AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್ ಕುಮಾರ್​ನ ನೋಡಲು ಹೋಗಿ ಲಾಠಿ ಏಟು ತಿಂದ ಅಭಿಮಾನಿಗಳು; ಇಲ್ಲಿದೆ ವಿಡಿಯೋ

ಲಾಠಿ ಚಾರ್ಜ್ ಮಾಡೋದಕ್ಕೂ ಮೊದಲು ಪೊಲೀಸರು ಗುಂಪನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಆದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿಲ್ಲ. ದುರ್ವರ್ತನೆ ತೋರುವುದನ್ನು ಜನರು ಮುಂದುವರಿಸಿದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಜನರಿಂದ ದೂರವೇ ಇದ್ದಿದ್ದರಿಂದ ಯಾವುದೇ ತೊಂದರೆ ಆಗಿಲ್ಲ.

ಅಕ್ಷಯ್ ಕುಮಾರ್​ನ ನೋಡಲು ಹೋಗಿ ಲಾಠಿ ಏಟು ತಿಂದ ಅಭಿಮಾನಿಗಳು; ಇಲ್ಲಿದೆ ವಿಡಿಯೋ
ಅಕ್ಷಯ್ ಕುಮಾರ್-ಟೈಗರ್
ರಾಜೇಶ್ ದುಗ್ಗುಮನೆ
|

Updated on: Feb 27, 2024 | 10:35 AM

Share

ಅಕ್ಷಯ್ ಕುಮಾರ್ (Akshay Kumar) ಸಿನಿಮಾಗಳು ಸಾಲು ಸಾಲು ಫ್ಲಾಪ್ ಆಗುತ್ತಿವೆ. ಆದಾಗ್ಯೂ ಅವರ ಬಗ್ಗೆ ಇರೋ ಕ್ರೇಜ್ ಕಡಿಮೆ ಆಗಿಲ್ಲ. ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಈಗ ಲಖನೌನಲ್ಲಿ ಅವರು ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಪ್ರಮೋಷನ್​ಗೆ ಟೈಗರ್ ಶ್ರಾಫ್ ಜೊತೆ ತೆರಳಿದ್ದರು. ಅವರನ್ನು ನೋಡಲು ಜನಸಾಗರವೇ ನೆರೆದಿತ್ತು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಲಖನೌನಲ್ಲಿ ಸೋಮವಾರ (ಫೆಬ್ರವರಿ 27) ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದ ಪ್ರಮೋಷನಲ್ ಈವೆಂಟ್ ಆಯೋಜನೆ ಮಾಡಲಾಗಿತ್ತು. ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ಆಗಮಿಸಿದ್ದರು. ಆದರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಕೆಲವು ಕಿಡಿಗೇಡಿಗಳು ಚಪ್ಪಲಿ ಎಸೆಯಲು ಆರಂಭಿಸಿದರು. ಈ ವೇಳೆ ಕಾಲ್ತುಳಿತ ಉಂಟಾಗಿದೆ.

ಲಾಠಿ ಚಾರ್ಜ್ ಮಾಡುವುದಕ್ಕೂ ಮುನ್ನ ಉತ್ತರ ಪ್ರದೇಶ ಪೊಲೀಸರು ಗುಂಪನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಆದರೆ, ಯಾರೊಬ್ಬರೂ ನಿಯಂತ್ರಣಕ್ಕೆ ಬಂದಿಲ್ಲ. ದುರ್ವರ್ತನೆ ತೋರುವುದನ್ನು ಅವರು ಮುಂದುವರಿಸಿದರು. ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಜನರಿಂದ ದೂರವೇ ಇದ್ದಿದ್ದರಿಂದ ಅವರಿಗೆ ಯಾವುದೇ ತೊಂದರೆ ಆಗಿಲ್ಲ. ಗುಂಪು ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಲಾಠಿ ಚಾರ್ಜ್ ಮಾಡಿದ ವಿಡಿಯೋ..

ವೇದಿಕೆಯ ಎದುರು ಭಾಗದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಇದನ್ನು ಅಭಿಮಾನಿಗಳು ದೂಡಿ ಮುಂದೆ ಬಂದಿದ್ದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಅಕ್ಷಯ್ ಹಾಗೂ ಟೈಗರ್ ಕಾರ್ಯಕ್ರಮದಿಂದ ಅರ್ಧಕ್ಕೆ ಹೊರ ನಡೆದಿದ್ದಾರೆ. ಇದು ಅವರಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ: ಅಕ್ಷಯ್ ಕುಮಾರ್ ಸಿನಿಮಾಕ್ಕೆ ಮತ್ತೆ ಸಂಕಷ್ಟ: ಒಟಿಟಿ ಆವೃತ್ತಿಗೂ ಕತ್ತರಿ, ಬಿಡುಗಡೆ ಮುಂದೂಡಿಕೆ

‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಅವರು ಸೈನಿಕರ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್, ಮಾನುಷಿ ಚಿಲ್ಲರ್, ಸೋನಾಕ್ಷಿ ಸಿನ್ಹಾ ಮೊದಲಾದವರು ನಟಿಸಿದ್ದಾರೆ. ಅಲ್ಲಿ ಅಬ್ಬಾಸ್ ಜಫರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಪೂಜಾ ಎಂಟರ್​ಟೇನ್​ಮೆಂಟ್ಸ್ ಹಾಗೂ AAZ​ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ.  ಏಪ್ರಿಲ್ 9ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ