Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಚಿನ್ನದ ಗಣಿಯ ಕರಾಳ ಕಥೆ ಹೇಳಲಿದೆ ತಮಿಳಿನ ಈ ಸಿನಿಮಾ

ಕನ್ನಡದ ‘ಕೆಜಿಎಫ್’ ಚಿತ್ರದಲ್ಲಿ ಕೋಲಾರದ ಚಿನ್ನದ ಗಣಿಯನ್ನು ತೋರಿಸಲಾಗಿತ್ತು. ಆದರೆ, ಇಲ್ಲಿ ಇದ್ದಿದ್ದೆಲ್ಲವೂ ಕಾಲ್ಪನಿಕ ಕಥೆ. ಆದರೆ, ‘ತಂಗಳಾನ್’ ಚಿತ್ರದಲ್ಲಿ ಕೆಜಿಎಫ್​ನ ನೈಜ ಕಥೆ ಹೇಳಲಾಗುತ್ತಿದೆ. ಇಲ್ಲಿನ ಕಾರ್ಮಿಕರ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ನಿರ್ದೇಕ ಪಾ. ರಂಜಿತ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಕೋಲಾರ ಚಿನ್ನದ ಗಣಿಯ ಕರಾಳ ಕಥೆ ಹೇಳಲಿದೆ ತಮಿಳಿನ ಈ ಸಿನಿಮಾ
ಚಿಯಾನ್ ವಿಕ್ರಂ
Follow us
ರಾಜೇಶ್ ದುಗ್ಗುಮನೆ
|

Updated on: Feb 27, 2024 | 7:32 AM

ಚಿಯಾನ್ ವಿಕ್ರಮ್ (Chiyan Vikram) ಅವರು ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ಆಯ್ಕೆ ಮಾಡಿಕೊಳ್ಳುವ ಪಾತ್ರಗಳು ಸಾಕಷ್ಟು ಭಿನ್ನವಾಗಿರುತ್ತವೆ. ಈಗ ಅವರು ‘ತಂಗಳಾನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ರಿವೀಲ್ ಆದಾಗಿನಿಂದಲೂ ಸಿನಿಮಾ ಬಗ್ಗೆ ಹೈಪ್ ಸೃಷ್ಟಿ ಆಗಿದೆ. ಈ ಚಿತ್ರದ ಕಥೆ ಸಾಗೋದು 19ನೇ ಶತಮಾನದಲ್ಲಿ. ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ವಿಶೇಷ ಎಂದರೆ ಈ ಚಿತ್ರವನ್ನು ಕೋಲಾರದಲ್ಲಿರುವ ಚಿನ್ನದ ಗಣಿಯಲ್ಲಿ ಶೂಟ್ ಮಾಡಲಾಗಿದೆ. ಈ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿದೆ.

‘ಕೆಜಿಎಫ್’ ಸಿನಿಮಾದಲ್ಲಿ ಕೋಲಾರದ ಚಿನ್ನದ ಗಣಿಯನ್ನು ತೋರಿಸಲಾಗಿದೆ. ಆದರೆ, ಇಲ್ಲಿ ಇದ್ದಿದ್ದೆಲ್ಲವೂ ಕಾಲ್ಪನಿಕ ಕಥೆ ಆಗಿತ್ತು. ಆದರೆ, ‘ತಂಗಳಾನ್’ ಸಿನಿಮಾದಲ್ಲಿ ಕೆಜಿಎಫ್​ನ ನೈಜ ಕಥೆ ಹೇಳಲಾಗುತ್ತಿದೆ. ಇಲ್ಲಿನ ಕಾರ್ಮಿಕರ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗುತ್ತಿದೆ. ನಿರ್ದೇಕ ಪಾ. ರಂಜಿತ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾ ಕೋಲಾರ ಚಿನ್ನದ ಗಣಿಯ ನೈಜ ಕಥೆಯನ್ನು ಹೇಳಲಿದೆ. ಒಂದು ಸಾವಿರ ವರ್ಷಗಳ ಹಿಂದೆ ಕೋಲಾರ ಚಿನ್ನದ ಗಣಿಯನ್ನು ಬ್ರಿಟಿಷರು ಕಂಡುಹಿಡಿದರು. ಅದನ್ನು ಅವರು ತಮ್ಮ ಸ್ವಂತ ಉದ್ದೇಶಗಳಿಗಾಗಿ ಬಳಸಿಕೊಂಡರು ಮತ್ತು ಲೂಟಿ ಮಾಡಿದರು. ಈ ವೇಳೆ ಕಾರ್ಮಿಕರಿಗೆ ಸಾಕಷ್ಟು ಹಿಂಸೆ ನೀಡಲಾಗಿತ್ತು. ಇದನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

‘ತಂಗಳಾನ್’ ಸಿನಿಮಾದ ಟೀಸರ್ ಈಗಾಗಲೇ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಚಿತ್ರದ ರಿಲೀಸ್ ಡೇಟ್ ಇನ್ನೂ ಘೋಷಣೆ ಆಗಿಲ್ಲ. 2024 ಏಪ್ರಿಲ್​ನಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ. ತಮಿಳು ಮಾತ್ರವಲ್ಲದೆ ಕನ್ನಡ, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಜಿವಿ ಪ್ರಕಾಶ್ ಕುಮಾರ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ಧಗೊಳ್ಳುತ್ತಿದೆ ಮತ್ತೊಂದು ‘ಕೆಜಿಎಫ್​’ ಸಿನಿಮಾ; ಚಿಯಾನ್ ವಿಕ್ರಮ್ ಹೀರೋ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ತಂಗಳಾನ್’ ಸಿನಿಮಾ ಜನವರಿ 26ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾದ ಕೆಲಸಗಳು ಪೂರ್ಣಗೊಂಡಿಲ್ಲ ಎನ್ನುವ ಕಾರಣಕ್ಕೆ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಯಿತು. ಈ ಚಿತ್ರದ ಕಥೆ 1870ರಿಂದ 1940ರವರೆಗೆ ಸಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ