Waheeda Rehman: ಖ್ಯಾತ ನಟಿ ವಹೀದಾ ರೆಹಮಾನ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ; ಅಭಿನಂದನೆಗಳ ಮಹಾಪೂರ
Dadasaheb Phalke Award: ಬಣ್ಣದ ಲೋಕದಲ್ಲಿ 5 ದಶಕಗಳ ಕಾಲ ಸಕ್ರಿಯವಾಗಿದ್ದ ವಹೀದಾ ರೆಹಮಾನ್ ಅವರು 90ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮನಮೋಹಕವಾದ ತಮ್ಮ ಅಭಿನಯದ ಮೂಲಕ ಅವರು ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಈಗ ಅವರು ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಭಾರತೀಯ ಚಿತ್ರರಂಗದ ಜನಪ್ರಿಯ ನಟಿ ವಹೀದಾ ರೆಹಮಾನ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ಘೋಷಣೆ ಮಾಡಲಾಗಿದೆ. ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಹಿರಿಯ ನಟಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಬಣ್ಣದ ಲೋಕದಲ್ಲಿ 5 ದಶಕಗಳ ಕಾಲ ಸಕ್ರಿಯವಾಗಿದ್ದ ವಹೀದಾ ರೆಹಮಾನ್ (Waheeda Rehman) ಅವರು 90ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮನಮೋಹಕವಾದ ತಮ್ಮ ಅಭಿನಯದ ಮೂಲಕ ಅವರು ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಹೆಚ್ಚಾಗಿ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಅವರು ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆದ ಬಳಿಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ವಹೀದಾ ರೆಹಮಾನ್ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈಗಾಗಲೇ ರಾಷ್ಟ್ರ ಪ್ರಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿ, ಪದ್ಮಶ್ರೀ, ಪದ್ಮ ಭೂಷಣ ಮುಂತಾದ ಗೌರವಗಳು ಅವರಿಗೆ ಸಂದಿವೆ. ಇಂದಿನ ಅನೇಕ ನಟಿಯರಿಗೆ ಅವರು ಮಾದರಿ ಆಗಿದ್ದಾರೆ. ಬಾಲಿವುಡ್ ಹಲವು ಹೀರೋಗಳ ಜೊತೆ ಅವರು ಸಿನಿಮಾ ಮಾಡಿದ್ದಾರೆ.
I feel an immense sense of happiness and honour in announcing that Waheeda Rehman ji is being bestowed with the prestigious Dadasaheb Phalke Lifetime Achievement Award this year for her stellar contribution to Indian Cinema.
Waheeda ji has been critically acclaimed for her…
— Anurag Thakur (@ianuragthakur) September 26, 2023
ವಹೀದಾ ರೆಹಮಾನ್ ಅವರ ವೃತ್ತಿಜೀವನ ಆರಂಭ ಆಗಿದ್ದು 1955ರಲ್ಲಿ. ತೆಲುಗಿನ ‘ರೋಜುಲು ಮಾರಾಯಿ’ ಸಿನಿಮಾ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ದೇವ್ ಆನಂದ್ ನಟನೆಯ ‘ಸಿಐಡಿ’ ಸಿನಿಮಾ ಮೂಲಕ ವಹೀದಾ ರೆಹಮಾನ್ ಅವರು ಬಾಲಿವುಡ್ಗೆ ಎಂಟ್ರಿ ಪಡೆದರು. ಬಳಿಕ ‘ಪ್ಯಾಸಾ’, ‘ಕಾಗಜ್ ಕೆ ಫೂಲ್’, ‘ಸಾಹಿಬ್ ಬಿಬಿ ಔರ್ ಗುಲಾಮ್’ ಮುಂತಾದ ಸಿನಿಮಾಗಳ ಮೂಲಕ ಅವರು ಅಪಾರ ಜನಪ್ರಿಯತೆ ಗಳಿಸಿದರು.
ಇದನ್ನೂ ಓದಿ: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಬಸ್ ಚಾಲಕ ರಾಜ್ ಬಹದ್ದೂರ್ ಅವರಿಗೆ ಸಮರ್ಪಿಸಿದ ರಜನಿಕಾಂತ್!
‘ಭಾರತೀಯ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ವಹೀದಾ ರೆಹಮಾನ್ ಅವರಿಗೆ ಈ ವರ್ಷದ ದಾದಾ ಸಾಹೇಬ್ ಫಾಲ್ಕೆ ಅವಾರ್ಡ್ ಘೋಷಣೆ ಮಾಡಲು ನನಗೆ ಅತೀವ ಸಂತಸ ಆಗುತ್ತಿದೆ. ಬಾಲಿವುಡ್ನ ಅನೇಕ ಸಿನಿಮಾಗಳಲ್ಲಿ ಅವರು ಮನೋಜ್ಞವಾಗಿ ಅಭಿನಯಿಸಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಪಡೆಯಲಿರುವ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:19 pm, Tue, 26 September 23