AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಸಾವು: ತನಿಖಾ ವರದಿ ಸಲ್ಲಿಸಿದ ಸಿಬಿಐ

Sushant Singh: ಇಡೀ ದೇಶದ ಗಮನ ಸೆಳೆದಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಪ್ರಕರಣದ ಬಗ್ಗೆ ಅಂತಿಮ ವರದಿ ಸಲ್ಲಿಸಿದ್ದು, ಸುಶಾಂತ್ ಸಿಂಗ್ ಸಾವಿಗೆ ಯಾವುದೇ ಅನ್ಯವ್ಯಕ್ತಿ ಕಾರಣ ಅಲ್ಲ ಎಂದಿದೆ. ಆ ಮೂಲಕ ಪ್ರಕರಣದಲ್ಲಿ ಕ್ಲೋಶರ್ ರಿಪೋರ್ಟ್ ಸಲ್ಲಿಕೆ ಮಾಡಿದೆ.

ಸುಶಾಂತ್ ಸಿಂಗ್ ಸಾವು: ತನಿಖಾ ವರದಿ ಸಲ್ಲಿಸಿದ ಸಿಬಿಐ
Sushant Singh
ಮಂಜುನಾಥ ಸಿ.
|

Updated on:Mar 23, 2025 | 8:21 AM

Share

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖಾ ವರದಿಯನ್ನು ಸಿಬಿಐ ನಿನ್ನೆ ಸಲ್ಲಿಕೆ ಮಾಡಿದೆ. ಬರೋಬ್ಬರಿ ನಾಲ್ಕುವರೆ ವರ್ಷಗಳ ಕಾಲ ತನಿಖೆ ನಡೆಸಿದ ಸಿಬಿಐ ಇದೀಗ ಅಂತಿಮ ತನಿಖಾ ವರದಿ ಸಲ್ಲಿಸಿದ್ದು, ಪ್ರಕರಣವನ್ನು ಅಂತ್ಯಗೊಳಿಸಿದೆ. ಮಾತ್ರವಲ್ಲದೆ ಸುಶಾಂತ್ ಸಿಂಗ್ ಸಾವಿನಲ್ಲಿ ಬೇರೊಬ್ಬರ ಕೈವಾಡ ಇರುವ ಬಗ್ಗೆ ಯಾವುದೇ ಸಾಕ್ಷ್ಯಗಳು ಲಭ್ಯವಿಲ್ಲ ಎಂದಿದೆ. ಆ ಮೂಲಕ ಸುಶಾಂತ್ ಸಿಂಗ್​ರದ್ದು ಕೊಲೆಯಲ್ಲ ಆತ್ಮಹತ್ಯೆ ಎಂದಿದೆ.

ಸಿಬಿಐ ಸಲ್ಲಿಸಿರುವ ವರದಿಯನ್ನು ವಿಶೇಷ ನ್ಯಾಯಾಲಯ ಸ್ವೀಕರಿಸುತ್ತದೆಯೇ ಅಥವಾ ಇನ್ನೂ ಹೆಚ್ಚಿನ ತನಿಖೆಗೆ ಸೂಚಿಸುತ್ತದೆಯೇ ಎಂಬುದು ಕುತೂಹಲದ ವಿಷಯವಾಗಿದೆ. ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇದೆ. ಆದರೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಸುಶಾಂತ್ ಸಿಂಗ್ ಸಾವು ಕೊಲೆ ಅಲ್ಲ ಎಂಬ ವರದಿ ನೀಡಿರುವುದು ಪ್ರಕರಣದಲ್ಲಿ ಆರೋಪಿಯಾಗಿದ್ದ ರಿಯಾ ಚಕ್ರವರ್ತಿ ಮತ್ತು ಇತರರಿಗೆ ನಿರಾಳತೆ ಮೂಡಿಸಿದೆ. ಸಿಬಿಐ ವರದಿ ಬಳಿಕ ನ್ಯಾಯಾಲಯವೂ ಸಹ ಸುಶಾಂತ್ ಸಿಂಗ್ ಪ್ರಕರಣದಲ್ಲಿ ಅಂತಿಮ ತೀರ್ಪು ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ:ಸುಶಾಂತ್ ಸಿಂಗ್ ರಜಪೂತ್ ಕೇಸ್​ಗೆ ಮರುಜೀವ; ಫೆ.19ರಂದು ಮತ್ತೆ ಕೋರ್ಟ್ ವಿಚಾರಣೆ

ಸಿಬಿಐ ವರದಿ ಸಲ್ಲಿಸಿರುವ ಬೆನ್ನಲ್ಲೆ ರಿಯಾ ಚಕ್ರವರ್ತಿ ಪರ ವಕೀಲ ಮಾನೆಶಿಂಧೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದು, ‘ಸಿಬಿಐ, ಸುಶಾಂತ್ ಸಿಂಗ್ ಪ್ರಕರಣದಲ್ಲಿ ಕ್ಲೋಶರ್ ರಿಪೋರ್ಟ್ ಸಲ್ಲಿಸಿದೆ. ನಾವು ಸಿಬಿಐಗೆ ಧನ್ಯವಾದ ಹೇಳುತ್ತೇವೆ. ಸಿಬಿಐ, ಸುಶಾಂತ್ ಸಿಂಗ್ ಪ್ರಕರಣವನ್ನು ಎಲ್ಲ ಕೋನಗಳಿಂದಲೂ ತನಿಖೆ ನಡೆಸಿ ಅಂತಿಮವಾಗಿ ಪ್ರಕರಣವನ್ನು ಅಂತ್ಯಗೊಳಿಸುವಂತೆ ವರದಿ ಸಲ್ಲಿಸಿದೆ. ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣ ಮತ್ತು ಟಿವಿ ಮಾಧ್ಯಮಗಳಲ್ಲಿ ಹರಿದಾಡಿದ್ದ ಸುಳ್ಳು ವರದಿಗಳು ಅತ್ಯಂತ ಮಾನಹಾನಿಕಾರಕವಾಗಿದ್ದವು. ಇಂದು ನಾನು ಹೆಮ್ಮೆಯಿಂದ ಹೇಳುತ್ತೇನೆ ನಾನು ಒಂದು ಸೈನಿಕ ಕುಟುಂಬದ ಪರ ಹೋರಾಡಿದ್ದಕ್ಕೆ ಸಂತಸವಿದೆ. ದೇಶದ ಪ್ರತಿಯೊಬ್ಬ ನಾಗರೀಕರೂ ಸಹ ನ್ಯಾಯಕ್ಕಾಗಿ ಬೇಡಿಕೆ ಇಟ್ಟಿದ್ದ, ಆ ನ್ಯಾಯ ಈಗ ದೊರೆತಿದೆ’ ಎಂದಿದ್ದಾರೆ.

2020ರ ಜೂನ್ 14 ರಂದು ಸುಶಾಂತ್ ಸಿಂಗ್ ಮುಂಬೈನ ತಮ್ಮ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸುಶಾಂತ್ ಸಿಂಗ್ ಸಾವಿಗೆ ಅವರ ಮಾಜಿ ಬಾಯ್​ಫ್ರೆಂಡ್ ರಿಯಾ ಚಕ್ರವರ್ತಿಯೇ ಕಾರಣ ಎಂಬ ಸುದ್ದಿ ಆಗ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ತನಿಖೆಯಲ್ಲಿ ಮಾದಕ ವಸ್ತು ಜಾಲವೊಂದು ಸಹ ಹೊರಬಿತ್ತು. ರಿಯಾ ಚಕ್ರವರ್ತಿ, ಆಕೆಯ ಸಹೋದರ ಇನ್ನೂ ಕೆಲವರನ್ನು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಾಲಿವುಡ್​ನ ಹಲವಾರು ನಟ-ನಟಿಯರನ್ನು ಈ ಪ್ರಕರಣದಲ್ಲಿ ವಿಚಾರಣೆ ಸಹ ನಡೆಸಲಾಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:10 am, Sun, 23 March 25

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?