AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮರ್ಶೆಯಲ್ಲಿ ಸೋತ ‘ಕೂಲಿ’ಗೆ ಮೊದಲ ಆಘಾತ ಕೊಟ್ಟ ಪ್ರೇಕ್ಷಕ

‘ಕೂಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಗಳಿಸಲು ವಿಫಲವಾಗಿದೆ. ಮೊದಲ ದಿನ ಭಾರಿ ಗಳಿಕೆ ಮಾಡಿದ್ದ ಚಿತ್ರ, ವಾರದ ದಿನಗಳಲ್ಲಿ ತೀವ್ರ ಕುಸಿತ ಕಂಡಿದೆ. ರಜನಿಕಾಂತ್, ಆಮೀರ್ ಖಾನ್, ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದ ಈ ಚಿತ್ರದ ಗಳಿಕೆ ಕುಸಿತಕ್ಕೆ ನೆಗೆಟಿವ್ ವಿಮರ್ಶೆಗಳೂ ಕಾರಣ ಎನ್ನಲಾಗುತ್ತಿದೆ.

ವಿಮರ್ಶೆಯಲ್ಲಿ ಸೋತ ‘ಕೂಲಿ’ಗೆ ಮೊದಲ ಆಘಾತ ಕೊಟ್ಟ ಪ್ರೇಕ್ಷಕ
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Aug 20, 2025 | 6:55 AM

Share

ಸಿನಿಮಾ ಉತ್ತಮವಾಗಿದ್ದರೆ ಅದು ವಾರಾಂತ್ಯ ಇರಲಿ ಅಥವಾ ವಾರದ ದಿನ ಇರಲಿ ಜನರು ಸಿನಿಮಾ ನೋಡಿಯೇ ನೋಡುತ್ತಾರೆ ಎಂಬುದಕ್ಕೆ ‘ಸು ಫ್ರಮ್ ಸೋ’ ಉತ್ತಮ ಉದಾಹರಣೆ. ಈ ಸಿನಿಮಾ ಮೊದಲ ಭಾನುವಾರ ಎಷ್ಟು ಗಳಿಕೆ ಮಾಡಿತ್ತೋ ಅದಕ್ಕೆ ಸರಿ ಸಮವಾಗಿ ವಾರದ ದಿನಗಳಲ್ಲೂ ಕಲೆಕ್ಷನ್ ಮಾಡಿತ್ತು. ಇನ್ನು, ಸಿನಿಮಾ ವಿಮರ್ಶೆಯಲ್ಲಿ ಸೋತರೆ ಆ ಚಿತ್ರದ ಅಬ್ಬರ ಇರೋದು ವಾರಾಂತ್ಯದಲ್ಲಿ ಮಾತ್ರ ಎಂಬುದಕ್ಕೆ ‘ಕೂಲಿ’ ಸಿನಿಮಾ (Coolie Movie) ಉತ್ತಮ ಉದಾಹರಣೆ. ಈ ಚಿತ್ರಕ್ಕೆ ಮೊದಲ ಆಘಾತ ಉಂಟಾಗಿದೆ.

‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್, ಆಮಿರ್ ಖಾನ್, ಉಪೇಂದ್ರ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಲೋಕೇಶ್ ಕನಗರಾಜ್ ನಿರ್ದೇಶನ ಇದೆ. ಕನ್ನಡದ ರಚಿತಾ ರಾಮ್ ಕೂಡ ಸಿನಿಮಾದಲ್ಲಿ ನೆಗೆಟಿವ್ ಶೇಡ್​ನ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಆ ನಿರೀಕ್ಷೆಯನ್ನು ಸಿನಿಮಾ ತಲುಪಿಲ್ಲ.

‘ಕೂಲಿ’ ಸಿನಿಮಾ ಮೊದಲ ದಿನ ಕಲೆಕ್ಷನ್ ಮಾಡಿದ್ದು 65 ಕೋಟಿ ರೂಪಾಯಿ. ಭಾನುವಾರ ಈ ಗಳಿಕೆ 35 ಕೋಟಿ ರೂಪಾಯಿಗೆ ಇಳಿದಿತ್ತು. ಸೋಮವಾರ 12 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಮಂಗಳವಾರದ ಗಳಿಕೆ ಒಂದಂಕಿಗೆ ಬಂದಿದೆ. ಈ ಚಿತ್ರ ಆಗಸ್ಟ್ 19ರಂದು ಕೇವಲ 9.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಚಿತ್ರಕ್ಕೆ ತೀವ್ರ ಹಿನ್ನಡೆ ತಂದಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್ 216 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ
Image
ಅಂದು ಹೇಳಿದ್ದು ನಿಜವಾಯ್ತು; ಮಹೇಶ್ ಬಾಬು ಹಳೆಯ ಹೇಳಿಕೆ ವೈರಲ್
Image
ತೀವ್ರವಾಗಿ ಕುಸಿದ ‘ಕೂಲಿ’ ಕಲೆಕ್ಷನ್; ಒಂದಂಕಿಗೆ ಬಂತು ‘ವಾರ್ 2’ ಗಳಿಕೆ
Image
ಬಿಗ್ ಬಾಸ್​ಗೆ ಎಂಟ್ರಿ ಕೊಡಲಿದೆ ಸೆನ್ಸೇಷನ್ ಸೃಷ್ಟಿಸಿದ ಜೋಡಿ
Image
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ

ಇದನ್ನೂ ಓದಿ: ತೀವ್ರವಾಗಿ ಕುಸಿದ ‘ಕೂಲಿ’ ಕಲೆಕ್ಷನ್; ಒಂದಂಕಿಗೆ ಬಂತು ‘ವಾರ್ 2’ ಗಳಿಕೆ

‘ಕೂಲಿ’ ಸಿನಿಮಾದ ಗಳಿಕೆ ಹೀಗೆಯೇ ಮುಂದುವರಿದರೆ ದೊಡ್ಡ ಮಟ್ಟದ ಕಲೆಕ್ಷನ್ ಮಾಡೋದು ಅನುಮಾನ ಎನ್ನಲಾಗುತ್ತಿದೆ. ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗರಿಷ್ಠ 500-600 ಕೋಟಿ ರೂಪಾಯಿ ಗಳಿಸಲು ಮಾತ್ರ ಸಾಧ್ಯವಾಗಬಹುದು ಎಂದು ಅನೇಕರು ಊಹಿಸಿದ್ದಾರೆ. ವಾರಾಂತ್ಯದಲ್ಲಿ ಹಾಗೂ ಗಣೇಶ ಚತುರ್ಥಿ ರಜೆಯ ಸಂದರ್ಭದಲ್ಲಿ ಸಿನಿಮಾ ಎಷ್ಟು ಕಲೆಕ್ಷನ್ ಮಾಡುತ್ತದೆ ಎಂಬುದರ ಮೇಲೆ ಸಿನಿಮಾದ ಒಟ್ಟಾರೆ ಗಲ್ಲಾ ಪೆಟ್ಟಿಗೆಯ ಗಳಿಕೆ ನಿರ್ಧಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ