IMDb ಟಾಪ್​ 100 ಸೆಲೆಬ್ರಿಟಿಗಳಲ್ಲಿ ನಂಬರ್​ 1 ಸ್ಥಾನ ಪಡೆದ ದೀಪಿಕಾ ಪಡುಕೋಣೆ

ದಿನದಿಂದ ದಿನಕ್ಕೆ ಬಾಲಿವುಡ್​ ನಟಿ ದೀಪಿಕಾ ಪಡುಕೋಣೆ ಅವರ ಖ್ಯಾತಿ ಹೆಚ್ಚುತ್ತಿದೆ. ಕಳೆದ 10 ವರ್ಷಗಳಲ್ಲಿ ಐಎಂಡಿಬಿ ವೆಬ್​ಸೈಟ್​ನಲ್ಲಿ ಅತಿ ಹೆಚ್ಚು ವೀಕ್ಷಣೆಗೆ ಒಳಪಟ್ಟ 100 ಇಂಡಿಯನ್​ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ದೀಪಿಕಾ ಪಡುಕೋಣೆ ಹೆಸರು ಅಗ್ರಸ್ಥಾನದಲ್ಲಿದೆ. ಈ ಸಾಧನೆಗಾಗಿ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

IMDb ಟಾಪ್​ 100 ಸೆಲೆಬ್ರಿಟಿಗಳಲ್ಲಿ ನಂಬರ್​ 1 ಸ್ಥಾನ ಪಡೆದ ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ

Updated on: May 29, 2024 | 4:14 PM

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗ ದೀಪಿಕಾ ಪಡುಕೋಣೆ ಅವರ ಮುಡಿಗೆ ಇನ್ನೊಂದು ಗರಿ ಸೇರ್ಪಡೆ ಆಗಿದೆ. ಐಎಂಡಿಬಿ (IMDb) ಪ್ರಕಟಿಸಿದ ಟಾಪ್​ 100 ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ದೀಪಿಕಾ ಪಡುಕೋಣೆ ಅವರಿಗೆ ನಂಬರ್​ 1 ಸ್ಥಾನ ಸಿಕ್ಕಿದೆ. ಶಾರುಖ್​ ಖಾನ್​ (Shah Rukh Khan), ಆಮಿರ್​ ಖಾನ್​, ಸಲ್ಮಾನ್​ ಖಾನ್​ ಮುಂತಾದ ಘಟಾನುಘಟಿ ಸ್ಟಾರ್​ಗಳನ್ನು ದೀಪಿಕಾ ಹಿಂದಿಕ್ಕಿದ್ದಾರೆ. ತಮ್ಮ ನೆಚ್ಚಿನ ನಟಿಯ ಜನಪ್ರಿಯತೆಯನ್ನು ಕಂಡು ಅಭಿಮಾನಿಗಳು ಹಿರಿಹಿರಿ ಹಿಗ್ಗಿದ್ದಾರೆ.

2014ರ ಏಪ್ರಿಲ್​ನಿಂದ 2024ರ ಏಪ್ರಿಲ್​ ತನಕ ಐಎಂಡಿಬಿ ವೆಬ್​ಸೈಟ್​ನಲ್ಲಿ ಜನರು ಅತಿ ಹೆಚ್ಚು ವೀಕ್ಷಿಸಿದ ಸೆಲೆಬ್ರಿಟಿ ಪ್ರೊಫೈಲ್​ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಸಿನಿಮಾಗಳು, ವೆಬ್​ ಸಿರೀಸ್​ಗಳು, ಕಲಾವಿದರು ಹಾಗೂ ತಂತ್ರಜ್ಞರ ಮಾಹಿತಿಯನ್ನು ಐಎಂಡಿಬಿ ವೆಬ್​ಸೈಟ್​ ಒಳಗೊಂಡಿದೆ. ದೀಪಿಕಾ ಪಡುಕೋಣೆ ಅವರ ಪುಟವನ್ನು ಅತಿ ಹೆಚ್ಚಿನ ಜನರು ವೀಕ್ಷಿಸಿದ್ದಾರೆ.

ಇದನ್ನೂ ಓದಿ: ಧರಿಸಿದ ಬಟ್ಟೆ ಮಾರಾಟಕ್ಕಿಟ್ಟ ದೀಪಿಕಾ ಪಡುಕೋಣೆ; ಕೆಲವೇ ನಿಮಿಷದಲ್ಲಿ ಸೋಲ್ಡ್​ ಔಟ್

ಮೊದಲ ಸ್ಥಾನದಲ್ಲಿ ದೀಪಿಕಾ ಪಡುಕೋಣೆ ಇದ್ದರೆ, ಎರಡನೇ ಸ್ಥಾನದಲ್ಲಿ ಶಾರುಖ್​ ಖಾನ್ ಇದ್ದಾರೆ. ಮೂರನೇ ಸ್ಥಾನ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸಿಕ್ಕಿದೆ. 4ನೇ ಸ್ಥಾನದಲ್ಲಿ ಆಲಿಯಾ ಭಟ್​ ಇದ್ದಾರೆ. 5ನೇ ಸ್ಥಾನವನ್ನು ಇರ್ಫಾನ್​ ಖಾನ್​ ಪಡೆದುಕೊಂಡಿದ್ದಾರೆ. ಆಮಿರ್​ ಖಾನ್​ ಅವರಿಗೆ 6ನೇ ಸ್ಥಾನವಿದೆ. 7ನೇ ಸ್ಥಾನ ಸುಶಾಂತ್​ ಸಿಂಗ್​ ರಜಪೂತ್​ ಅವರಿಗೆ ಸಿಕ್ಕಿದೆ. 8ನೇ ಸ್ಥಾನದಲ್ಲಿ ಸಲ್ಮಾನ್​ ಖಾನ್​, 9ನೇ ಸ್ಥಾನದಲ್ಲಿ ಹೃತಿಕ್ ರೋಷನ್​ ಹಾಗೂ 10ನೇ ಸ್ಥಾನದಲ್ಲಿ ಅಕ್ಷಯ್​ ಕುಮಾರ್​ ಇದ್ದಾರೆ. ಯಶ್ ಅವರು 89ನೇ ಸ್ಥಾನ ಪಡೆದಿದ್ದಾರೆ.

ದೀಪಿಕಾ ಪಡುಕೋಣೆ ಅವರು ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಈಗಲೂ ಅವರಿಗೆ ಸಖತ್​ ಬೇಡಿಕೆ ಇದೆ. ಸದ್ಯಕ್ಕೆ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದುಕೊಂಡಿದ್ದಾರೆ. ‘ಸಿಂಗಂ ಅಗೇನ್​’, ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅವರು ನಟಿಸಿದ್ದು, ಈ ಸಿನಿಮಾಗಳ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us