ರೆಕಾರ್ಡ್ ಮಾಡುತ್ತಿದ್ದಾಗ ಸಿಟ್ಟಲ್ಲಿ ಕ್ಯಾಮೆರಾಗೆ ಪಂಚ್ ಕೊಟ್ಟ ದೀಪಿಕಾ ಪಡುಕೋಣೆ
ರಣವೀರ್ ಸಿಂಗ್ ಹಾಗೂ ದೀಪಿಕಾ ಪಡಿಕೋಣೆ ಅನ್ಯೋನ್ಯವಾಗಿದ್ದಾರೆ. ಆದರೆ, ಇನ್ಸ್ಟಾಗ್ರಾಮ್ನಲ್ಲಿ ವಿವಾಹದ ಫೋಟೋ ಡಿಲೀಟ್ ಮಾಡಿದ್ದರಿಂದ ಸಹಜವಾಗಿಯೇ ಚರ್ಚೆಗಳು ನಡೆದಿದ್ದವು. ಈ ಬಗ್ಗೆ ದೀಪಿಕಾ ಪಡುಕೋಣೆ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ. ಆದರೆ, ರಣವೀರ್ ಹಾಗೂ ದೀಪಿಕಾ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.
ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಅವರು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಆಗಿದ್ದು ರಣವೀರ್ ಸಿಂಗ್ ನಡೆ. ಮದುವೆ ಫೋಟೋಗಳನ್ನು ಡಿಲೀಟ್ ಮಾಡೋ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇವರ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಹೇಳಲಾಗಿತ್ತು. ಆದರೆ, ಈಗ ವಿಮಾನ ನಿಲ್ದಾಣದಲ್ಲಿ ಇವರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
ರಣವೀರ್ ಸಿಂಗ್ ಹಾಗೂ ದೀಪಿಕಾ ಪಡಿಕೋಣೆ ಅನ್ಯೋನ್ಯವಾಗಿದ್ದಾರೆ. ಆದರೆ, ಇನ್ಸ್ಟಾಗ್ರಾಮ್ನಲ್ಲಿ ವಿವಾಹದ ಫೋಟೋ ಡಿಲೀಟ್ ಮಾಡಿದ್ದರಿಂದ ಸಹಜವಾಗಿಯೇ ಚರ್ಚೆಗಳು ನಡೆದಿದ್ದವು. ಈ ಬಗ್ಗೆ ದೀಪಿಕಾ ಪಡುಕೋಣೆ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ. ಆದರೆ, ರಣವೀರ್ ಹಾಗೂ ದೀಪಿಕಾ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಇದರಿಂದ ಮೂಡಿದ್ದ ಎಲ್ಲ ಅನುಮಾನಗಳಿಗೆ ತೆರೆ ಬಿದ್ದಿದೆ.
ಲೂಸ್ ಡ್ರೆಸ್ ಹಾಕಿ ದೀಪಿಕಾ ಕಾಣಿಸಿಕೊಂಡಿದ್ದಾರೆ. ಇದರಿಂದ ಅವರ ಬೇಬಿ ಬಂಪ್ ಹೈಲೈಟ್ ಆಗಿಲ್ಲ. ನಡೆದು ಬರುವಾಗ ಅವರು ಕ್ಯಾಮೆರಾಗೆ ಪಂಚ್ ಕೊಟ್ಟಿದ್ದಾರೆ. ದೀಪಿಕಾ ಸಿಟ್ಟಿನಿಂದ ಈ ರೀತಿ ಮಾಡಿದ್ದಾರೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಸೆಲೆಬ್ರಿಟಿಗಳ ಫೋಟೋ ತೆಗೆಯಲು ಪಾಪರಾಜಿಗಳು ಮುಂದಾಗುತ್ತಾರೆ. ಇದರಿಂದ ಸೆಲೆಬ್ರಿಟಿಗಳಿಗೆ ಕಿರಿಕಿರಿ ಆಗುತ್ತದೆ. ದೀಪಿಕಾಗೂ ಹಾಗೆಯೇ ಆಗಿದೆ ಎನ್ನಲಾಗಿದೆ.
View this post on Instagram
ರಣವೀರ್ ಸಿಂಗ್ ಅವರು ಕೇವಲ ಮದುವೆ ಫೋಟೋ ಮಾತ್ರವಲ್ಲ. 2023ರಕ್ಕಿಂತ ಮೊದಲು ಪೋಸ್ಟ್ ಮಾಡಿದ ಎಲ್ಲಾ ಫೋಟೋಗಳನ್ನು ಅವರು ಹೈಡ್ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಇನ್ನಷ್ಟೇ ರಿವೀಲ್ ಮಾಡಬೇಕಿದೆ.
ಇದನ್ನೂ ಓದಿ: ಮಗು ಹುಟ್ಟೋ ಸಮಯದಲ್ಲಿ ಇದೆಂಥಾ ಜಗಳ? ಅನುಮಾನ ಮೂಡಿಸಿತು ರಣವೀರ್ ನಡೆ
ರಣವೀರ್ ಸಿಂಗ್ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಡಾನ್ 3’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಜೊತೆಗೆ ಅವರು ಪತ್ನಿಯ ಆರೈಕೆಯಲ್ಲೂ ಬ್ಯುಸಿ ಇದ್ದಾರೆ. ಅವರು ಇತ್ತೀಚೆಗೆ ಪತ್ನಿ ಜೊತೆ ಸುತ್ತಾಟ ಮಾಡಿದ್ದರು. ದೀಪಿಕಾ ಪಡುಕೋಣೆ ಅವರು ಈಗಾಗಲೇ ಒಪ್ಪಿಕೊಂಡ ಎಲ್ಲಾ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ಈಗ ತಮ್ಮ ಆರೋಗ್ಯದ ಬಗ್ಗೆ ಅವರು ಹೆಚ್ಚು ಗಮನ ಹರಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.