AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಶತಕದ ಸನಿಹದಲ್ಲಿ ‘ಕ್ರೂ’ ಸಿನಿಮಾ ಕಲೆಕ್ಷನ್​; ವಿದೇಶದಲ್ಲೂ ಅಬ್ಬರ

ಒಟ್ಟು 5 ದಿನಗಳಲ್ಲಿ ‘ಕ್ರೂ’ ಸಿನಿಮಾ ಭಾರತದ ಮಾರುಕಟ್ಟೆಯಲ್ಲಿ 41.12 ಕೋಟಿ ರೂಪಾಯಿ ಬಾಚಿಕೊಂಡಿದೆ. ವಿದೇಶದ ಗಳಿಕೆಯನ್ನೂ ಸೇರಿಸಿದರೆ 77.33 ಕೋಟಿ ರೂಪಾಯಿ ಆಗಲಿದೆ. ವಿದೇಶದ ಅನೇಕ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಎರಡನೇ ವೀಕೆಂಡ್​ನಲ್ಲಿ ಕೂಡ ‘ಕ್ರೂ’ ಸಿನಿಮಾದ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

ಅರ್ಧ ಶತಕದ ಸನಿಹದಲ್ಲಿ ‘ಕ್ರೂ’ ಸಿನಿಮಾ ಕಲೆಕ್ಷನ್​; ವಿದೇಶದಲ್ಲೂ ಅಬ್ಬರ
ಟಬು, ಕರೀನಾ ಕಪೂರ್​ ಖಾನ್​, ಕೃತಿ ಸನೋನ್​
ಮದನ್​ ಕುಮಾರ್​
|

Updated on: Apr 03, 2024 | 6:41 PM

Share

ಟಬು, ಕರೀನಾ ಕಪೂರ್​ ಖಾನ್​, ಕೃತಿ ಸನೋನ್​ (Kriti Sanon) ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಕ್ರೂ’ (Crew) ಸಿನಿಮಾಗೆ ಉತ್ತಮವಾಗಿ ಕಮಾಯಿ ಆಗುತ್ತಿದೆ. ಮಾರ್ಚ್​ 29ರಂದು ಈ ಚಿತ್ರ ಬಿಡುಗಡೆ ಆಯಿತು. ಮೊದಲ ದಿನವೇ ಒಳ್ಳೆಯ ಓಪನಿಂಗ್​ ಪಡೆದುಕೊಂಡಿತು. ಪ್ರೇಕ್ಷಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಅದರ ಪರಿಣಾಮವಾಗಿ ‘ಕ್ರೂ’ ಸಿನಿಮಾದ ಕಲೆಕ್ಷನ್​ (Crew Movie Collection) ಈಗ 50 ಕೋಟಿ ರೂಪಾಯಿ ಸನಿಹದಲ್ಲಿದೆ. ಐದು ದಿನಕ್ಕೆ ಈ ಸಿನಿಮಾದ ಒಟ್ಟು ಗಳಿಕೆ 41.12 ಕೋಟಿ ರೂಪಾಯಿ ಆಗಿದೆ. ಇದರಿಂದ ಕೃತಿ ಸನೋನ್​, ಟಬು ಹಾಗೂ ಕರೀನಾ ಕಪೂರ್​ ಖಾನ್​ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಮೊದಲ ದಿನ (ಮಾರ್ಚ್​ 29) ‘ಕ್ರೂ’ ಸಿನಿಮಾ 10.28 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಎರಡನೇ ದಿನವಾದ ಶನಿವಾರ (ಮಾ.30) ಈ ಚಿತ್ರಕ್ಕೆ 10.87 ಕೋಟಿ ರೂಪಾಯಿ ಆದಾಯ ಹರಿದುಬಂತು. ಮೂರನೇ ದಿನ ಭಾನುವಾರ ಆದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಸಿನಿಮಾ ನೋಡಿದ್ದು, 11.45 ಕೋಟಿ ರೂಪಾಯಿ ಗಳಿಕೆ ಆಯಿತು. ಸಹಜವಾಗಿಯೇ ಸೋಮವಾರ (ಏಪ್ರಿಲ್​ 1) ಕಲೆಕ್ಷನ್​ ಕುಸಿದಿದ್ದು, 4.52 ಕೋಟಿ ರೂಪಾಯಿ ಕಲೆಕ್ಷನ್​ ಆಯಿತು. ಮಂಗಳವಾರ (ಏಪ್ರಿಲ್​ 2) ನಾಲ್ಕು ಕೋಟಿ ರೂಪಾಯಿ ಸಂಗ್ರಹ ಆಗಿದೆ.

ಇದನ್ನೂ ಓದಿ: ‘ಕ್ರೂ’ ಸಿನಿಮಾದಿಂದ ಗೆದ್ದು ಬೀಗಿದ ಬಾಲಿವುಡ್​ ನಟಿ ಕೃತಿ ಸನೋನ್​

ಒಟ್ಟು 5 ದಿನಗಳಲ್ಲಿ ‘ಕ್ರೂ’ ಸಿನಿಮಾ ಭಾರತದ ಮಾರುಕಟ್ಟೆಯಲ್ಲಿ 41.12 ಕೋಟಿ ರೂಪಾಯಿ ಬಾಚಿಕೊಂಡಿದೆ. ವಿದೇಶದ ಗಳಿಕೆಯನ್ನೂ ಸೇರಿಸಿದರೆ 77.33 ಕೋಟಿ ರೂಪಾಯಿ ಆಗಲಿದೆ. ವಿದೇಶದ ಅನೇಕ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಎರಡನೇ ವೀಕೆಂಡ್​ನಲ್ಲಿ ಕೂಡ ‘ಕ್ರೂ’ ಸಿನಿಮಾದ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ. ಯಾಕೆಂದರೆ, ಈ ವಾರ (ಏಪ್ರಿಲ್​ 5) ಯಾವುದೇ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತಿಲ್ಲ. ಅದರಿಂದ ‘ಕ್ರೂ’ ಸಿನಿಮಾಗೆ ಅನುಕೂಲ ಆಗಲಿದೆ.

ಗಗನ ಸಖಿಯರ ಕಥೆಯನ್ನು ‘ಕ್ರೂ’ ಸಿನಿಮಾ ಹೊಂದಿದೆ. ಕರೀನಾ ಕಪೂರ್​ ಖಾನ್​, ಟಬು ಹಾಗೂ ಕೃತಿ ಸನೋನ್​ ಅವರು ಗಗನ ಸಖಿಯರಾಗಿ ಕಾಣಿಸಿಕೊಂಡಿದ್ದಾರೆ. ರಾಜೇಶ್​ ಕೃಷ್ಣನ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಏಕ್ತಾ ಕಪೂರ್​, ರಿಯಾ ಕಪೂರ್​, ಅನಿಲ್​ ಕಪೂರ್​, ದಿಗ್ವಿಜಯ್​ ಪುರೋಹಿತ್​ ಅವರು ನಿರ್ಮಾಣ ಮಾಡಿದ್ದಾರೆ. ದಿಲ್ಜಿತ್​ ದೋಸಾಂಜ್​, ಕಪಿಲ್​ ಶರ್ಮಾ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?