‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ಕೇರಳದಲ್ಲಿ ವಿರೋಧ, ಬಿಡುಗಡೆ ಆಗದಂತೆ ತಡೆಯಲು ಯತ್ನ

The Kerala Story: ಕೇರಳದಲ್ಲಿ ನಡೆದಿದೆ ಎನ್ನಲಾದ ಮತಾಂತರದ ಕತೆಯನ್ನು ಒಳಗೊಂಡ ದಿ ಕೇರಳ ಸ್ಟೋರಿ ಸಿನಿಮಾದ ಬಿಡುಗಡೆಗೆ ಅವಕಾಶ ಕೊಡಬಾರದೆಂದು ಕೇರಳದ ಹಲವು ರಾಜಕೀಯ ಪಕ್ಷಗಳು ಸರ್ಕಾರಕ್ಕೆ ಮನವಿ ಮಾಡಿದೆ.

'ದಿ ಕೇರಳ ಸ್ಟೋರಿ' ಸಿನಿಮಾಕ್ಕೆ ಕೇರಳದಲ್ಲಿ ವಿರೋಧ, ಬಿಡುಗಡೆ ಆಗದಂತೆ ತಡೆಯಲು ಯತ್ನ
ಕೇರಳ ಸ್ಟೋರಿ
Follow us
|

Updated on: Apr 29, 2023 | 5:56 PM

ದಿ ಕೇರಳ ಸ್ಟೋರಿ‘ (The Kerala Story) ಸಿನಿಮಾದ ಟ್ರೈಲರ್ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಅದರ ಬೆನ್ನಲ್ಲೆ ಸಿನಿಮಾದ ವಿರುದ್ಧ ಕೇರಳದಲ್ಲಿ ವಿರೋಧದ ದನಿ ಎದ್ದಿದೆ. ಆಡಳಿತಾರೂಢ ಸಿಪಿಐಎಂ ಸೇರಿದಂತೆ ಕಾಂಗ್ರೆಸ್ (Congress)​ ಇನ್ನಿತರೆ ಪಕ್ಷಗಳು ಸಿನಿಮಾದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಸಿನಿಮಾವು ಕೇರಳದಲ್ಲಿ ಬಿಡುಗಡೆ ಆಗದಂತೆ ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಿವೆ. ಸರ್ಕಾರವು ಸಹ ಸಿನಿಮಾದ ಬಿಡುಗಡೆ ತಡೆಯಲು ಕಾನೂನು ಕ್ರಮಗಳನ್ನು ಶೋಧಿಸುತ್ತಿರುವುದಾಗಿ ಹೇಳಿದೆ.

ದಿ ಕೇರಳ ಸ್ಟೋರಿ ಸಿನಿಮಾವು ಕೇರಳದಲ್ಲಿ ನಡೆಯುತ್ತಿರುವ ಮತಾಂತರ ಹಾಗೂ ಯುವತಿಯರ ಮಾನವ ಕಳ್ಳಸಾಗಣೆ ವಿಷಯದ ಮೇಲೆ ಬೆಳಕು ಚೆಲ್ಲಲಿದೆ ಎಂದು ಚಿತ್ರತಂಡ ಹೇಳಿದೆ. ಹೇಗೆ ಕೇರಳದ ಹಿಂದು, ಕ್ರಿಶ್ಚಿಯನ್ ಯುವತಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಅವರನ್ನು ಇಸ್ಲಾಂಗೆ ಮತಾಂತರ ಮಾಡಿಸಿ ಬಳಿಕ ತಾಲಿಬಾನಿಗಳನ್ನಾಗಿ ಬದಲಾಯಿಸುತ್ತಾರೆ ಎಂಬ ಸಿನಿಮಾ ಮಾಡಲಾಗಿದೆ ಎಂದು ನಿರ್ಮಾಪಕ ವಿಫುಲ್ ಶಾ ಈ ಹಿಂದೆ ಹೇಳಿದ್ದರು. ಟ್ರೈಲರ್​ನಲ್ಲಿಯೂ, ಕೇರಳದಲ್ಲಿ 32,000 ಹಿಂದು, ಕ್ರಿಶ್ಚಿಯನ್ ಯುವತಿಯರು ಮಹಿಳೆಯರು ಕಾಣೆಯಾಗಿದ್ದಾರೆ. ಅವರನ್ನು ಲವ್ ಜಿಹಾದಿಗೆ ಬಳಸಿಕೊಳ್ಳಲಾಗಿದೆ, ಮತಾಂತರ ಮಾಡಲಾಗಿದೆ, ಮಾನವ ಕಳ್ಳಸಾಗಣೆ ಮಾಡಿ ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಸಿನಿಮಾದ ಟ್ರೈಲರ್​ನಲ್ಲಿಯೂ ಹೇಳಲಾಗಿದೆ.

ಕೇರಳವನ್ನು ಕರಾಳವಾಗಿ ತೋರಿಸುವ ‘ದಿ ಕೇರಳ ಸ್ಟೋರಿ’ ಸಿನಿಮಾದ ವಿರುದ್ಧ ಆಡಳಿತಾರೂಢ ಸಿಪಿಐಎಂ ಹಾಗೂ ವಿಪಕ್ಷಗಳಾದ ಕಾಂಗ್ರೆಸ್ ಹಾಗೂ ಇನ್ನಿತರೆ ಕೆಲವು ಪಕ್ಷಗಳು ಮುಗಿಬಿದ್ದಿವೆ. ಕಾಂಗ್ರೆಸ್, ಕೇರಳ ಕಾಂಗ್ರೆಸ್, ಡಿವೈಎಫ್​ಐ, ಸಿಪಿಐಎಂ ಯುವ ಸಂಘ ಇನ್ನಿತರೆ ರಾಜಕೀಯ ಪಕ್ಷಗಳು ಸಂಘಟನೆಗಳು ದಿ ಕೇರಳ ಸ್ಟೋರಿ ಸಿನಿಮಾದ ಬಿಡುಗಡೆಯನ್ನು ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಿವೆ. ”ಸಂಘ ಪರಿವಾರವು ಪ್ರಬಲ ಮಾಧ್ಯಮವೊಂದನ್ನು ಬಳಸಿಕೊಂಡು ಸುಳ್ಳುಗಳ ಮೂಲಕ ಕೇರಳಕ್ಕೆ ಅಪಮಾನ ಮಾಡುವ ಕಾರ್ಯವನ್ನು ಮಾಡುತ್ತಿದೆ” ಎಂದು ಸಿಪಿಐಎಂ ಯುವ ಸಂಘ ಆರೋಪಿಸಿದೆ.

ಶುಕ್ರವಾರ, ಕಾಂಗ್ರೆಸ್ ಪಕ್ಷವು ಪ್ರತ್ಯೇಕವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ”ಬರೀ ಸುಳ್ಳುಗಳಿಂದ ತುಂಬಿದ ಹಾಗೂ ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ಬಿಂಬಿಸಲು ಮಾಡಿರುವ ಪ್ರಯತ್ನದ ಈ ಸಿನಿಮಾದ ಪ್ರದರ್ಶನವನ್ನು ತಡೆಹಿಡಿಯಬೇಕು” ಎಂದು ಒತ್ತಾಯಿಸಿದೆ. ”ಈ ಸಿನಿಮಾ ಸುಳ್ಳುಗಳ ಕಂತೆ, 32,000 ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಹೇಳಿದ್ದಾರೆ, ಇಂತಹಾ ಹಲವು ಸುಳ್ಳುಗಳು ಈ ಸಿನಿಮಾದಲ್ಲಿವೆ. ನಮ್ಮ ರಾಜ್ಯದ ಘನತೆ ಹಾಳು ಮಾಡುವ ಹಾಗೂ ಒಂದು ಸಮುದಾಯದ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಈ ಸಿನಿಮಾದಲ್ಲಿದೆ. ಇದರ ಹಿಂದೆ ಸಂಘ ಪರಿವಾರ ಇದೆ” ಎಂದು ಕೇರಳ ವಿಪಕ್ಷ ನಾಯಕ ವಿಡಿ ಸತೀಸನ್ ಹೇಳಿದ್ದಾರೆ.

ದಿ ಕೇರಳ ಸ್ಟೋರಿ ಸಿನಿಮಾವನ್ನು ಸುದಿಪ್ತೊ ಸೇನ್ ನಿರ್ದೇಶನ ಮಾಡಿದ್ದು, ನಿರ್ಮಾಣ ಮಾಡಿರುವುದು ವಿಫುಲ್ ಶಾ. ಸಿನಿಮಾದಲ್ಲ ಅದಾ ಶರ್ಮಾ, ಯೋಗಿತಾ ಬಿಹಾನಿ, ಸೋನಿಯಾ ಬಲಾನಿ, ಸಿದಿ ಇದ್ನಾನಿ ನಟಿಸಿದ್ದಾರೆ. ಸಿನಿಮಾವು ಮೇ 5 ರಂದು ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ