11 ಕೋಟಿ ಸಾಲ, ಖ್ಯಾತ ಕಮಿಡಿಯನ್​ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ

ಬಾಲಿವುಡ್​ನ ಅತ್ಯಂತ ಜನಪ್ರಿಯ ಕಮಿಡಿಯನ್​ ಒಬ್ಬರು 11 ಕೋಟಿ ರೂಪಾಯಿ ಸಾಲ ತೀರಿಸದ ಕಾರಣ ಅವರಿಗೆ ಸೇರಿದ ಜಮೀನನ್ನು ಸಿಬಿಐ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ.

11 ಕೋಟಿ ಸಾಲ, ಖ್ಯಾತ ಕಮಿಡಿಯನ್​ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ
Follow us
ಮಂಜುನಾಥ ಸಿ.
|

Updated on: Aug 14, 2024 | 7:08 PM

ಸ್ಟಾರ್ ನಟರಂತೆ ಹಾಸ್ಯ ನಟರು ದೊಡ್ಡ ಹೆಸರು ಮಾಡುವುದು, ಜನಪ್ರಿಯತೆ ಗಳಿಸುವುದು ವಿರಳ. ಆದರೆ ದೇಶದಲ್ಲಿ ಕೆಲವು ಹಾಸ್ಯ ನಟರು ಸ್ಟಾರ್ ನಟರಷ್ಟೆ ಜನಪ್ರಿಯತೆ, ಅಭಿಮಾನಿಗಳನ್ನು ಹೊಂದಿದ್ದಾರೆ ಅವರಲ್ಲಿ ಬಾಲಿವುಡ್ ಹಾಸ್ಯ ನಟ ರಾಜ್​ಪಾಲ್ ಯಾದವ್ ಸಹ ಒಬ್ಬರು. ದಶಕಗಳಿಂದಲೂ ಚಿತ್ರರಂಗದಲ್ಲಿ ತಮ್ಮ ಅದ್ಭುತ ನಟನೆ, ದೇಹಭಾಷೆ, ಡೈಲಾಗ್ ಡೆಲಿವರಿಯಿಂದ ಪ್ರೇಕ್ಷಕರನ್ನೂ ರಂಜಿಸುತ್ತಾ ಬಂದಿರುವ ರಾಜ್​ಪಾಲ್ ಯಾದವ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಕೋಟ್ಯಂತರ ರೂಪಾಯಿ ಸಾಲ ಮಾಡಿಕೊಂಡಿದ್ದಾರೆ. ಸಾಲದ ಬದಲಾಗಿ ಸಿಬಿಐ ನವರು ರಾಜ್​ಪಾಲ್ ಯಾದವ್​ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಅಂದಹಾಗೆ ಸಿಬಿಐ ಎಂದರೆ ತನಿಖಾ ಸಂಸ್ಥೆ ಅಲ್ಲ ಬದಲಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ.

ರಾಜ್​ಪಾಲ್ ಯಾದವ್​ ಅವರಿಗೆ ಸೇರಿದ್ದು ಎನ್ನಲಾಗಿರುವ ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿರುವ ಆಸ್ತಿಯನ್ನು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. ಹಲವು ವರ್ಷಗಳ ಹಿಂದೆ ರಾಜ್​ಪಾಲ್ ಯಾದವ್ ಈ ಜಮೀನನ್ನು ಖರೀದಿ ಮಾಡಿದ್ದರು. ಅಸಲಿಗೆ ರಾಜ್​ಪಾಲ್ ಯಾದವ್ ಬಹಳ ವರ್ಷಗಳ ಹಿಂದೆ ತಮ್ಮ ಪೋಷಕರಾದ ನೌರಂಗ್ ಮತ್ತು ಗೋಧಾವರಿ ಅವರುಗಳ ಹೆಸರಲ್ಲಿ ನಿರ್ಮಾಣ ಸಂಸ್ಥೆಯೊಂದನ್ನು ಆರಂಭ ಮಾಡಿದ್ದರು. ಅದಕ್ಕೆ ನೌರಂಗ್-ಗೋಧಾವರಿ ಎಂಟರ್ಟೈನ್​ಮೆಂಟ್ ಎಂದು ಹೆಸರಿಟ್ಟಿದ್ದರು.

ಇದನ್ನೂ ಓದಿ:‘ಟಾಕ್ಸಿಕ್’ ಸಿನಿಮಾದಲ್ಲಿ ಬಾಲಿವುಡ್ ನಟ ಅಕ್ಷಯ್ ಒಬೆರಾಯ್: ಯಾರೀತ?

ನೌರಂಗ್-ಗೋಧಾವರಿ ಎಂಟರ್ಟೈನ್​ಮೆಂಟ್ ನಿರ್ಮಾಣ ಸಂಸ್ಥೆಗೆ ರಾಜ್​ಪಾಲ್ ಯಾದವ್​ರ ಪತ್ನಿ ರಾಧಾ ಮಾಲಕಿ ಆಗಿದ್ದರು. ತಮ್ಮ ನಿರ್ಮಾಣ ಸಂಸ್ಥೆ ಮೂಲಕ ಸಿನಿಮಾ ಒಂದನ್ನು ನಿರ್ಮಾಣ ಮಾಡಿದ್ದರು ರಾಜ್​ಪಾಲ್ ಯಾದವ್. ಆ ಸಿನಿಮಾಕ್ಕೆ ಶಹಜಾನ್​ಪುರದ ಸ್ಥಳೀಯ ಕಲಾವಿದರನ್ನೇ ಬಳಸಿಕೊಂಡಿದ್ದರು. ಸಿನಿಮಾದಲ್ಲಿ ದಿವಂಗತ ಓಂ ಪುರಿ ಸಹ ನಟಿಸಿದ್ದರು. ಆ ಸಿನಿಮಾ ನಿರ್ಮಾಣಕ್ಕೆ ಶಹಜಾನ್​ಪುರದಲ್ಲಿನ ಜಮೀನು ಅಡವಿಟ್ಟು ಮೂರು ಕೋಟಿ ಸಾಲ ಪಡೆದಿದ್ದರು. ಆ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಟ್ಟರ್ ಫ್ಲಾಪ್​ ಆಯ್ತು. ರಾಜ್​ಪಾಲ್ ಯಾದವ್​ಗೆ ಸಾಲ ಮರುಪಾವತಿ ಮಾಡಲು ಆಗಲಿಲ್ಲ.

ಮೂರು ಕೋಟಿ ರೂಪಾಯಿ ಸಾಲ ಬಡ್ಡಿ, ಇನ್ನಿತರೆ ಶುಲ್ಕ, ದಂಡಗಳು ಸೇರಿಕೊಂಡು ಈಗ 11 ಕೋಟಿ ರೂಪಾಯಿಗಳಾಗಿದ್ದು, ನೊಟೀಸ್​ಗಳನ್ನು ಕಳಿಸಿ-ಕಳಿಸಿ ಸುಸ್ತಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದವರು ಇದೇ ತಿಂಗಳ ಎರಡನೇ ವಾರದಲ್ಲಿ ಶಹಜಾನ್​ಪುರಕ್ಕೆ ತೆರಳಿ ರಾಜ್​ಪಾಲ್ ಯಾದವ್​ ಅವರಿಗೆ ಸೇರಿದ ಅಡವಿಟ್ಟಿದ್ದ ಜಮೀನನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್​ಪಾಲ್ ಯಾದವ್ 25 ವರ್ಷಗಳಿಂದಲೂ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಾ ಬಂದಿದ್ದಾರೆ. ಬಾಲಿವುಡ್​ನ ಅತ್ಯುತ್ತಮ ನಟರಲ್ಲಿ ರಾಜ್​ಪಾಲ್ ಯಾದವ್ ಸಹ ಒಬ್ಬರು. ಬಾಲಿವುಡ್​ನ ಎಲ್ಲ ಸ್ಟಾರ್ ನಟರು, ನಿರ್ದೇಶಕರೊಟ್ಟಿಗೆ ರಾಜ್​ಪಾಲ್ ಯಾದವ್ ಕೆಲಸ ಮಾಡಿದ್ದಾರೆ. ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲಿಯೂ ಸಹ ರಾಜ್​ಪಾಲ್ ಯಾದವ್ ಕೆಲಸ ಮಾಡಿದ್ದಾರೆ. ಬಾಲಿವುಡ್​ನಲ್ಲಿ ಜಾನಿ ಲಿವರ್​ ಬಳಿಕ ಅತ್ಯಂತ ಯಶಸ್ವಿ ಕಮಿಡಿಯನ್ ಎಂದರೆ ಅದು ರಾಜ್​ಪಾಲ್ ಯಾದವ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ