ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್​ 1; ಕಂಗನಾ, ಆಲಿಯಾಗೆ ಎಷ್ಟನೇ ಸ್ಥಾನ?

ದೀಪಿಕಾ ಪಡುಕೋಣೆ ಅವರು ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ಕಾರಣದಿಂದ ಅವರು ಸದ್ಯಕ್ಕೆ ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ. ಅವರು ನಟಿಸಿರುವ ‘ಫೈಟರ್​’ ಸಿನಿಮಾ ಈ ವರ್ಷ ಆರಂಭದಲ್ಲಿ ಬಿಡುಗಡೆ ಆಯಿತು. ಈಗ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್​ಗೆ ಸಿದ್ಧವಾಗಿದೆ. 2024ರಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿಯಲ್ಲಿ ದೀಪಿಕಾ ಪಡುಕೋಣೆ ಅವರಿಗೆ ನಂ.1 ಸ್ಥಾನ ಸಿಕ್ಕಿದೆ.

ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್​ 1; ಕಂಗನಾ, ಆಲಿಯಾಗೆ ಎಷ್ಟನೇ ಸ್ಥಾನ?
ದೀಪಿಕಾ ಪಡುಕೋಣೆ, ಕಂಗನಾ ರಣಾವತ್​, ಆಲಿಯಾ ಭಟ್​
Follow us
ಮದನ್​ ಕುಮಾರ್​
|

Updated on: Jun 18, 2024 | 5:21 PM

ನಟಿ ದೀಪಿಕಾ ಪಡುಕೋಣೆ(Deepika Padukone) ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆಯ ಹೀರೋಯಿನ್​ ಆಗಿ ಮಿಂಚುತ್ತಿದ್ದಾರೆ. ಜನಪ್ರಿಯತೆಯಲ್ಲಿ ಅವರು ನಂಬರ್​ ಒನ್​. ಅಷ್ಟೇ ಅಲ್ಲದೇ, ಸಂಭಾವನೆ (Deepika Padukone Remuneration) ಪಡೆಯುವುದರಲ್ಲೂ ಅವರೇ ನಂಬರ್​ 1 ನಟಿ ಆಗಿದ್ದಾರೆ. ಬಾಲಿವುಡ್​ (Bollywood) ಹೀರೋಯಿನ್​ಗಳ ಪೈಕಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಎಂಬ ಖ್ಯಾತಿಗೆ ದೀಪಿಕಾ ಪಡುಕೋಣೆ ಪಾತ್ರರಾಗಿದ್ದಾರೆ. 2024ರಲ್ಲಿ ಬೇರೆಲ್ಲ ನಟಿಯರಿಗಿಂತ ಹೆಚ್ಚು ಸಂಭಾವನೆ ದೀಪಿಕಾ ಪಡುಕೋಣೆ ಅವರಿಗೆ ಸಿಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ. ಹಾಗಾದರೆ ಇನ್ನುಳಿದ ನಟಿಯರಿಗೆ ಯಾವ ಸ್ಥಾನ ಸಿಕ್ಕಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ವರದಿಗಳ ಪ್ರಕಾರ, ದೀಪಿಕಾ ಪಡುಕೋಣೆ ಅವರು ಪ್ರತಿ ಸಿನಿಮಾಗೆ 15ರಿಂದ 30 ಕೋಟಿ ರೂಪಾಯಿ ತನಕ ಚಾರ್ಜ್​ ಮಾಡುತ್ತಾರೆ. ಆ ಮೂಲಕ ಅವರು ನಂಬರ್​ 1 ಸ್ಥಾನ ಪಡೆದಿದ್ದಾರೆ. ನಟಿ ಕಂಗನಾ ರಣಾವತ್​ ಅವರು 2ನೇ ಸ್ಥಾನದಲ್ಲಿದ್ದಾರೆ. ಅವರು ಪ್ರತಿ ಸಿನಿಮಾಗೆ 15ರಿಂದ 27 ಕೋಟಿ ರೂಪಾಯಿವರೆಗೆ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ಈಗ ಅವರು ಸಂಸದೆ ಆಗಿ ಹೊಸ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಪ್ರತಿ ಸಿನಿಮಾಗೆ 15ರಿಂದ 25 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ಅವರಿಗೆ 3ನೇ ಸ್ಥಾನ ಸಿಕ್ಕಿದೆ. ನಾಲ್ಕನೇ ಸ್ಥಾನದಲ್ಲಿರುವ ನಟಿ ಕತ್ರಿನಾ ಕೈಫ್​ ಅವರು ಕೂಡ 15ರಿಂದ 25 ಕೋಟಿ ರೂಪಾಯಿ ಡಿಮ್ಯಾಂಡ್​ ಮಾಡುತ್ತಾರೆ. ಇನ್ನು, 5ನೇ ಸ್ಥಾನ ಪಡೆದುಕೊಂಡಿರುವ ನಟಿ ಆಲಿಯಾ ಭಟ್​ ಅವರು 10ರಿಂದ 20 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎಂದು ಸುದ್ದಿ ಆಗಿದೆ.

ನಟಿ ಕರೀನಾ ಕಪೂರ್​ ಖಾನ್​ ಅವರು ಪ್ರತಿ ಚಿತ್ರಕ್ಕೆ 8ರಿಂದ 18 ಕೋಟಿ ರೂಪಾಯಿ ಕೇಳುತ್ತಾರೆ. ಶ್ರದ್ಧಾ ಕಪೂರ್​ ಅವರು 7ರಿಂದ 15 ಕೋಟಿ ರೂಪಾಯಿಗೆ ಬೇಡಿಕೆ ಇಡುತ್ತಾರೆ. ವಿದ್ಯಾ ಬಾಲನ್​ ಅವರ ಸಂಭಾವನೆ 8ರಿಂದ 14 ಕೋಟಿ ರೂಪಾಯಿ ಇದೆ. ಅನುಷ್ಕಾ ಶರ್ಮಾ ಅವರು 8ರಿಂದ 12 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ನಟಿ ಐಶ್ವರ್ಯಾ ರೈ ಬಚ್ಚನ್​ ಅವರು ಪ್ರತಿ ಸಿನಿಮಾಗೆ 10 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಾರೆ.

ಇದನ್ನೂ ಓದಿ: IMDb ಟಾಪ್​ 100 ಸೆಲೆಬ್ರಿಟಿಗಳಲ್ಲಿ ನಂಬರ್​ 1 ಸ್ಥಾನ ಪಡೆದ ದೀಪಿಕಾ ಪಡುಕೋಣೆ

ಈಗ ದೀಪಿಕಾ ಪಡುಕೋಣೆ ಪ್ರೆಗ್ನೆಂಟ್​ ಆಗಿದ್ದು, ಮೊದಲ ಮಗುವಿನ ಆಗಮನಕ್ಕಾಗಿ ಕಾದಿದ್ದಾರೆ. ಹಾಗಾಗಿ ಅವರು ನಟನೆಯಿಂದ ಸಣ್ಣ ಬ್ರೇಕ್​ ಪಡೆದಿದ್ದಾರೆ. ಅವರು ಅಭಿನಯಿಸಿರುವ ‘ಫೈಟರ್​’ ಚಿತ್ರ ಈ ವರ್ಷ ಆರಂಭದಲ್ಲಿ ರಿಲೀಸ್ ಆಯಿತು. ಈಗ ಪ್ರಭಾಸ್​ ಜೊತೆ ದೀಪಿಕಾ ನಟಿಸಿರುವ ‘ಕಲ್ಕಿ 2898 ಎಡಿ’ ಸಿನಿಮಾ ಕೂಡ ರಿಲೀಸ್​ಗೆ ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ