ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಉದ್ಯಮಿಯ ಹೇಳಿಕೆಯನ್ನು ಟೀಕಿಸಿದ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥರಾದ ಎಸ್.ಎನ್. ಸುಬ್ರಮಣ್ಯನ್ ಅವರ ವಾರಕ್ಕೆ 90 ಗಂಟೆ ಕೆಲಸದ ಪ್ರಸ್ತಾಪವನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಉದ್ಯೋಗಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದಾರೆ. ಸುಬ್ರಮಣ್ಯನ್ ಅವರ ಹೇಳಿಕೆಯು ಭಾರೀ ಟೀಕೆಗೆ ಒಳಗಾಗಿದೆ.

ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಉದ್ಯಮಿಯ ಹೇಳಿಕೆಯನ್ನು ಟೀಕಿಸಿದ ದೀಪಿಕಾ ಪಡುಕೋಣೆ
ದೀಪಿಕಾ-ಸುಬ್ರಮಣ್ಯನ್

Updated on: Jan 10, 2025 | 12:46 PM

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಮಾನಸಿಕ ಆರೋಗ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವವರು. ಏನೇ ಆದರೂ ಮಾನಸಿಕ ಆರೋಗ್ಯ ಚೆನ್ನಾಗಿರಬೇಕು ಎಂದು ಹೇಳುತ್ತಾ ಬಂದಿದ್ದಾರೆ. ತಮಗೆ ಖಿನ್ನತೆ ಆದಾಗ ಅದನ್ನು ಓಪನ್ ಆಗಿ ಹೇಳಿಕೊಂಡು ಅನೇಕರಲ್ಲಿ ಜಾಗೃತಿ ಮೂಡಿಸಿದ್ದರು. ಈಗ ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥ  ಎಸ್​.ಎನ್. ಸುಬ್ರಮಣ್ಯನ್ ಅವರ ‘ಉದ್ಯೋಗಿಗಳು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು’ ಎಂಬ ಹೇಳಿಕೆ ಬಗ್ಗೆ ದೀಪಿಕಾ ಪ್ರತಿಕ್ರಿಯಿಸಿದ್ದಾರೆ.

‘ಭಾನುವಾರವೂ ನಿಮ್ಮಿಂದ ಕೆಲಸ ಮಾಡಿಸಲು ಸಾಧ್ಯವಾಗುತ್ತಿಲ್ಲದಿರುವುದಕ್ಕೆ ನನಗೆ ವಿಷಾದ ಇದೆ. ನಾನು ಭಾನುವಾರವೂ ಕೆಲಸ ಮಾಡುತ್ತೇನೆ. ನೀವೂ ಕೂಡ ಭಾನುವಾರ ಕೆಲಸ ಮಾಡಿದರೆ ನನಗೆ ಹೆಚ್ಚು ಖುಷಿಯಾಗುತ್ತದೆ. ಪ್ರತಿ ಉದ್ಯೋಗಿ ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು’ ಎಂದು ಸುಬ್ರಮಣ್ಯನ್ ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ದೀಪಿಕಾ ಟೀಕಿಸಿದ್ದಾರೆ. ‘ಅವರು ಪರಿಸ್ಥಿತಿಯನ್ನು ಮತ್ತಷ್ಟು ಕೆಟ್ಟದಾಗಿ ಮಾಡಿದ್ದಾರೆ’ ಎಂದಿದ್ದಾರೆ.

ವಾರಕ್ಕೆ 90 ಗಂಟೆ ಕೆಲಸ ಮಾಡುವುದು ಎಂದರೆ ಅದು ಸುಲಭದ ಮಾತಲ್ಲ. ಈ ರೀತಿ ಮಾಡಿದಾಗ ವ್ಯಕ್ತಿಯ ಆರೋಗ್ಯದ ಮೇಲೆ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತದೆ. ಆ ರೀತಿ ಆಗಬಾರದು ಎಂದು ಅನೇಕರು ಅಭಿಪ್ರಾಯಕೊಟ್ಟಿದ್ದಾರೆ. ಈ ವಿಚಾರದಲ್ಲಿ ದೀಪಿಕಾ ಧ್ವನಿ ಎತ್ತಿದ್ದು ಖುಷಿ ಆಗಿದೆ.

ಈ ಮೊದಲು ಕೂಡ ಸುಬ್ರಮಣ್ಯನ್ ಅವರು ‘ಭಾನುವಾರವೂ ಉದ್ಯೋಗಿಗಳು ಕೆಲಸ ಮಾಡಬೇಕು’ ಎಂದಿದ್ದರು. ಆ ಸಂದರ್ಭದಲ್ಲೂ ದೀಪಿಕಾ ಪ್ರತಿಕ್ರಿಯಿಸಿದ್ದರು. ‘ಇಷ್ಟು ದೊಡ್ಡ ಪೋಸ್ಟ್​ನಲ್ಲಿ ಇರುವವರು ಈ ರೀತಿಯ ಹೇಳಿಕೆ ನೀಡುವುದನ್ನು ನೋಡಿದರೆ ಶಾಕ್ ಆಗುತ್ತದೆ’ ಎಂದು ಹೇಳಿದ್ದರು.  ಭಾನುವಾರವೂ ಕೆಲಸ ಮಾಡಬೇಕು ಎಂದಿದ್ದಲ್ಲದೆ ಸುಬ್ರಮಣ್ಯಮ್ ಅವರು, ‘ಉದ್ಯೋಗಿಗಳು ಮನೆಯಲ್ಲಿದ್ದುಕೊಂಡು ಏನು ಮಾಡುತ್ತಾರೆ’ ಎಂದು ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ಮಗಳೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಈ ವಿಚಾರವಾಗಿ ಧ್ವನಿ ಎತ್ತಿದ್ದು ಅನೇಕರಿಗೆ ಖುಷಿ ನೀಡಿದೆ. ಬಾಲಿವುಡ್​ನ ಎಲ್ಲರೂ ಈ ರೀತಿಯ ವಿಚಾರ ಬಂದಾಗ ಮುಂದೆ ಬಂದು ಕೆಲಸ ಮಾಡಬೇಕು ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us