‘ಒಂದು ಎಚ್ಚರಿಕೆ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು’; ದೀಪಿಕಾ ಪಡುಕೋಣೆ ಹಾಟ್​ ಅವತಾರಕ್ಕೆ ದಂಗಾದ ಪತಿ ರಣವೀರ್​ ಸಿಂಗ್​

Deepika Padukone: ‘ಒಂದಾನೊಂದು ಕಾಲದಲ್ಲಿ. ತುಂಬಾ ಹಿಂದೆ ಅಲ್ಲ’ ಎಂದು ದೀಪಿಕಾ ಪಡುಕೋಣೆ ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಕಪ್ಪು-ಬಿಳಿ ಬಣ್ಣದ ಬಿಕಿನಿ ಧರಿಸಿ ಅವರು ಪೋಸ್​ ನೀಡಿದ್ದಾರೆ.

‘ಒಂದು ಎಚ್ಚರಿಕೆ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು’; ದೀಪಿಕಾ ಪಡುಕೋಣೆ ಹಾಟ್​ ಅವತಾರಕ್ಕೆ ದಂಗಾದ ಪತಿ ರಣವೀರ್​ ಸಿಂಗ್​
ದೀಪಿಕಾ ಪಡುಕೋಣೆ
Follow us
ಮದನ್​ ಕುಮಾರ್​
|

Updated on: Jul 31, 2023 | 7:24 PM

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಸೋಶಿಯಲ್​ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ತುಂಬ ಹಾಟ್​ ಅವತಾರದಲ್ಲಿ ಅವರು ಪೋಸ್​ ನೀಡಿದ್ದಾರೆ. ಈ ಫೋಟೋ ಕಂಡು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಫ್ಯಾನ್ಸ್​ ಮಾತ್ರವಲ್ಲದೇ ಪತಿ ರಣವೀರ್​ ಸಿಂಗ್​ (Ranveer Singh) ಕೂಡ ದಂಗಾಗಿದ್ದಾರೆ. ಯಾವ ಸೂಚನೆಯೂ ಇಲ್ಲದೇ ದಿಢೀರ್​ ಅಂತ ಈ ರೀತಿ ಫೋಟೋ (Deepika Padukone Viral Photo) ಪೋಸ್ಟ್​ ಮಾಡಿದ್ದು ನೋಡಿ ರಣವೀರ್​ ಸಿಂಗ್​ಗೆ ಅಚ್ಚರಿ ಆಗಿದೆ. ಹಾಗಾಗಿ ಅವರು, ‘ಒಂದು ಎಚ್ಚರಿಕೆ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು’ ಎಂದು ಕಮೆಂಟ್​ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಅವರು ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್​ ಆಗಿದೆ. ಒಂದು ಗಂಟೆಯೊಳಗೆ 7 ಲಕ್ಷಕ್ಕೂ ಅಧಿಕ ಮಂದಿ ಇದನ್ನು ಲೈಕ್​ ಮಾಡಿದ್ದಾರೆ.

ದೀಪಿಕಾ ಪಡುಕೋಣೆ ಅವರು ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಾರೆ. ದೇಹವನ್ನು ಅವರು ಫಿಟ್​ ಆಗಿ ಇಟ್ಟುಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಆ್ಯಬ್ಸ್​ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಒಂದಾನೊಂದು ಕಾಲದಲ್ಲಿ. ತುಂಬಾ ಹಿಂದೆ ಅಲ್ಲ’ ಎಂದು ದೀಪಿಕಾ ಪಡುಕೋಣೆ ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಕಪ್ಪು-ಬಿಳಿ ಬಣ್ಣದ ಬಿಕಿನಿ ಧರಿಸಿ ಅವರು ಪೋಸ್​ ನೀಡಿದ್ದಾರೆ.

ಟ್ರೋಲ್​ಗಳಿಗೆ ದೀಪಿಕಾ ಪಡುಕೋಣೆ ಅವರು ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಹಿಂದೆ ಅವರು ‘ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡಿನಲ್ಲಿ ಕೇಸರಿ ಬಿಕಿನಿ ಧರಿಸಿ ನಟಿಸಿದ್ದರು. ಒಂದು ವರ್ಗದ ಜನರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ದೀಪಿಕಾ ಕಿಂಚಿತ್ತೂ ತಲೆ ಕೆಡಿಸಿಕೊಳ್ಳಲಿಲ್ಲ. ತಮ್ಮ ಕೆಲಸದ ಮೇಲಷ್ಟೇ ಅವರು ಗಮನ ಹರಿಸಿದರು. ಈಗ ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ‘ಫೈಟರ್​’ ರೀತಿಯ ಹೈವೋಲ್ಟೇಜ್​ ಚಿತ್ರಗಳಿಗೆ ಅವರು ನಾಯಕಿ ಆಗಿದ್ದಾರೆ.

ಇದನ್ನೂ ಓದಿ: Jawan Prevue: ಅಮ್ಮ-ಮಗನ ಪಾತ್ರದಲ್ಲಿ ದೀಪಿಕಾ ಪಡುಕೋಣೆ-ಶಾರುಖ್​ ಖಾನ್​? ಭಾರಿ ಟ್ವಿಸ್ಟ್​ ನಿರೀಕ್ಷೆಯಲ್ಲಿ ಫ್ಯಾನ್ಸ್​

‘ಜವಾನ್​’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಶಾರುಖ್​ ಖಾನ್​ ನಟನೆಯ ಆ ಸಿನಿಮಾ ಸೆಪ್ಟೆಂಬರ್​ 7ರಂದು ತೆರೆಕಾಣಲಿದೆ. ಪ್ರಭಾಸ್​ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರಕ್ಕೂ ದೀಪಿಕಾ ನಾಯಕಿ ಆಗಿದ್ದಾರೆ. ಇತ್ತೀಚೆಗೆ ಈ ಸಿನಿಮಾದಲ್ಲಿನ ಅವರ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಯಿತು. ಆದರೆ ದೀಪಿಕಾ ಅವರು ಅದನ್ನು ಪ್ರಮೋಟ್​ ಮಾಡಿಲ್ಲ. ಹಾಲಿವುಡ್​ ಕಲಾವಿದರು ಮತ್ತು ಬರಹಗಾರರ ಮುಷ್ಕರ ನಡೆಯುತ್ತಿದ್ದು, ಅದರಲ್ಲಿ ದೀಪಿಕಾ ಕೂಡ ಭಾಗಿ ಆಗಿರುವುದರಿಂದ ಅವರು ತಮ್ಮ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಭಾಗಿ ಆಗಿರಲಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ