AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲಾಮರ್​ ಲುಕ್​ ಬಿಟ್ಟು ಆ್ಯಕ್ಷನ್​ ಅವತಾರ ತಾಳಲಿದ್ದಾರೆ ದೀಪಿಕಾ ಪಡುಕೋಣೆ

ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿ. ಈ ಸಿನಿಮಾದಲ್ಲಿ ಅವರೂ ಆ್ಯಕ್ಷನ್ ಮೆರೆಯುತ್ತಿದ್ದಾರೆ.

ಗ್ಲಾಮರ್​ ಲುಕ್​ ಬಿಟ್ಟು ಆ್ಯಕ್ಷನ್​ ಅವತಾರ ತಾಳಲಿದ್ದಾರೆ ದೀಪಿಕಾ ಪಡುಕೋಣೆ
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ
TV9 Web
| Edited By: |

Updated on: Jul 26, 2021 | 9:40 PM

Share

ದೀಪಿಕಾ ಪಡುಕೋಣೆ ಇಲ್ಲಿವರೆಗೆ ಸಾಕಷ್ಟು ಸಿನಿಮಾಗಳಲ್ಲಿ ಗ್ಲಾಮರಸ್ ​ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಇದೇ ಮೊದಲ ಬಾರಿಗೆ ಅವರು ಆ್ಯಕ್ಷನ್​ ಅವತಾರ ತಾಳಲಿದ್ದಾರೆ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಚಿತ್ರದಲ್ಲಿ ದೀಪಿಕಾ ಆ್ಯಕ್ಷನ್​ ಮೆರೆಯಲಿದ್ದಾರೆ. ಇದಕ್ಕಾಗಿ ಅವರು ದೇಹವನ್ನು ಹುರಿಗೊಳಿಸಿಕೊಳ್ಳುತ್ತಿದ್ದಾರೆ.

2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ಖಾನ್​ ನಟನೆಯ ಚೆನ್ನೈ ಎಕ್ಸ್​ಪ್ರೆಸ್​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹ್ಯಾಪಿ ನ್ಯೂ ಇಯರ್​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ನಂತರ ತೆರೆಕಂಡ ಎಲ್ಲ ಚಿತ್ರಗಳೂ ನೆಲ ಕಚ್ಚಿದ್ದವು. ಈಗ ಶಾರುಖ್​ ಪಠಾಣ್​ ಸಿನಿಮಾ ಮೂಲಕ ತೆರೆ ಮೇಲೆ ಬರಲು ಸಿದ್ಧರಾಗಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ನಾಯಕಿ. ಈ ಸಿನಿಮಾದಲ್ಲಿ ಅವರೂ ಆ್ಯಕ್ಷನ್ ಮೆರೆಯುತ್ತಿದ್ದಾರೆ.

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದಲ್ಲಿ  ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ದೀಪಿಕಾ ಕೂಡ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೊದಲು ‘ಎಕ್ಸ್​ಎಕ್ಸ್​ಎಕ್ಸ್: ರಿಟರ್ನ್​ ಆಫ್​ ಕ್ಯಾಂಡರ್​ ಕೇಜ್’​ ಚಿತ್ರದಲ್ಲಿ ದೀಪಿಕಾ ಆ್ಯಕ್ಷನ್​ ಮೆರೆದಿದ್ದರು. ಇದನ್ನು ನೋಡಿದ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದರು. ಈಗ ಅವರು ಮತ್ತೆ ಇದೇ ರೀತಿಯ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳೋಕೆ ರೆಡಿ ಆಗಿದ್ದಾರೆ. ಇದಕ್ಕಾಗಿ ಅವರು ಜಿಮ್​ನಲ್ಲೂ ವರ್ಕೌಟ್​ ಮಾಡುತ್ತಿದ್ದಾರೆ.

ನಟ ರಜನಿಕಾಂತ್​ ಅವರ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಕಾಲ್​ ಶೀಟ್​ ಕೇಳಲಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ‘ಕೊಚಡಿಯನ್’​ ಸಿನಿಮಾದಲ್ಲಿ ರಜನಿ ಹಾಗೂ ದೀಪಿಕಾ ಒಟ್ಟಾಗಿ ಕೆಲಸ ಮಾಡಿದ್ದರು. ಆದರೆ, ಇದು ಮೋಷನ್ ಕ್ಯಾಪ್ಚರ್​​ ಸಿನಿಮಾ ಆಗಿತ್ತು. ಒಂದೊಮ್ಮೆ ಈ ಹೊಸ ಚಿತ್ರದಲ್ಲಿ ದೀಪಿಕಾ ನಟಿಸೋಕೆ ಒಪ್ಪಿದರೆ ಇದೇ ಮೊದಲ ಬಾರಿಗೆ ರಜನಿ ಜತೆ ಅವರು ನೈಜವಾಗಿ ತೆರೆಹಂಚಿಕೊಂಡಂತಾಗಲಿದೆ ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಇದನ್ನೂ ಓದಿ: ಶಾರುಖ್​ ಖಾನ್​ ಬಗ್ಗೆ ಹರಿದಾಡಿದ್ದ ಸುದ್ದಿ ಸುಳ್ಳು; ಆದರೂ ಬೇಸರಗೊಂಡ ಫ್ಯಾನ್ಸ್​

ಶಾರುಖ್​ ಪುತ್ರಿ ಸುಹಾನಾ ಖಾನ್​ ಹಾಟ್​ ಫೋಟೋಶೂಟ್ ವೈರಲ್​; ಅಪ್ಪನ ಕಮೆಂಟ್​ ಏನು?​

ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ