ಗಾಯಕ, ಸಂಗೀತ ನಿರ್ದೇಶಕ ಹನಿ ಸಿಂಗ್ ವಿರುದ್ಧ ಹಲ್ಲೆ, ಅಪಹರಣ ಪ್ರಕರಣ ದಾಖಲು, ಬಂಧನ ಸಾಧ್ಯತೆ

Honey Singh: ಜನಪ್ರಿಯ ರ್ಯಾಪರ್ ಯೊ ಯೊ ಹನಿ ಸಿಂಗ್ ವಿರುದ್ಧ ಹಲ್ಲೆ, ಅಪಹರಣ ಪ್ರಕರಣ ದಾಖಲಾಗಿದೆ. ಆದರೆ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ನೀಡಿರುವ ಹನಿ ಸಿಂಗ್ ಆರೋಪ ಆಧಾರರಹಿತ ಎಂದಿದ್ದಾರೆ.

ಗಾಯಕ, ಸಂಗೀತ ನಿರ್ದೇಶಕ ಹನಿ ಸಿಂಗ್ ವಿರುದ್ಧ ಹಲ್ಲೆ, ಅಪಹರಣ ಪ್ರಕರಣ ದಾಖಲು, ಬಂಧನ ಸಾಧ್ಯತೆ
ಹನಿ ಸಿಂಗ್
Follow us
ಮಂಜುನಾಥ ಸಿ.
|

Updated on: Apr 20, 2023 | 10:19 PM

ಜನಪ್ರಿಯ ರ್ಯಾಪರ್, ಗಾಯಕ, ಸಂಗೀತ ನಿರ್ದೇಶಕ ಹನಿ ಸಿಂಗ್ (Honey Singh) ಅಲಿಯಾಸ್ ಯೋ ಯೋ ಹನಿ ಸಿಂಗ್ ವಿರುದ್ಧ ಹಲ್ಲೆ, ಅಪಹರಣ ಪ್ರಕರಣಗಳು ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ. ಪ್ರತಿಷ್ಠಿತ ಇವೆಂಟ್ ಮ್ಯಾನೇಜ್​ಮೆಂಟ್ (Event Managment) ಸಂಸ್ಥೆಯ ಮಾಲೀಕನನ್ನು ಅಪಹರಿಸಿ ಆತನ ಮೇಲೆ ಹಲ್ಲೆ ಮಾಡಿರುವುದಾಗಿ ಹನಿ ಸಿಂಗ್ ವಿರುದ್ಧ ದೂರು ನೀಡಲಾಗಿದೆ.

ದೂರು ನೀಡಿರುವ ಇವೆಂಟ್ ಮ್ಯಾನೇಜ್​ಮೆಂಟ್ ಸಂಸ್ಥೆಯ ಮಾಲೀಕ ವಿವೇಕ್ ರಮನ್, ಹನಿ ಸಿಂಗ್ ಹಾಗೂ ಆತನ ಸಹಚರರು ತಮ್ಮನ್ನು ಅಪಹರಣ ಮಾಡಿ, ಒತ್ತೆಯಾಳಾಗಿ ಇರಿಸಿಕೊಂಡಿದ್ದಲ್ಲದೆ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ, ಅಸಭ್ಯವಾಗಿ ಬೈದಿದ್ದಾರೆ ಹಾಗೂ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮುಂಬೈನ ಬಿಕೆಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹನಿ ಸಿಂಗ್ ಇದೇ ತಿಂಗಳ ಒಂದನೇ ತಾರೀಖಿನಂದು ತಮ್ಮ ಹೊಸ ಆಲ್ಬಂ ಹನಿ ಸಿಂಗ್ 3.0ನ ಹಾಡೊಂದನ್ನು ಲೈವ್ ಕಾನ್ಸರ್ಟ್ ಮಾಡ ಬಿಡುಗಡೆ ಮಾಡಿದ್ದರು. ಅದೇ ಆಲ್ಬಂನ ಎರಡನೇ ಹಾಡು ಬಿಡುಗಡೆಗೆ ಏಪ್ರಿಲ್ 15 ರಂದು ಕಾರ್ಯಕ್ರಮವನ್ನು ಆಯೋಜನೆ ಮಾಡಿ ಪ್ರಚಾರ ಮಾಡುತ್ತಿದ್ದರು. ಆದರೆ ಹಣಕಾಸು ವ್ಯವಹಾರದಲ್ಲಿ ನಡೆದ ಗೊಂದಲದಿಂದಾಗಿ ವಿವೇಕ್ ರಾಮನ್ ಅವರು ಹನಿಸಿಂಗ್ ಶೋ ಅನ್ನು ಕ್ಯಾನ್ಸಲ್ ಮಾಡಿದ್ದರು, ಇದರಿಂದ ಸಿಟ್ಟಾದ ಹನಿ ಸಿಂಗ್ ಹಾಗೂ ಆತನ ಕಡೆಯವರು ತಮ್ಮನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ ಎಂದು ವಿವೇಕ್ ದೂರಿನಲ್ಲಿ ಹೇಳಿದ್ದಾರೆ.

ದೂರು ದಾಖಲಾಗಿರುವ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಸ್ಪಷ್ಟನೆ ನೀಡಿರುವ ಹನಿ ಸಿಂಗ್, ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪ ಸುಳ್ಳು, ನನ್ನ ಸಂಸ್ಥೆ ಹಾಗೂ ನನ್ನ ವಿರುದ್ಧ ದೂರು ನೀಡಿರುವ ಸಂಸ್ಥೆಯ ಜೊತೆಗೆ ಯಾವುದೇ ಒಪ್ಪಂದ ಆಗಿಯೇ ಇಲ್ಲ. ಮುಂಬೈನಲ್ಲಿ ನಡೆಯಬೇಕಿರುವ ನನ್ನ ಶೋಗೆ ನಾನು ಟ್ರೈಬಿವೈ ಹೆಸರಿನ ಸಂಸ್ಥೆಯೊಟ್ಟಿಗೆ ಒಪ್ಪಂದ ಮಾಡಿಕೊಂಡಿದ್ದೇನೆ. ಆ ಸಂಸ್ಥೆಯು ಬಹಳ ಘನತೆಯುಳ್ಳ ಸಂಸ್ಥೆಯಾಗಿದ್ದು, ಬುಕ್​ಮೈಶೋ ಸಂಸ್ಥೆಯ ಪಾಲುದಾರ ಸಂಸ್ಥೆಯಾಗಿದೆ. ನಾನು ನನ್ನ ಪ್ರದರ್ಶನವನ್ನು ನಿಯಮಕ್ಕೆ ಸರಿಯಾಗಿ ಮಾಡಿದ್ದೇನೆ. ಈಗ ದೂರು ನೀಡಿರುವ ಸಂಸ್ಥೆ ಯಾವುದೆಂದು ನನಗೆ ಗೊತ್ತಿಲ್ಲ. ಆ ವ್ಯಕ್ತಿಯೂ ಗೊತ್ತಿಲ್ಲ. ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಆಧಾರರಹಿತ. ನನ್ನ ಹೆಸರಿಗೆ ಚ್ಯುತಿ ತರಲು ಮಾಡಲಾಗುತ್ತಿರುವ ಪ್ರಯತ್ನಗಳು ಇವು. ನನ್ನ ಕಾನೂನು ಸಲಹೆಗಾರರ ತಂಡವು ಮಾನನಷ್ಟ ಮೊಕದ್ದಮೆ ಹೂಡಲು ತಯಾರಿ ನಡೆಸಿದೆ ಎಂದಿದ್ದಾರೆ.

ಹನಿ ಸಿಂಗ್ ಭಾರತದ ಜನಪ್ರಿಯ ರ್ಯಾಪರ್. ಕೆಲವು ಬಾಲಿವುಡ್ ಸಿನಿಮಾಗಳಿಗೆ ಹಾಡುಗಳನ್ನು ಕಂಪೋಸ್ ಮಾಡಿ ಸಾಹಿತ್ಯ ಬರೆದು ಹಾಡಿದ್ದಾರೆ ಸಹ. ಚೆನ್ನೈ ಎಕ್ಸ್​ಪ್ರೆಸ್​ನ ಲುಂಗಿ ಡ್ಯಾನ್ಸ್ ಸೇರಿದಂತೆ ಅಕ್ಷಯ್ ಕುಮಾರ್ ನಟನೆಯ ಸೆಲ್ಫಿ ಸಿನಿಮಾಕ್ಕೆ ಇದೇ ಶುಕ್ರವಾರ ಬಿಡುಗಡೆ ಆಗಲಿರುವ ಸಲ್ಮಾನ್ ಖಾನ್ ನಟನೆಯ ಕಿಸಿ ಕ ಭಾಯ್ ಕಿಸಿ ಕಿ ಜಾನ್ ಸಿನಿಮಾಕ್ಕೂ ಒಂದು ಹಾಡು ಮಾಡಿದ್ದಾರೆ ಹನಿ ಸಿಂಗ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.