AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾನ್ ವರ್ಲ್ಡ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಆದರೆ ನಾಯಕಿಯಾಗಿ ಅಲ್ಲ

ಇತ್ತೀಚೆಗಷ್ಟೆ ಹೆಣ್ಣು ಮಗುವಿನ ತಾಯಿ ಆಗಿರುವ ದೀಪಿಕಾ ಪಡುಕೋಣೆ ಸಿನಿಮಾಗಳಿಂದ ಬ್ರೇಕ್ ಪಡೆದಿದ್ದಾರೆ. ಆದರೆ ಕೆಲವು ಕತೆಗಳನ್ನು ಕೇಳಿ ಸಿನಿಮಾಗಳಿಗೆ ಒಪ್ಪಿಗೆ ನೀಡುತ್ತಿದ್ದಾರೆ. ಭಾರತದ ಅತಿ ದೊಡ್ಡ ಬಜೆಟ್​ನ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ, ಅದೂ ನಾಯಕಿಯಾಗಿ ಅಲ್ಲ.

ಪ್ಯಾನ್ ವರ್ಲ್ಡ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಆದರೆ ನಾಯಕಿಯಾಗಿ ಅಲ್ಲ
ಮಂಜುನಾಥ ಸಿ.
|

Updated on: Nov 01, 2024 | 10:50 AM

Share

ಇತ್ತೀಚೆಗಷ್ಟೆ ತಾಯಿ ಆಗಿರುವ ದೀಪಿಕಾ ಪಡುಕೋಣೆ ಪ್ರಸ್ತುತ ಸಿನಿಮಾಗಳಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಬ್ರೇಕ್​ನಲ್ಲಿರುವಾಗಲಿ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಅದರಲ್ಲೂ ಭಾರತ ಅತ್ಯಂತ ನಿರೀಕ್ಷಿತ, ಹಾಗೂ ಈವರೆಗಿನ ಅತಿ ಹೆಚ್ಚು ಬಜೆಟ್​ನ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಆದರೆ ದೀಪಿಕಾ ಸಾಮಾನ್ಯವಾಗಿ ನಾಯಕಿ ಪಾತ್ರದಲ್ಲಿ ನಟಿಸುತ್ತಾರೆ ಆದರೆ ಈ ಸಿನಿಮಾದಲ್ಲಿ ಅವರು ನಾಯಕಿ ಪಾತ್ರದಲ್ಲಿ ನಟಿಸುತ್ತಿಲ್ಲ. ಮಾತ್ರವಲ್ಲದೆ ದೀಪಿಕಾ ಪಡುಕೋಣೆ ಚಿತ್ರೀಕರಣ ಪ್ರಾರಂಭಿಸುವುದು ಇನ್ನೂ ಒಂದು ವರ್ಷದ ಬಳಿಕವಂತೆ.

‘ಆರ್​ಆರ್​ಆರ್’ ಸಿನಿಮಾ ಬಿಡುಗಡೆಗೆ ಮುಂಚೆಯೇ ರಾಜಮೌಳಿ, ತಮ್ಮ ಮುಂದಿನ ಸಿನಿಮಾವನ್ನು ಮಹೇಶ್ ಬಾಬು ಜೊತೆಗೆ ಮಾಡುವುದಾಗಿ ಘೋಷಣೆ ಮಾಡಿದ್ದರು. ‘ಆರ್​ಆರ್​ಆರ್’ ಸಿನಿಮಾ ಬ್ಲಾಕ್ ಬಸ್ಟರ್ ಆದ ಬಳಿಕ ರಾಜಮೌಳಿ ಹಾಗೂ ಮಹೇಶ್ ಬಾಬು ಸಿನಿಮಾದ ಸ್ಕೇಲ ದೊಡ್ಡದಾಗಿದ್ದು, ಕತೆ, ಚಿತ್ರಕತೆ, ತಂತ್ರಜ್ಞಾನ, ಕಲಾವಿದರು ಎಲ್ಲವೂ ಬದಲಾಗಿದೆ. ಮಾತ್ರವಲ್ಲದೆ ಈ ಸಿನಿಮಾದ ಬಜೆಟ್ 1000 ಕೋಟಿಗೂ ಹೆಚ್ಚಾಗಿದೆ. ಸಿನಿಮಾದಲ್ಲಿ ಹಲವು ವಿದೇಶಿ ಕಲಾವಿದರು ನಟಿಸುತ್ತಿದ್ದು, ಸಿನಿಮಾದ ಸಣ್ಣ-ಪುಟ್ಟ ಪಾತ್ರಕ್ಕೂ ಸಹ ಸ್ಟಾರ್ ನಟ-ನಟಿಯರನ್ನು ತೆಗೆದುಕೊಳ್ಳಲಾಗುತ್ತಿದೆ.

ಇದೀಗ ರಾಜಮೌಳಿ ಹಾಗೂ ಮಹೇಶ್ ಬಾಬು ಅವರ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಈ ಸಿನಿಮಾದ ನಾಯಕಿ ಅಲ್ಲ ಎನ್ನಲಾಗುತ್ತಿದೆ. ವಿದೇಶಿ ನಟಿಯೊಬ್ಬರು ಈ ಸಿನಿಮಾದ ನಾಯಕಿ ಆಗಿದ್ದು, ಸಿನಿಮಾದಲ್ಲಿ ದೀಪಿಕಾರದ್ದು ಪೋಷಕ ಪಾತ್ರ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲು ಇನ್ನೂ ಸಾಕಷ್ಟು ಸಮಯವಿದ್ದು, ದೀಪಿಕಾ ಪಡುಕೋಣೆ ಈ ಚಿತ್ರತಂಡವನ್ನು ಒಂದು ವರ್ಷದ ಬಳಿಕ ಸೇರಿಕೊಳ್ಳಲಿದ್ದಾರಂತೆ.

ಇದನ್ನೂ ಓದಿ:ದೀಪಿಕಾ ಪಡುಕೋಣೆ ಕನ್ನಡದಲ್ಲಿ ಮಾತನಾಡಿದ ಈ ವಿಡಿಯೋ ನೋಡಿದ್ರಾ?

ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಬಹುತೇಕ ಅಂತ್ಯವಾಗಿದ್ದು, ಪ್ರಸ್ತುತ ಸಿನಿಮಾದ ಚಿತ್ರೀಕರಣಕ್ಕೆ ಲೊಕೇಶನ್ ಹುಡುಕುವ ಕಾರ್ಯದಲ್ಲಿ ರಾಜಮೌಳಿ ನಿರತರಾಗಿದ್ದಾರೆ. ಆಫ್ರಿಕಾಗೆ ತೆರಳಿರುವ ರಾಜಮೌಳಿ ಲೊಕೇಶ್ ಅಂತಿಮಗೊಳಿಸುತ್ತಿದ್ದಾರೆ. ಇದರ ಜೊತೆಗೆ ಕಲಾವಿದರನ್ನು ಫೈನಲ್ ಗೊಳಿಸುವ ಕಾರ್ಯವೂ ಚಾಲ್ತಿಯಲ್ಲಿದೆ. ಹಾಲಿವುಡ್​ನ ಕೆಲವು ನಟ-ನಟಿಯರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಭಾರತ ಭಾಷೆಗಳು ಸೇರಿದಂತೆ ಚೀನಾ, ಜಪಾನ್, ಇಂಡೊನೇಷಿಯನ್, ರಷ್ಯನ್ ಇನ್ನೂ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾ ಪ್ಯಾನ್ ವರ್ಲ್ಡ್ ಸಿನಿಮಾ ಆಗಿರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್