Ranveer Singh: ‘83’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಊರು ಬಿಟ್ಟ ರಣವೀರ್- ದೀಪಿಕಾ; ಹೊರಟಿದ್ದೆಲ್ಲಿಗೆ?

Deepika Padukone: ‘83’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮುಂಬೈ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

Ranveer Singh: ‘83’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಊರು ಬಿಟ್ಟ ರಣವೀರ್- ದೀಪಿಕಾ; ಹೊರಟಿದ್ದೆಲ್ಲಿಗೆ?
ದೀಪಿಕಾ- ರಣವೀರ್
Follow us
TV9 Web
| Updated By: Digi Tech Desk

Updated on:Dec 28, 2021 | 2:40 PM

ರಣವೀರ್ ಸಿಂಗ್ (Ranveer Singh) ಹಾಗೂ ದೀಪಿಕಾ ಪಡುಕೋಣೆ (Deepika Padukone) ‘83’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡ ಚಿತ್ರ ಬಾಕ್ಸಾಫೀಸ್​ನಲ್ಲೂ ಉತ್ತಮ ಗಳಿಕೆ ಕಾಣುತ್ತಿದೆ. ಇಷ್ಟೆಲ್ಲಾ ಯಶಸ್ಸು ಕಾಣುತ್ತಿದ್ದರೂ ಈ ಜೋಡಿ ಇದೀಗ ಊರು ಬಿಟ್ಟಿದ್ದಾರೆ. ಹೌದು. ಈ ತಾರಾ ಜೋಡಿ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದು, ಹೊಸ ವರ್ಷದ ಸಂಭ್ರಮವನ್ನು ಆಚರಿಸಲು ಪ್ರವಾಸಕ್ಕೆ ತೆರಳಿದ್ದಾರೆ. ಸದ್ಯ ಸಿನಿಮಾ ಕೆಲಸಗಳಿಂದ ಬಿಡುವು ಪಡೆದಿರುವ ಈ ಜೋಡಿ, 2022ನ್ನು ಭರ್ಜರಿಯಾಗಿ ಸ್ವಾಗತಿಸಲು ಪ್ರವಾಸಕ್ಕೆ ಹೊರಟಿದ್ದಾರೆ. ಬಲ್ಲ ಮೂಲಗಳ ಪ್ರಕಾರ ದೀಪಿಕಾ ಹಾಗೂ ರಣವೀರ್ ಸೆಲೆಬ್ರಿಟಿಗಳ ನೆಚ್ಚಿನ ತಾಣ ಮಾಲ್ಡೀವ್ಸ್​ಗೆ (Maldives) ತೆರಳಿದ್ದಾರೆ ಎನ್ನಲಾಗಿದೆ. ಈ ಜೋಡಿ ಮುಂಬೈ ಏರ್​ಪೋರ್ಟ್​​ನಲ್ಲಿ (Mumbai Airport) ನಿನ್ನೆ ಕಾಣಿಸಿಕೊಂಡಿದ್ದರು. ಈ ವೇಳೆ ನೆರೆದಿದ್ದ ಪಾಪರಾಜಿಗಳಿಗೆ ಸಖತ್ ಪೋಸ್ ನೀಡಿದ್ದರು. ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ದೀಪಿಕಾ ಹಾಗೂ ರಣವೀರ್ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದು ಹೀಗೆ:

View this post on Instagram

A post shared by yogen shah (@yogenshah_s)

Ranveer and Deepika

ದೀಪಿಕಾ- ರಣವೀರ್

 ರಣವೀರ್ ಹಾಗೂ ದೀಪಿಕಾ ತೆರೆ ಹಂಚಿಕೊಂಡಿರುವ ಬಹುನಿರೀಕ್ಷಿತ ಚಿತ್ರ ‘83’ ಉತ್ತಮ ಪ್ರತಿಕ್ರಿಯೆಗಳ ನಡುವೆಯೂ ಗಳಿಕೆಯಲ್ಲಿ ಹಿನ್ನೆಡೆ ಕಂಡಿದೆ. ಮೂರನೇ ದಿನದ ಅಂತ್ಯಕ್ಕೆ ಚಿತ್ರದ ಗಳಿಕೆ ಸುಮಾರು ₹ 50 ಕೋಟಿಯ ಸನಿಹದಲ್ಲಿತ್ತು ಎಂದು ಬಾಕ್ಸಾಫೀಸ್ ಪಂಡಿತರು ಲೆಕ್ಕಾಚಾರ ಹಾಕಿದ್ದರು.

ದೀಪಿಕಾ ಚಿತ್ರಗಳ ವಿಷಯಕ್ಕೆ ಬಂದರೆ ಅವರ ನೂತನ ಚಿತ್ರ ‘ಗೆಹರಾಯಿಯಾ’ (Gehraiyaan) ಬಿಡುಗಡೆಗೆ ಸಿದ್ಧವಾಗಿದೆ. ನೇರವಾಗಿ ಒಟಿಟಿಯಲ್ಲಿ ತೆರೆಕಾಣುತ್ತಿರುವ ಈ ಚಿತ್ರವನ್ನು ಕರಣ್ ಜೋಹರ್ (Karan Johar) ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ. ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿ ದೀಪಿಕಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಜನವರಿ 25ರಂದು ಆಮೆಜಾನ್ ಪ್ರೈಮ್​ನಲ್ಲಿ ಚಿತ್ರ ತೆರೆಕಾಣಲಿದೆ.

ಇದನ್ನೂ ಓದಿ:

ಏರಲೇ ಇಲ್ಲ ರಣವೀರ್​ ಸಿಂಗ್​ ನಟನೆಯ ‘83’ ಸಿನಿಮಾ ಕಲೆಕ್ಷನ್​; ಇದಕ್ಕೆ ಕಾರಣಗಳೇನು?

ಸಹ ನಟನಿಗೆ ದೀಪಿಕಾ ಪಡುಕೋಣೆ ಕಿಸ್​; ವೈರಲ್​ ಆಗುತ್ತಿದೆ ಹೊಸ ಸಿನಿಮಾದ ಟೀಸರ್​

Published On - 9:53 am, Tue, 28 December 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ