ದೀಪಿಕಾ ಪಡುಕೋಣೆ To ಕಂಗನಾ ರಣಾವತ್: ಏರ್​ಫೋರ್ಸ್​ ಪೈಲಟ್ ಪಾತ್ರ ಮಾಡಿದ ನಟಿಯರಿವರು

‘ಫೈಟರ್’ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟನೆಗೆ ಮೆಚ್ಚುಗೆ ಸಿಕ್ಕಿದೆ. ಮಿನಲ್ ರಾಥೋರ್​ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಭಾರತೀಯ ವಾಯುಪಡೆಯ ಬುದ್ಧಿವಂತ ಪೈಲಟ್​ಗಳಲ್ಲಿ ಅವರೂ ಒಬ್ಬರು. ಈ ಸಿನಿಮಾದಲ್ಲಿ ಅವರು ತಮ್ಮ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ. ಈ ರೀತಿ ಪೈಲಟ್ ಪಾತ್ರ ಮಾಡಿದ ಅನೇಕರಿದ್ದಾರೆ.

ದೀಪಿಕಾ ಪಡುಕೋಣೆ To ಕಂಗನಾ ರಣಾವತ್: ಏರ್​ಫೋರ್ಸ್​ ಪೈಲಟ್ ಪಾತ್ರ ಮಾಡಿದ ನಟಿಯರಿವರು
ಏರ್​ಫೋರ್ಸ್​ ಪೈಲಟ್ ಪಾತ್ರ ಮಾಡಿದ ನಟಿಯರಿವರು
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Feb 13, 2024 | 7:59 AM

ಸಿದ್ದಾರ್ಥ್ ಆನಂದ್ ನಿರ್ದೇಶನದ ‘ಫೈಟರ್’ ಸಿನಿಮಾ (Fighter Movie) ಜನವರಿ 25ರಂದು ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿದೆ. ದೀಪಿಕಾ ಪಡುಕೋಣೆ ಅವರು ಭಾರತೀಯ ವಾಯುಪಡೆಯ ಪೈಲಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಮೊದಲು ಕೂಡ ಬಾಲಿವುಡ್​ನಲ್ಲಿ ಅನೇಕ ನಟಿಯರು ಪೈಲಟ್ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ದೀಪಿಕಾ ಪಡುಕೋಣೆ

‘ಫೈಟರ್’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಮಿನಲ್ ರಾಥೋರ್​ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಭಾರತೀಯ ವಾಯುಪಡೆಯ ಬುದ್ಧಿವಂತ ಪೈಲಟ್​ಗಳಲ್ಲಿ ಅವರೂ ಒಬ್ಬರಾಗಿರುತ್ತಾರೆ. ಈ ಸಿನಿಮಾದಲ್ಲಿ ಅವರು ತಮ್ಮ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ. ಒಪ್ಪಿಕೊಂಡ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಅವರನ್ನು ಈ ಅವತಾರದಲ್ಲಿ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.

ಕಂಗನಾ ರಣಾವತ್

ನಟಿ ಕಂಗನಾ ರಣಾವತ್ ಅವರು ಬಾಲಿವುಡ್​ನ ಬೇಡಿಕೆಯ ನಟಿ. ಅವರು ಹಲವು ರೀತಿಯ ಪಾತ್ರಗಳನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಕಂಗನಾ ‘ತೇಜಸ್’ ಸಿನಿಮಾದಲ್ಲಿ ತೇಜಸ್ ಗಿಲ್ ಹೆಸರಿನ ಏರ್​ಫೋರ್ಸ್​ ಅಧಿಕಾರಿಯ ಪಾತ್ರ ಮಾಡಿದ್ದರು. ಅಯೋಧ್ಯೆಯ ರಾಮ ಮಂದಿರದ ಮೇಲೆ ಭಯೋತ್ಪಾದನೆ ದಾಳಿ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ಕಥೆ ಇದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಕ್ಸಸ್ ಕಾಣಲಿಲ್ಲ. ಸರ್ವೇಶ್ ಮೇವರ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಜಾನ್ವಿ ಕಪೂರ್

ಜಾನ್ವಿ ಕಪೂರ್ ಅವರು ನಟನೆಯಲ್ಲಿ ಇನ್ನೂ ಪಳಗಬೇಕಿದೆ. ಹೀಗಿರುವಾಗಲೇ ಅವರಿಗೆ ‘ಗುಂಜನ್ ಸಕ್ಸೇನಾ: ದಿ ಕಾರ್ಗಿಲ್ ಗರ್ಲ್’ ಸಿನಿಮಾದಲ್ಲಿ ನಟಿಸೋ ಅವಕಾಶ ಸಿಕ್ಕಿತ್ತು. ಈ ಚಿತ್ರದಲ್ಲಿ ಭಾರತೀಯ ಏರ್​ಫೋರ್ಸ್ ಪೈಲಟ್ ಗುಂಜನ್ ಸಕ್ಸೇನಾ ಆಗಿ ಜಾನ್ವಿ ನಟಿಸಿದ್ದರು. ಇವರ ನಟನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಈ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು.

ಕೃತಿ ಕುಲ್ಹರಿ

ಕೃತಿ ಕುಲ್ಹರಿ ಅವರು ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾದಲ್ಲಿ ಕ್ಯಾಪ್ಟನ್ ಸೀರತ್ ಕೌರ್ ಪಾತ್ರ ಮಾಡಿದ್ದರು. ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಇದು ನೈಜ ಘಟನೆ ಆಧರಿಸಿ ಸಿದ್ಧಗೊಂಡ ಸಿನಿಮಾ. ಉರಿ ಮೇಲೆ ನಡೆದ ದಾಳಿಗೆ ಕಾರಣರಾದವರ ಮಟ್ಟ ಹಾಕಲು ಇದನ್ನು ಮಾಡಲಾಯಿತು. ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರ ಸೂಪರ್ ಹಿಟ್ ಆಯಿತು.

ಇದನ್ನೂ ಓದಿ: ಕನ್ನಡ ಸಿನಿಮಾ ಮಾಡಿದ್ದ ದೀಪಿಕಾ ಪಡುಕೋಣೆಗೆ ಬಾಲಿವುಡ್ ಆಫರ್ ಸಿಕ್ಕಿದ್ದು ಹೇಗೆ?

ಅಗ್ನಿಪಂಖ್

ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ನಟನೆಯಲ್ಲಿ ಸಖತ್ ಚ್ಯೂಸಿ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರು ಸಂಜೀವ್ ಪುರಿ ನಿರ್ದೇಶನದ ‘ಅಗ್ನಿಪಂಖ್ ಸಿನಿಮಾದಲ್ಲಿ ಏರ್​ಫೋರ್ಸ್​ ಪೈಲಟ್ ಪಾತ್ರ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ