ಶಾರುಖ್​ ನಟನೆಯ ‘ಪಠಾಣ್​’ ರಿಲೀಸ್ ​ಡೇಟ್​ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ದೀಪಿಕಾ ಪಡುಕೋಣೆ

ಶಾರುಖ್​ ಖಾನ್​ ಈಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಬೇಕಿತ್ತು. ಆದರೆ, ಅವರಿಗೆ ಸಾಕಷ್ಟು ಸಮಸ್ಯೆಗಳು ಉಂಟಾದವು. ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದರು. ಇದು ಶಾರುಖ್​ ಚಿಂತೆಯನ್ನು ಹೆಚ್ಚಿಸಿತ್ತು.

ಶಾರುಖ್​ ನಟನೆಯ ‘ಪಠಾಣ್​’ ರಿಲೀಸ್ ​ಡೇಟ್​ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ದೀಪಿಕಾ ಪಡುಕೋಣೆ
ದೀಪಿಕಾ-ಶಾರುಖ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 04, 2022 | 6:00 AM

ಸಿದ್ದಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದ (Pathan Movie) ಮೂಲಕ ಶಾರುಖ್​ ಖಾನ್​ (Shah Rukh Khan) ಕಂಬ್ಯಾಕ್​ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಿಂದ ಅವರು ದೊಡ್ಡ ಮಟ್ಟದ ಯಶಸ್ಸನ್ನು​ ನಿರೀಕ್ಷಿಸುತ್ತಿದ್ದಾರೆ. ಒಂದೊಮ್ಮೆ ಈ ಚಿತ್ರ ಸೂಪರ್​ ಹಿಟ್​ ಆದರೆ, ಬಾಲಿವುಡ್​ನಲ್ಲಿ ಕಿಂಗ್​ ಖಾನ್​ ನೆಲೆ ಮತ್ತಷ್ಟು ಗಟ್ಟಿಯಾಗಲಿದೆ. ಹಾಗಾದರೆ, ಈ ಸಿನಿಮಾ ತೆರೆಗೆ ಬರೋದು ಯಾವಾಗ? ಆ ಪ್ರಶ್ನೆಗೆ ಚಿತ್ರತಂಡದಿಂದ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. ರಿಲೀಸ್​ ಡೇಟ್​ ಹಾಗಿರಲಿ, ಸಿನಿಮಾ ತಂಡದಿಂದ ಯಾವುದೇ ಪೋಸ್ಟರ್​ ಬಿಡುಗಡೆ ಆಗಿಲ್ಲ. ಈಗ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ (Deepika Padukone) ಸಿನಿಮಾ ರಿಲೀಸ್​ ದಿನಾಂಕದ ಬಗ್ಗೆ ಮಾತನಾಡಿದ್ದಾರೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ನಟನೆಯ ‘ಚೆನ್ನೈ ಎಕ್ಸ್​ಪ್ರೆಸ್’​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅವರ ಅಭಿನಯದ ‘ಹ್ಯಾಪಿ ನ್ಯೂ ಇಯರ್’ ಚಿತ್ರ​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಇದಾದ ನಂತರ ತೆರೆಕಂಡ ಅವರ ನಟನೆಯ ಎಲ್ಲಾ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ‘ಪಠಾಣ್’​ ಸಿನಿಮಾ ಮೂಲಕ ಮತ್ತೆ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಸಿನಿಮಾ ಈ ವರ್ಷದ ಕೊನೆಯಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ.

ಶಾರುಖ್​ ಖಾನ್​ ಈಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಬೇಕಿತ್ತು. ಆದರೆ, ಅವರಿಗೆ ಸಾಕಷ್ಟು ಸಮಸ್ಯೆಗಳು ಉಂಟಾದವು. ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದರು. ಇದು ಶಾರುಖ್​ ಚಿಂತೆಯನ್ನು ಹೆಚ್ಚಿಸಿತ್ತು. ಜಾಮೀನು ನೀಡಿ ಮಗನನ್ನು ಹೊರಗೆ ಕರೆ ತರುವವರೆಗೂ ಅವರು ಮನೆಯಲ್ಲೇ ಇದ್ದರು. ಎಲ್ಲವೂ ಸರಿಯಾಯಿತು ಎನ್ನುವಾಗಲೇ ಕೊವಿಡ್ ಮೂರನೇ ಅಲೆ ಕಾಣಿಸಿಕೊಂಡಿತ್ತು. ಹೀಗಾಗಿ, ‘ಪಠಾಣ್​’ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ತಂಡ ವೇಗವಾಗಿ ಕೆಲಸಗಳನ್ನು ಪೂರ್ಣಗೊಳಿಸುತ್ತಿದೆ.

‘ನಾವು ‘ಪಠಾಣ್​’ ಸಿನಿಮಾ ಕೆಲಸಗಳನ್ನು ಮುಗಿಸುವ ಹಂತಕ್ಕೆ ಬಂದಿದ್ದೇವೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ತೆರೆಗೆ ತರುವ ಆಲೋಚನೆ ಇದೆ. ಒಂದು ಹಂತದ ಶೂಟಿಂಗ್​ ಮಾತ್ರ ಬಾಕಿ ಇದೆ’ ಎಂದಿದ್ದಾರೆ ದೀಪಿಕಾ. ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್​ಪ್ರೆಸ್​’ ಹಾಗೂ ‘ಹ್ಯಾಪಿ ನ್ಯೂ ಇಯರ್​’ ಚಿತ್ರದಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ. ಈಗ ‘ಪಠಾಣ್​’ ಮೂಲಕ ಈ ಜೋಡಿ ಮತ್ತೆ ಒಂದಾಗುತ್ತಿದೆ. ಜಾನ್ ಅಬ್ರಹಾಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಗೆಹರಾಯಿಯಾ’ ಸಿನಿಮಾದ ಪ್ರಚಾರಕಾರ್ಯದಲ್ಲಿ ದೀಪಿಕಾ ಬ್ಯುಸಿ ಆಗಿದ್ದಾರೆ.

ಶಾರುಖ್​ ಖಾನ್​ ಕೊನೆಯದಾಗಿ ಕಾಣಿಸಿಕೊಂಡಿದ್ದು 2018ರಲ್ಲಿ ತೆರೆಕಂಡಿದ್ದ ‘ಜೀರೋ’ ಚಿತ್ರದಲ್ಲಿ. ಈ ಸಿನಿಮಾ ಮಕಾಡೆ ಮಲಗಿತ್ತು. ಕತ್ರಿನಾ ಕೈಫ್​, ಅನುಷ್ಕಾ ಶರ್ಮಾ ಕೂಡ ಸಿನಿಮಾದಲ್ಲಿ ನಟಿಸುತ್ತಿದ್ದರು. ಅಟ್ಲೀ ನಿರ್ದೇಶನದ ಸಿನಿಮಾದಲ್ಲೂ ಶಾರುಖ್​ ನಟಿಸಿದ್ದರು. ಈ ಸಿನಿಮಾದಲ್ಲಿ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು 160 ದಿನದ ಕಾಲ್​ಶೀಟ್​ ನೀಡಿದ್ದಾರೆ ಎಂದು ವರದಿ ಆಗಿದೆ. ರಾಜ್​ಕುಮಾರ್ ಹಿರಾನಿ ನಿರ್ದೇಶನದ ಚಿತ್ರದಲ್ಲೂ ಶಾರುಖ್​ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಆರ್ಯನ್​ ಭೇಟಿ ಮಾಡಿದ  ಶಾರುಖ್​ ಖಾನ್ ತೆಗೆದುಕೊಂಡ್ರು ಕಠಿಣ ನಿರ್ಧಾರ; ಪರಿಣಾಮ ಯಾರ ಮೇಲೆ?

ಪುರುಷರ ಟಾಯ್ಲೆಟ್​ಗೆ ನುಗ್ಗಿದ್ದ ದೀಪಿಕಾ ಪಡುಕೋಣೆ-ಆಲಿಯಾ ಭಟ್​; ಇದರ ಹಿಂದಿದೆ ಅಚ್ಚರಿಯ ಕಥೆ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ