Deepika Padukone: ದೀಪಿಕಾ- ಸಿಂಧು ಬ್ಯಾಡ್ಮಿಂಟನ್ ಆಟ ಬಲು ಜೋರು; ಬಯೋಪಿಕ್ ಮಾಡ್ತೀರಾ ಎಂದು ಪ್ರಶ್ನಿಸಿದ ಫ್ಯಾನ್ಸ್

PV Sindhu: ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಹಾಗೂ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಜೊತೆಯಾಗಿ ಬ್ಯಾಡ್ಮಿಂಟನ್ ಆಡಿರುವುದು ಅಭಿಮಾನಿಗಳ ಕುತೂಹಲ ಕೆರಳಿಸಿದೆ.

Deepika Padukone: ದೀಪಿಕಾ- ಸಿಂಧು ಬ್ಯಾಡ್ಮಿಂಟನ್ ಆಟ ಬಲು ಜೋರು; ಬಯೋಪಿಕ್ ಮಾಡ್ತೀರಾ ಎಂದು ಪ್ರಶ್ನಿಸಿದ ಫ್ಯಾನ್ಸ್
ದೀಪಿಕಾ ಪಡುಕೋಣೆ, ಪಿವಿ ಸಿಂಧು (Credits: Deepika Padukone/ Instagram)
Follow us
| Updated By: shivaprasad.hs

Updated on:Sep 22, 2021 | 10:08 AM

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರ್ತಿ ಹಾಗೂ ಹಾಲಿ ಒಲಂಪಿಕ್ಸ್ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿಯ ಪಂದ್ಯದ್ದೇ ದೊಡ್ಡ ಚರ್ಚೆಯಾಗುತ್ತಿದೆ. ಜೊತೆಗೆ ಇದು ಭಾರತದ ಮತ್ತೊಂದು ಮಹೋನ್ನತ ಬಯೋಪಿಕ್​ಗೂ ಸಾಕ್ಷಿಯಾಗಬಹುದಾ ಎಂಬ ಚರ್ಚೆಯೂ ಅಭಿಮಾನಿ ವಲಯದಲ್ಲಿ ಜೋರಾಗಿಯೇ ನಡೆಯುತ್ತಿದೆ. ಹೌದು. ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಹಾಗೂ ಪಿವಿ ಸಿಂಧು ಅವರ ಪಂದ್ಯಾಟದ್ದೇ ಎಲ್ಲೆಡೆ ಚರ್ಚೆಯಾಗುತ್ತಿರುವುದು. ದೀಪಿಕಾ ಬಾಲಿವುಡ್ ಪ್ರವೇಶಕ್ಕೂ ಮುನ್ನ ಬ್ಯಾಡ್ಮಿಂಟನ್​ನಲ್ಲಿ ರಾಷ್ಟ್ರೀಯ ಮಟ್ಟದ ಆಟಗಾರ್ತಿಯಾಗಿದ್ದವರು. ಸದ್ಯ ಪಿವಿ ಸಿಂಧು ಮತ್ತು ದೀಪಿಕಾ ಆಟದ ಝಲಕ್ ಫ್ಯಾನ್ಸ್ ಮನಗೆದ್ದಿದೆ.

‘ಇದು ಮಾಮೂಲಿಯಂತೆ ಮತ್ತೊಂದು ದಿನ. ಸಿಂಧು ಅವರೊಂದಿಗೆ ಆಟವಾಡುತ್ತಾ ಕ್ಯಾಲೋರಿಗಳನ್ನು ಕಳೆದುಕೊಳ್ಳುತ್ತಿದ್ದೇನೆ’ ಎಂದು ಬರೆದುಕೊಂಡು ದೀಪಿಕಾ ಆಟದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಪುತ್ರಿಯಾಗಿರುವ ದೀಪಿಕಾ, ಸಿಂಧುಗೆ ಭರ್ಜರಿ ಪ್ರತಿರೋಧವನ್ನೇ ಒಡ್ಡಿದ್ದಾರೆ. ಸದ್ಯ ಕೆಲ ಸಮಯಗಳಿಂದ ದೀಪಿಕಾ ಹಾಗೂ ಸಿಂಧು ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಕುತೂಹಲ ಕೆರಳಿಸಿದೆ. ‘ಪಿವಿ ಸಿಂಧು ಬಯೋಪಿಕ್​ ಸದ್ಯದಲ್ಲಿಯೇ ಬರಲಿದೆ…’ ಎಂದು ಕೆಲವರು ಕಾಮೆಂಟ್ ಮಾಡಿದ್ದರೆ, ಮತ್ತೆ ಕೆಲವರು ‘ಬಯೋಪಿಕ್​ಗೆ ಸಿದ್ಧತೆ ನಡೆಸುತ್ತಿರುವಂತೆ ತೋರುತ್ತಿದೆ’ ಎಂದು ಹೇಳಿದ್ದಾರೆ. ಈ ಪ್ರಶ್ನೆಗೆ ತಾರೆಯರು ಉತ್ತರಿಸದಿದ್ದರೂ, ಬಯೋಪಿಕ್​ಗಾಗಿ ಅಭಿಮಾನಿಗಳು ಕಾಯುತ್ತಿರುವುದು ಸುಳ್ಳಲ್ಲ.

ದೀಪಿಕಾ ಹಂಚಿಕೊಂಡ ಪೋಸ್ಟ್:

ಕೆಲ ದಿನಗಳ ಹಿಂದಷ್ಟೇ ದೀಪಿಕಾ ತಮ್ಮ ಪತಿ ರಣವೀರ್ ಅವರೊಡನೆ ಸಿಂಧು ಅವರನ್ನು ಭೇಟಿಯಾಗಿದ್ದರು. ಆ ಸಂದರ್ಭದ ಚಿತ್ರಗಳು ವೈರಲ್ ಆಗಿದ್ದವು. ಚಿತ್ರಗಳನ್ನು ಹಂಚಿಕೊಂಡಿದ್ದ ರಣವೀರ್ ಸಿಂಗ್ ‘ಸ್ಮಾಷಿಂಗ್ ಟೈಮ್’ ಎಂದು ಬರೆದುಕೊಂಡಿದ್ದರು. ಅದೇ ಚಿತ್ರಗಳನ್ನು ಹಂಚಿಕೊಂಡಿದ್ದ ಪಿವಿ ಸಿಂಧು, ‘ಈ ಭೇಟಿಯನ್ನು ನಾವೆಷ್ಟು ಎಂಜಾಯ್ ಮಾಡಿದ್ದೇವೆಂದು, ನಮ್ಮ ಮುಖದಲ್ಲಿರುವ ನಗುವೇ ಹೇಳುತ್ತದೆ’ ಎಂದು ಬರೆದುಕೊಂಡಿದ್ದರು.

ಸಿಂಧು ಹಂಚಿಕೊಂಡಿದ್ದ ಪೋಸ್ಟ್:

View this post on Instagram

A post shared by Sindhu Pv (@pvsindhu1)

ಪಿವಿ ಸಿಂಧು ಇತ್ತೀಚೆಗೆ ನಡೆದ ಟೊಕಿಯೊ ಒಲಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಅವರ ಸಾಧನೆಗೆ ಇಡೀ ದೇಶ ಹೆಮ್ಮೆಪಟ್ಟಿತ್ತು.

ಇದನ್ನೂ ಓದಿ:

ಬಸ್ಸಿನಲ್ಲಿ ‘ಗೀತ ಗೋವಿಂದಂ’ ಕಿಸ್ಸು! ಮುತ್ತು ಕೊಟ್ಟಿದ್ದ ಬಳ್ಳಾರಿ ಮೂಲದ ಇಂಜಿನಿಯರ್ ಅರೆಸ್ಟು

ಸ್ಪರ್ಧಿ ತನ್ನೊಂದಿಗೆ ಫ್ಲರ್ಟ್ ಮಾಡಿದಾಗ ಕೆಬಿಸಿ ನಿರ್ಮಾಪಕರಿಗೆ ಶೋ ನಿಲ್ಲಿಸಲು ಹೇಳಿದ ಅಮಿತಾಭ್!; ಕಾರಣವೇನು?

(Deepika Padukone and PV Sindhu playing Badminton so fans asking is there is any chance of Biopic)

Published On - 9:59 am, Wed, 22 September 21

Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ