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಹೇಳಿದ್ದಾರೆ. ಸಿನಿಮಾ ಗಲ್ಫ್​ ರಾಷ್ಟ್ರಗಳಲ್ಲಿ ನಿಷೇಧಕ್ಕೆ ಒಳಗಾಗಿದೆ. ಇದೆಲ್ಲದರ ನಡುವೆ ಇದೀಗ ಈ ಸಿನಿಮಾಕ್ಕೆ ಕಾನೂನು ಸಮಸ್ಯೆ ಎದುರಾಗಿದೆ. ಭಾರತೀಯ ವಾಯುಸೇನೆ ಕುರಿತಾದ ಈ ಸಿನಿಮಾದ ವಿರುದ್ಧ ವಾಯುಸೇನೆಯ ಅಧಿಕಾರಿಯೊಬ್ಬರು ದೂರು ನೀಡಿದ್ದಾರೆ.

‘ಫೈಟರ್’ ಸಿನಿಮಾ ಪಕ್ಕಾ ಕಮರ್ಶಿಯಲ್ ಸಿನಿಮಾ ಆಗಿದ್ದು, ಭಾರತೀಯ ವಾಯುಸೇನೆಯ ಶೌರ್ಯ, ಸಾಹಸ ಪ್ರದರ್ಶನದ ಜೊತೆಗೆ ಕಮರ್ಶಿಯಲ್ ಸಿನಿಮಾಗಳ ಸಿದ್ಧ ಸೂತ್ರಗಳಾದ ರೊಮ್ಯಾಂಟಿಕ್ ದೃಶ್ಯಗಳು, ಬಿಕಿನಿ ಧರಿಸಿ ಮಾಡುವ ಡ್ಯಾನ್ಸ್​ಗಳು, ನಟ-ನಟಿಯರ ನಡುವೆ ಅದರ ಚುಂಬನಗಳು ಸಹ ಇವೆ. ಈ ದೃಶ್ಯಗಳೇ ಈಗ ಸಿನಿಮಾವನ್ನು ಇಕ್ಕಟ್ಟಿಗೆ ಸಿಲುಕಿಸಿವೆ.

‘ಫೈಟರ್’ ಸಿನಿಮಾನಲ್ಲಿ ನಾಯಕ ಹೃತಿಕ್ ರೋಷನ್ ಹಾಗೂ ನಾಯಕಿ ದೀಪಿಕಾ ಪಡುಕೋಣೆ ನಡುವೆ ಕೆಲವು ಹಸಿ-ಬಿಸಿ ದೃಶ್ಯಗಳಿವೆ. ಬೀಚ್​ನಲ್ಲಿ ಚಿತ್ರೀಕರಿಸಲಾಗಿರುವ ಒಂದು ಹಾಡಂತೂ ಸಖತ್ ಹಾಟ್ ಆಗಿದೆ. ಹೃತಿಕ್ ಹಾಗೂ ದೀಪಿಕಾ ನಡುವೆ ಕೆಲವು ಚುಂಬನ ದೃಶ್ಯಗಳು ಸಹ ಇವೆ. ಒಂದು ದೃಶ್ಯದಲ್ಲಿ ಹೃತಿಕ್ ಹಾಗೂ ದೀಪಿಕಾ ಪಡುಕೋಣೆ ವಾಯುಸೇನೆಯ ಸಮವಸ್ತ್ರ ಧರಿಸಿಕೊಂಡು ಪರಸ್ಪರ ಚುಂಬಿಸುತ್ತಾರೆ. ಈ ದೃಶ್ಯದ ಬಗ್ಗೆ ವಾಯುಸೇನಾ ಅಧಿಕಾರಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದು, ಸಿನಿಮಾದ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.

ಇದನ್ನೂ ಓದಿ:ಹೃತಿಕ್ ರೋಷನ್ ಆಸ್ತಿ ಎಷ್ಟು ಸಾವಿರ ಕೋಟಿ ರೂಪಾಯಿ? ಪ್ರತಿ ಚಿತ್ರಕ್ಕೆ ಪಡೆಯೋ ಸಂಭಾವನೆ ಎಷ್ಟು?

ಅಸ್ಸಾಮಿನ ಏರ್​ಫೋರ್ಸ್ ಅಧಿಕಾರಿಣಿ ಆಗಿರುವ ಸೌಮ್ಯ ದೀಪ್ ದಾಸ್ ಹೃತಿಕ್ ಹಾಗೂ ದೀಪಿಕಾರ ಚುಂಬನ ದೃಶ್ಯದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದು, ‘ಫೈಟರ್’ ಸಿನಿಮಾದಲ್ಲಿ ಹೃತಿಕ್ ಹಾಗೂ ದೀಪಿಕಾ ವಾಯುಸೇನೆ ಸಮವಸ್ತ್ರ ಧರಿಸಿ ಪರಸ್ಪರ ಚುಂಬಿಸಿರುವ ದೃಶ್ಯ, ವಾಯುಸೇನೆ ಪಾಲಿಸಿಕೊಂಡು ಬಂದಿರುವ ನಿಯಮಗಳಿಗೆ ವಿರುದ್ಧವಾದುದು ಹಾಗೂ ವಾಯುಸೇನೆಯ ಸಮವಸ್ತ್ರಕ್ಕೆ ಅಪಮಾನ ಎಸಗಿದಂತಾಗಿದೆ. ಎಂದಿದ್ದು, ಚಿತ್ರತಂಡಕ್ಕೆ ನೊಟೀಸ್ ಕಳಿಸಿದ್ದಾರೆ.

‘ಫೈಟರ್’ ಸಿನಿಮಾ ಜನವರಿ 25ಕ್ಕೆ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ, ಅನಿಲ್ ಕಪೂರ್, ಕರಣ್ ಸಿಂಗ್ ಗ್ರೋವರ್, ಅಕ್ಷಯ್ ಒಬೆರಾಯ್ ಇನ್ನೂ ಹಲವರು ನಟಿಸಿದ್ದಾರೆ. ಭಾರತದ ಮೊಟ್ಟ ಮೊದಲ ಏರ್​ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದು ಎಂದು ಚಿತ್ರತಂಡ ಪ್ರಚಾರ ಮಾಡಿತ್ತು. ಟ್ರೈಲರ್ ನಲ್ಲಿ ತೋರಿಸಲಾಗಿದ್ದ ಆಕ್ಷನ್ ದೃಶ್ಯಗಳು ಸಹ ಚೆನ್ನಾಗಿದ್ದವು. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರೀಕ್ಷಿಸಿದಷ್ಟು ಪ್ರತಿಕ್ರಿಯೆ ಪ್ರೇಕ್ಷಕರಿಂದ ವ್ಯಕ್ತವಾಗಲಿಲ್ಲ. ಈ ಬಗ್ಗೆ ಮಾತನಾಡಿದ್ದ ನಿರ್ದೇಶಕ ಸಿದ್ಧಾರ್ಥ್ ಆನಂದ್, ‘ಭಾರತದಲ್ಲಿ ಬಹಳಷ್ಟು ಜನರಿಗೆ ಫೈಟರ್ ಜೆಟ್​ಗಳ ಬಗ್ಗೆಯಾಗಲಿ, ಅದರ ವೇಗದ ಬಗ್ಗೆ, ಅವರ ತಂತ್ರಜ್ಞಾನ, ಅದರ ಮಹತ್ವದ ಬಗ್ಗೆ ಅರಿವಿಲ್ಲ ಹಾಗಾಗಿ ನಮ್ಮ ಸಿನಿಮಾ ಪ್ರೇಕ್ಷಕರಿಗೆ ಕನೆಕ್ಟ್ ಆಗಲಿಲ್ಲ’ ಎಂದಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯನ್ನು ಬುಡಕಟ್ಟು ಸಂಪ್ರದಾಯದಂತೆ ವಿಶಿಷ್ಟವಾಗಿ ಬರಮಾಡಿಕೊಂಡ ಜನ
ಪ್ರಧಾನಿ ಮೋದಿಯನ್ನು ಬುಡಕಟ್ಟು ಸಂಪ್ರದಾಯದಂತೆ ವಿಶಿಷ್ಟವಾಗಿ ಬರಮಾಡಿಕೊಂಡ ಜನ
ಯೋಗೇಶ್ವರ್ ನಿರಾಶೆಗೆ ಡಿಕೆ ಸುರೇಶ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ
ಯೋಗೇಶ್ವರ್ ನಿರಾಶೆಗೆ ಡಿಕೆ ಸುರೇಶ್ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ
ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡುವ ಜೊತೆ ಸುಳ್ಳನ್ನೂ ಹೇಳಿದರೇ?
ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡುವ ಜೊತೆ ಸುಳ್ಳನ್ನೂ ಹೇಳಿದರೇ?
ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್
ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ