ಮಗಳು ದುವಾ ಹುಟ್ಟುಹಬ್ಬದಂದೇ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ, ರಣವೀರ್ ಸಿಂಗ್

ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರು 2ನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈಗ ಅವರು ಪತಿ ರಣವೀರ್ ಸಿಂಗ್ ಹಾಗೂ ಮಗಳು ದುವಾ ಜೊತೆಗಿರುವ ವಿಶೇಷ ಫೋಟೋವನ್ನು ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್ ಆಗಿವೆ. ಆ ಕುರಿತು ಇಲ್ಲಿದೆ ವಿವರ..

ಮಗಳು ದುವಾ ಹುಟ್ಟುಹಬ್ಬದಂದೇ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ, ರಣವೀರ್ ಸಿಂಗ್
Ranveer Singh, Dua, Deepika Padukone
Image Credit source: Instagram/ranveersingh

Updated on: Sep 08, 2026 | 10:57 PM

ಬಾಲಿವುಡ್‌ನ ಕ್ಯೂಟ್ ಕಪಲ್ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಕುಟುಂಬಕ್ಕೆ ಹೊಸ ಸದಸ್ಯರ ಆಗಮನವಾಗುತ್ತಿದೆ. ಈ ವರ್ಷದ ಆರಂಭದಲ್ಲಿ ತಾವು ಎರಡನೇ ಬಾರಿಗೆ ತಂದೆ-ತಾಯಿಯಾಗುತ್ತಿರುವ ವಿಷಯವನ್ನು ತಿಳಿಸಿದ್ದ ಈ ಜೋಡಿ, ಇದೀಗ ತಮ್ಮ ಮಗಳು ದುವಾಳ ಎರಡನೇ ವರ್ಷದ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಸುಂದರವಾದ ಮ್ಯಾಟರ್ನಿಟಿ ಫೋಟೋಶೂಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಹಂಚಿಕೊಳ್ಳಲಾದ ಕಪ್ಪು-ಬಿಳುಪಿನ ಫೋಟೋಗಳಲ್ಲಿ, ರಣವೀರ್ ಸಿಂಗ್ ಅವರು ದೀಪಿಕಾ ಅವರ ಬೇಬಿ ಬಂಪ್ ಅನ್ನು ಪ್ರೀತಿಯಿಂದ ಹಿಡಿದುಕೊಂಡಿದ್ದಾರೆ. ದೀಪಿಕಾ ಅವರು ಲೇಸ್ ಉಡುಪಿನಲ್ಲಿ ಮಿಂಚುತ್ತಿದ್ದರೆ, ರಣವೀರ್ ಸಿಂಪಲ್ ವೈಟ್ ಶರ್ಟ್ ಮತ್ತು ಟ್ರೌಸರ್ ಧರಿಸಿ ನಗುಮುಖದಿಂದ ಕಂಗೊಳಿಸುತ್ತಿದ್ದಾರೆ.

ಮತ್ತೊಂದು ಫೋಟೋದಲ್ಲಿ ಇಬ್ಬರ ನಡುವೆ ಮಗಳು ದುವಾ ನಿಂತುಕೊಂಡಿದ್ದು, ತುಂಟತನದಿಂದ ತನ್ನ ಮುಖವನ್ನು ಮುಚ್ಚಿಕೊಂಡಿದ್ದಾಳೆ. ದುವಾಳನ್ನು ಕ್ಯಾಮೆರಾ ಕಣ್ಣಿನಿಂದ ದೂರವೇ ಇರಿಸಿದ್ದ ಈ ದಂಪತಿ, ಇದೀಗ ಫ್ಯಾಮಿಲಿ ಫೋಟೋವನ್ನು ಹಂಚಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ರಣವೀರ್ ಸಿಂಗ್, ‘ಪುಟ್ಟ ದುವಾ ಮತ್ತು ನಮ್ಮ ಹೃದಯಗಳು ಮತ್ತಷ್ಟು ದೊಡ್ಡದಾಗುತ್ತಿವೆ. ನಿಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

2024ರಲ್ಲಿ ಜನಿಸಿದ್ದ ದುವಾ:

ದೀಪಿಕಾ ಮತ್ತು ರಣವೀರ್ ದಂಪತಿಗೆ 2024ರ ಸೆಪ್ಟೆಂಬರ್ 8ರಂದು ಮೊದಲ ಹೆಣ್ಣು ಮಗು (ದುವಾ ಪಡುಕೋಣೆ ಸಿಂಗ್) ಜನಿಸಿದಳು. 2018ರಲ್ಲಿ ವಿವಾಹವಾಗಿದ್ದ ಈ ಜೋಡಿ, ಈ ವರ್ಷದ ಆರಂಭದಲ್ಲಿ ದುವಾಳ ಕೈಯಲ್ಲಿ ಪ್ರೆಗ್ನೆನ್ಸಿ ಕಿಟ್ ಇರಿಸಿರುವ ಫೋಟೋ ಹಂಚಿಕೊಳ್ಳುವ ಮೂಲಕ ಎರಡನೇ ಮಗುವಿನ ಆಗಮನದ ಸುಳಿವು ನೀಡಿದ್ದರು.

ಇದನ್ನೂ ಓದಿ: ‘ಸ್ಪಿರಿಟ್’ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರ ನಡೆದಿದ್ದಕ್ಕೆ ಕೊನೆಗೂ ಅಸಲಿ ಕಾರಣ ಬಯಲು

ಗರ್ಭಿಣಿಯಾಗಿದ್ದರೂ ದೀಪಿಕಾ ಶೂಟಿಂಗ್‌:

ಎರಡನೇ ಮಗುವಿನ ಆಗಮನದ ನಿರೀಕ್ಷೆಯ ನಡುವೆಯೂ ದೀಪಿಕಾ ಪಡುಕೋಣೆ ಅವರು ತಮ್ಮ ವೃತ್ತಿಪರ ಕೆಲಸಗಳನ್ನು ಮುಂದುವರಿಸಿದ್ದರು. ಶಾರುಖ್ ಖಾನ್ ಮತ್ತು ಸುಹಾನಾ ಖಾನ್ ಅಭಿನಯದ, ಸಿದ್ಧಾರ್ಥ್ ಆನಂದ್ ನಿರ್ದೇಶನದ ‘ಕಿಂಗ್’ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ಅಟ್ಲಿ ನಿರ್ದೇಶನದ ಹಾಗೂ ಅಲ್ಲು ಅರ್ಜುನ್ ನಟನೆಯ ‘ರಾಕಾ’ ಸಿನಿಮಾದಲ್ಲೂ ಅಭಿನಯಿಸುತ್ತಿದ್ದು, ಗರ್ಭಿಣಿಯಾಗಿದ್ದರೂ ಈ ಚಿತ್ರದ ಶೂಟಿಂಗ್‌ನಲ್ಲಿ ಭಾಗವಹಿಸುತ್ತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us