AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಗ್ನೆಂಟ್ ಆದರೂ ‘ಕಲ್ಕಿ 2898 ಎಡಿ’ ಸಿನಿಮಾ ಪ್ರಮೋಷನ್ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಅವರು ಈಗ ಪ್ರೆಗ್ನೆಂಟ್. ಸೆಪ್ಟೆಂಬರ್​ನಲ್ಲಿ ಅವರಿಗೆ ಮಗು ಜನಿಸಲಿದೆ. ಜೂನ್ ಎನ್ನುವಾಗ ಅವರಿಗೆ ಆರು ತಿಂಗಳು ತುಂಬಿರುತ್ತದೆ. ಅಂಥ ಸಂದರ್ಭದಲ್ಲಿ ಅವರು ಓಡಾಡೋದು ಕಷ್ಟ ಆಗಬಹುದು. ಆದಾಗ್ಯೂ ಅವರು ಪ್ರಮೋಷನ್​ಗಳಲ್ಲಿ ಭಾಗಿ ಆಗಲಿದ್ದಾರೆ.

ಪ್ರೆಗ್ನೆಂಟ್ ಆದರೂ ‘ಕಲ್ಕಿ 2898 ಎಡಿ’ ಸಿನಿಮಾ ಪ್ರಮೋಷನ್ ಮಾಡಲಿದ್ದಾರೆ ದೀಪಿಕಾ ಪಡುಕೋಣೆ
ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Apr 29, 2024 | 7:30 AM

Share

‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾಗೆ ಹೊಸ ರಿಲೀಸ್ ದಿನಾಂಕವನ್ನು ತಂಡ ಇತ್ತೀಚೆಗೆ ಘೋಷಣೆ ಮಾಡಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಮೇ 9ರಂದು ರಿಲೀಸ್ ಆಗಬೇಕಿತ್ತು. ಆದರೆ, ಚುನಾವಣೆ ಹಾಗೂ ಐಪಿಎಲ್ ಅಬ್ಬರದ ಹಿನ್ನೆಲೆಯಲ್ಲಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಜೂನ್ 27ಕ್ಕೆ ಮುಂದೂಡಲಾಗಿದೆ. ನಟಿ ದೀಪಿಕಾ ಪಡುಕೋಣೆ ಅವರು ಸಿನಿಮಾ ಪ್ರಚಾರಕ್ಕೆ ಬರೋದಾಗಿ ಈ ಮೊದಲು ಕಮಿಟ್ ಆಗಿದ್ದರು. ಈಗ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆದಾಗ್ಯೂ ಅವರು ಸಿನಿಮಾ ಪ್ರಚಾರ ಮಿಸ್ ಮಾಡುತ್ತಿಲ್ಲ ಎನ್ನಲಾಗಿದೆ.

ದೀಪಿಕಾ ಪಡುಕೋಣೆ ಅವರು ಈಗ ಪ್ರೆಗ್ನೆಂಟ್. ಸೆಪ್ಟೆಂಬರ್​ನಲ್ಲಿ ಅವರಿಗೆ ಮಗು ಜನಿಸಲಿದೆ. ಜೂನ್ ಎನ್ನುವಾಗ ಅವರಿಗೆ ಆರು ತಿಂಗಳು ತುಂಬಿರುತ್ತದೆ. ಅಂಥ ಸಂದರ್ಭದಲ್ಲಿ ಅವರು ಓಡಾಡೋದು ಕಷ್ಟ ಆಗಬಹುದು. ಆದಾಗ್ಯೂ ಅವರು ಪ್ರಮೋಷನ್​ಗಳಲ್ಲಿ ಭಾಗಿ ಆಗಲಿದ್ದಾರೆ. ಹಾಗಂದ ಮಾತ್ರಕ್ಕೆ ಅವರು ಎಲ್ಲ ಕಡೆಗಳಲ್ಲಿ ತೆರಳಿ ಸಿನಿಮಾ ಪ್ರಚಾರ ಮಾಡೋದಿಲ್ಲ. ಬದಲಿಗೆ ‘ಕಲ್ಕಿ 2898 ಎಡಿ’ ತಂಡಕ್ಕೆ ಸಂದರ್ಶನ ನೀಡಲಿದ್ದಾರೆ. ಸಿನಿಮಾ ಪ್ರಮೋಷನ್ ಮಾಡಲಿದ್ದಾರೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆಯೊಂದಿಗೆ 8ಕೋಟಿಯ ವ್ಯವಹಾರದ ಒಪ್ಪಂದಕ್ಕೆ ಸಹಿ ಹಾಕಿದ ಅಂಬಾನಿ ಪುತ್ರಿ

ಇತ್ತೀಚೆಗೆ ಸಿನಿಮಾ ತಂಡದವರೇ ಕಲಾವಿದರನ್ನು ಸಂದರ್ಶನ ಮಾಡುವ ಟ್ರೆಂಡ್ ಜೋರಾಗಿದೆ. ಸಿನಿಮಾ ನಿರ್ದೇಶಕರು ​ ಹೀರೋಗಳನ್ನು ಸಂದರ್ಶನ ಮಾಡುತ್ತಾರೆ. ದೀಪಿಕಾ ಪಡುಕೋಣೆ ಅವರನ್ನು ‘ಕಲ್ಕಿ 2898 ಎಡಿ’ ನಿರ್ದೇಶಕ ನಾಗ್ ಅಶ್ವಿನ್ ಅಥವಾ ಸಿನಿಮಾದ ಹೀರೋ ಪ್ರಭಾಸ್ ಸಂದರ್ಶನ ಮಾಡಬಹುದು ಎಂದು ಹೇಳಲಾಗುತ್ತಿದೆ.

ಕಲ್ಕಿ ರಿಲೀಸ್ ಡೇಟ್

ಅಶ್ವಿನಿ ದತ್ ಅವರು ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಪ್ರಭಾಸ್ ಜೊತೆ ದೀಪಿಕಾ ಪಡುಕೋಣೆ, ದಿಶಾ ಪಟಾಣಿ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಮಹಾಭಾರತದಿಂದ ಆರಂಭ ಆಗೋ ಕಥೆ ಆರು ಸಾವಿರ ವರ್ಷಗಳ ಕಥೆ ಇರಲಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ