ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ

ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಆದರೂ, ಪತ್ನಿ ದೀಪಿಕಾ ಪಡುಕೋಣೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದೀಪಿಕಾ ಅವರ ಮೌನಕ್ಕೆ ಅವರ ಎಡಪಂಥೀಯ ಸಿದ್ಧಾಂತಗಳು ಹಾಗೂ ಸಿನಿಮಾದ ಬಲಪಂಥೀಯ ಚಿಂತನೆಗಳು ಕಾರಣವೋ ಅಥವಾ ಇತ್ತೀಚಿಗೆ ಜನಿಸಿದ ಮಗುವಿನ ಆರೈಕೆಯಲ್ಲಿ ನಿರತರಾಗಿರುವುದು ಕಾರಣವೋ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ
ರಣವೀರ್-ದೀಪಿಕಾ

Updated on: Mar 21, 2026 | 11:57 AM

ಬಾಲಿವುಡ್​ ಸಿನಿಮಾ ‘ಧುರಂಧರ್ 2’ (Dhurandhar 2) ಸೂಪರ್ ಹಿಟ್ ಆಗಿದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಣವೀರ್ ವೃತ್ತಿ ಜೀವನದ ಅತ್ಯಂತ ದೊಡ್ಡ ಯಶಸ್ಸು ಇದು. ಆದಾಗ್ಯೂ ಅವರ ಪತ್ನಿ ದೀಪಿಕಾ ಪಡುಕೋಣೆ ಅವರು ಈ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇದಕ್ಕೆ ಕಾರಣ ಏನು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಯಿತು. ಈದ್ ಪ್ರಯುಕ್ತ ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಭರ್ಜರಿ ಸಕಸ್ಸ್​ ಕಂಡಿದೆ. ಸಿನಿಮಾ ಎರಡನೇ ದಿನಕ್ಕೆ ಭಾರತದಲ್ಲಿ 269 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಈ ಚಿತ್ರವನ್ನು ನೋಡಿದವರೆಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಸಿನಿಮಾ ಇಷ್ಟ ಆಗಿದೆ.

ಆದರೆ, ದೀಪಿಕಾ ಪಡುಕೋಣೆ ಮಾತ್ರ ಈ ವಿಷಯದಲ್ಲಿ ಇನ್ನೂ ಮೌನವಾಗಿದ್ದಾರೆ. ಈ ಬಗ್ಗೆ ರಣವೀರ್ ಸಿಂಗ್ ಅವರ ಪತ್ನಿ ದೀಪಿಕಾ ಏಕೆ ಮೌನವಾಗಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ಈ ಬಗ್ಗೆ ಅವರು ಯಾವುದೇ ಪೋಸ್ಟ್ ಹಾಕಿಲ್ಲ. ಅವರು ಪ್ರೀಮಿಯರ್ ಶೋಗಳಲ್ಲೂ ಕಾಣಿಸಿಕೊಂಡಿಲ್ಲ. ಇದು ಏಕೆ ಎಂಬ ಚರ್ಚೆ ನಡೆಯುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ದೀಪಿಕಾ ಪಡುಕೋಣೆ ಅವರು ಎಡಪಂಥೀಯ ಆಲೋಚನೆಗಳಿಂದ ಪ್ರಭಾವಿತರಾದವರು ಎಂದು ಹೇಳಲಾಗುತ್ತಾ ಇದೆ. ‘ಧುರಂಧರ್ 2’ ಸಿನಿಮಾ ಬಲ ಪಂಥೀಯ ಚಿಂತನೆಗಳನ್ನು ಹೊಂದಿದೆ. ಈ ಕಾರಣದಿಂದ ದೀಪಿಕಾ ಪಡುಕೋಣೆ ಅವರು ಮೌನ ತಾಳಿರಬಹುದು ಎಂಬ ಚರ್ಚೆ ನಡೆದಿದೆ.

ಇದನ್ನೂ ಓದಿ: ಆ ಒಂದು ವಿಷಯದ ಬಗ್ಗೆ ಕಂಪ್ಲೇಂಟ್ ಮಾಡಿದ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಮಗುವಿನ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಸಿನಿಮಾ ನೋಡೋದು ವಿಳಂಬ ಮಾಡುತ್ತಿರಬಹುದು ಎಂದು ಹೇಳಲಾಗುತ್ತಾ ಇದೆ. ಈ ಕಾರಣದಿಂದ ಅವರು ಈ ಬಗ್ಗೆ ಮೌನ ತಾಳಿರಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:53 am, Sat, 21 March 26

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us