Deepika Padukone Pregnant: ದೀಪಿಕಾ ಪಡುಕೋಣೆ ಪ್ರೆಗ್ನೆಂಟ್​; ಡಿಫರೆಂಟ್​ ಆಗಿ ಸಿಹಿ ಸುದ್ದಿ ನೀಡಿದ ರಣವೀರ್​ ಸಿಂಗ್​

ದೀಪಿಕಾ ಪಡುಕೋಣೆ ಗರ್ಭಿಣಿ: 2018ರಲ್ಲಿ ಪರಸ್ಪರ ಪ್ರೀತಿ ಮದುವೆ ಆದ ದೀಪಿಕಾ ಪಡುಕೋಣೆ ಹಾಗೂ ರಣವೀರ್​ ಸಿಂಗ್ ಅವರ ಈಗ ಗುಡ್​ ನ್ಯೂಸ್​ ನೀಡಿದ್ದಾರೆ. ಮದುವೆ ಆಗಿ ಆರು ವರ್ಷಗಳು ಕಳೆದ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ದೀಪಿಕಾ ಪಡುಕೋಣೆ ಈಗ 2 ತಿಂಗಳ ಗರ್ಭಿಣಿ. ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.

Deepika Padukone Pregnant: ದೀಪಿಕಾ ಪಡುಕೋಣೆ ಪ್ರೆಗ್ನೆಂಟ್​; ಡಿಫರೆಂಟ್​ ಆಗಿ ಸಿಹಿ ಸುದ್ದಿ ನೀಡಿದ ರಣವೀರ್​ ಸಿಂಗ್​
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ
Follow us
ಮದನ್​ ಕುಮಾರ್​
| Updated By: Digi Tech Desk

Updated on:Feb 29, 2024 | 12:01 PM

ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಮತ್ತು ನಟ ರಣವೀರ್​ ಸಿಂಗ್​ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ದಂಪತಿ ಕಡೆಯಿಂದ ಗುಡ್​ ನ್ಯೂಸ್​ ಸಿಕ್ಕಿದೆ. ಈ ವರ್ಷ ಸೆಪ್ಟೆಂಬರ್​ನಲ್ಲಿ ಮಗುವಿಗೆ ದೀಪಿಕಾ ಜನ್ಮ ನೀಡಲಿದ್ದಾರೆ ಎಂದು ತಿಳಿಸಲಾಗಿದೆ. ಈ ಸುದ್ದಿ ತಿಳಿಸಲು ರಣವೀರ್​ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ. ಅದು ಡಿಫರೆಂಟ್​ ಆಗಿದೆ. ಇದರಲ್ಲಿ ಯಾವುದೇ ಕ್ಯಾಪ್ಷನ್​ ಇಲ್ಲ. ಮಗುವಿಗೆ ಸಂಬಂಧಿಸಿದ ಬಟ್ಟೆ, ಶೂ, ಆಟಿಕೆ, ಟೋಪಿ ಮುಂತಾದ ವಸ್ತುಗಳಿರುವ ಚಿತ್ರವನ್ನು ಅವರು ಪೋಸ್ಟ್​ ಮಾಡಿದ್ದಾರೆ. ‘ಸೆಪ್ಟೆಂಬರ್​ 2024 ’ ಎಂದು ಇದರಲ್ಲಿ ಬರೆಯಲಾಗಿದೆ. ಈ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿ ಮದುವೆ ಆಗಿದ್ದು 2018ರಲ್ಲಿ. ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಈಗ ದೀಪಿಕಾ ಪಡುಕೋಣೆ ಅವರು ಎರಡು ತಿಂಗಳ ಗರ್ಭಿಣಿ. ಇದೇ ವರ್ಷ ಸೆಪ್ಟೆಂಬರ್​ನಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ. ಸದ್ಯಕ್ಕೆ ಚಿತ್ರರಂಗದಲ್ಲಿ ಅವರು ತುಂಬ ಬೇಡಿಕೆ ಹೊಂದಿದ್ದಾರೆ. ಆದರೆ ಈಗ ಮಗು ಸಲುವಾಗಿ ಬ್ರೇಕ್​ ತೆಗೆದುಕೊಳ್ಳಲಿದ್ದಾರೆ.

ರಣವೀರ್​ ಸಿಂಗ್-ದೀಪಿಕಾ ಪಡುಕೋಣೆ ಸೋಶಿಯಲ್​ ಮೀಡಿಯಾ ಪೋಸ್ಟ್:

ದೀಪಿಕಾ ಪಡುಕೋಣೆ ಅವರು ಪ್ರೆಗ್ನೆಂಟ್​ ಆಗಿರಬಹುದು ಎಂಬ ಗಾಸಿಪ್​ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಇತ್ತೀಚೆಗೆ ಅವರು ಬಾಫ್ಟಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲು ತೆರಳಿದ್ದರು. ಆಗ ಅವರು ಸೀರೆ ಧರಿಸಿದ್ದು. ಬೇಬಿ ಬಂಪ್​ ಕಾಣಬಾರದು ಎಂಬ ಉದ್ದೇಶದಿಂದಲೇ ಅವರು ಸೀರೆ ಧರಿಸಿದ್ದರು ಎಂದು ಅನೇಕರು ಊಹಿಸಿದ್ದರು. ಜನರ ಊಹೆ ಈಗ ನಿಜವಾಗಿದೆ. ದೀಪಿಕಾ ಪ್ರೆಗ್ನೆಂಟ್​ ಆಗಿರುವ ಸುದ್ದಿಯನ್ನು ಸ್ವತಃ ಬಹಿರಂಗಪಡಿಸಿದ್ದಾರೆ. ಈ ನ್ಯೂಸ್​ ಕೇಳಿ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: ದೀಪಿಕಾ ಯಾರೆಂಬುದೇ ಗೊತ್ತಿಲ್ಲ; ಬಾಫ್ಟಾ ವೇದಿಕೆಯಲ್ಲಿ ಮಿಂಚಿದ ನಟಿ ಕಂಡು ವಿದೇಶಿಗರಿಗೆ ಅಚ್ಚರಿ

ಹಿಂದಿ, ಕನ್ನಡ, ತಮಿಳು ಸಿನಿಮಾಗಳಲ್ಲಿ ನಟಿಸಿ ದೀಪಿಕಾ ಪಡುಕೋಣೆ ಅವರು ಫೇಮಸ್​ ಆಗಿದ್ದಾರೆ. ‘ಪದ್ಮಾವತ್​’, ‘ಬಾಜಿರಾವ್​ ಮಸ್ತಾನಿ’, ‘ಛಪಾಕ್​’, ‘ಓಂ ಶಾಂತಿ ಓಂ’ ಮುಂತಾದ ಸಿನಿಮಾಗಳಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲೂ ದೀಪಿಕಾ ನಟಿಸಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಸದ್ಯ ‘ಕಲ್ಕಿ 2898 ಎಡಿ’, ‘ಸಿಂಗಂ ಅಗೇನ್​’ ಮುಂತಾದ ಸಿನಿಮಾಗಳ ಅವರ ಕೈಯಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:35 am, Thu, 29 February 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್