The Kerala Story: 3ನೇ ವೀಕೆಂಡ್​ನಲ್ಲಿ ಮತ್ತೆ ಹೆಚ್ಚಾಯಿತು ‘ದಿ ಕೇರಳ ಸ್ಟೋರಿ’ ಕಮಾಯಿ; ಟೋಟಲ್​ ಕಲೆಕ್ಷನ್​ ಎಷ್ಟು?

The Kerala Story Box Office Collection: ನಟಿ ಅದಾ ಶರ್ಮಾ ಅವರಿಗೆ ‘ದಿ ಕೇರಳ ಸ್ಟೋರಿ’ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿದೆ. ನಿರ್ದೇಶಕ ಸುದೀಪ್ತೋ ಸೇನ್​ ಅವರ ಖ್ಯಾತಿ ಕೂಡ ಹೆಚ್ಚಿದೆ.

The Kerala Story: 3ನೇ ವೀಕೆಂಡ್​ನಲ್ಲಿ ಮತ್ತೆ ಹೆಚ್ಚಾಯಿತು ‘ದಿ ಕೇರಳ ಸ್ಟೋರಿ’ ಕಮಾಯಿ; ಟೋಟಲ್​ ಕಲೆಕ್ಷನ್​ ಎಷ್ಟು?
‘ದಿ ಕೇರಳ ಸ್ಟೋರಿ’ ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on:May 21, 2023 | 1:23 PM

ಸತತ ಮೂರನೇ ವೀಕೆಂಡ್​ನಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಅಬ್ಬರಿಸುತ್ತಿದೆ. ಸುದೀಪ್ತೋ ಸೇನ್​ ನಿರ್ದೇಶನ ಮಾಡಿರುವ ಈ ಸಿನಿಮಾ 200 ಕೋಟಿ ರೂಪಾಯಿ ಗಡಿ ಮುಟ್ಟಲು ಕೆಲವೇ ಕೋಟಿ ರೂಪಾಯಿ ಬಾಕಿ ಇದೆ. ಒಟ್ಟು 17 ದಿನಗಳ ಕಾಲ ಈ ಚಿತ್ರ ಅತ್ಯುತ್ತಮವಾಗಿ ಪ್ರದರ್ಶನ ಕಂಡಿದೆ. ಪರಿಣಾಮವಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ದ್ವಿಶಕತ ಬಾರಿಸಲು ಸಜ್ಜಾಗಿದೆ. 16 ದಿನಗಳ ಭರ್ಜರಿ ಪ್ರದರ್ಶನದ ಬಳಿಕ ಈ ಸಿನಿಮಾದ ಒಟ್ಟು ಕಲೆಕ್ಷನ್​ 187.47 ಕೋಟಿ ರೂಪಾಯಿ ಆಗಿದೆ. ನಟಿ ಅದಾ ಶರ್ಮಾ (Adah Sharma) ಅವರಿಗೆ ಈ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿದೆ. ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರ ಖ್ಯಾತಿ ಕೂಡ ಹೆಚ್ಚಿದೆ. ಸಿನಿಮಾದಲ್ಲಿ ನಟಿಸಿದ ಎಲ್ಲ ಕಲಾವಿದರಿಗೂ ಬೇಡಿಕೆ ಬಂದಿದೆ.

ಮೊದಲ ವೀಕೆಂಡ್​ನಲ್ಲಿ ಅಬ್ಬರಿಸಿದ ಸಿನಿಮಾ 2ನೇ ವೀಕೆಂಡ್​ನಲ್ಲೂ ಉತ್ತಮ ಫಾರ್ಮ್​ ಕಾಯ್ದುಕೊಂಡರೆ ನಿರ್ಮಾಪಕರಿಗೆ ಖುಷಿ ಆಗುತ್ತದೆ. ‘ದಿ ಕೇರಳ ಸ್ಟೋರಿ’ ಸಿನಿಮಾ 3ನೇ ವೀಕೆಂಡ್​ನಲ್ಲೂ ಹವಾ ಮಾಡುತ್ತಿರುವುದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ. ಈ ಸಿನಿಮಾಗೆ ಪ್ರೇಕ್ಷಕರಿಂದ ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಕ್ಕಿದೆ. ಇನ್ನೂ ಕೆಲವು ದಿನಗಳ ಕಾಲ ಚಿತ್ರಮಂದಿರದಲ್ಲಿ ಈ ಸಿನಿಮಾ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ಇದನ್ನೂ ಓದಿ: ಅಜ್ಜಿಗೆ ‘ದಿ ಕೇರಳ ಸ್ಟೋರಿ’ ಸಿನಿಮಾ ತೋರಿಸಲು ಭಯಬಿದ್ದ ನಟಿ ಅದಾ ಶರ್ಮಾ; ನಂತರ ಏನಾಯ್ತು?

ಕಾರಣಾಂತರಗಳಿಂದ ಈ ಸಿನಿಮಾ ವಿವಾದ ಸೃಷ್ಟಿಸಿತ್ತು. ಕಾಂಟ್ರವರ್ಸಿ ಮಾಡಿಕೊಂಡ ಸಿನಿಮಾದ ಬಗ್ಗೆ ಪ್ರೇಕ್ಷಕರು ಆಸಕ್ತಿ ತೋರಿಸುವುದು ಸಹಜ. ‘ದಿ ಕೇರಳ ಸ್ಟೋರಿ’ ವಿಚಾರದಲ್ಲೂ ಹಾಗೆಯೇ ಆಯಿತು. ಟೀಸರ್​ ರಿಲೀಸ್​ ಆದಾಗಲೇ ಈ ಚಿತ್ರಕ್ಕೆ ಕೆಲವರಿಂದ ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾ ಬಿಡುಗಡೆ ಆದಾಗ ವಿವಾದ​ ಜೋರಾಯಿತು. ಚಿತ್ರಕ್ಕೆ ಪ್ರಚಾರ ಸಿಗಲು ಇದೆಲ್ಲದೂ ಕಾರಣ ಆಯಿತು.

‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್​ ರಿಪೋರ್ಟ್​:

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

9ನೇ ದಿನ: 19.50 ಕೋಟಿ ರೂ.

10ನೇ ದಿನ: 23.75 ಕೋಟಿ ರೂ.

11ನೇ ದಿನ: 10.30 ಕೋಟಿ ರೂ.

12ನೇ ದಿನ: 9.65 ಕೋಟಿ ರೂ.

13ನೇ ದಿನ: 8.03 ಕೋಟಿ ರೂ.

14ನೇ ದಿನ: 7 ಕೋಟಿ ರೂ.

15ನೇ ದಿನ: 6.60 ಕೋಟಿ ರೂ.

16ನೇ ದಿನ: 9.15 ಕೋಟಿ ರೂ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:56 pm, Sun, 21 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ