AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದರಾ ದೀಪಿಕಾ ಪಡುಕೋಣೆ?

ಪ್ರಭಾಸ್ ಜೊತೆ 'ಕಲ್ಕಿ', ಅಲ್ಲು ಅರ್ಜುನ್ ಜೊತೆ 'ರಾಕಾ' ಚಿತ್ರಗಳಲ್ಲಿ ಮಿಂಚುತ್ತಿರುವ ದೀಪಿಕಾ ಪಡುಕೋಣೆ ಅವರ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. 'ಚೆನ್ನೈ ಎಕ್ಸ್‌ಪ್ರೆಸ್' ಸೆಟ್‌ನಲ್ಲಿ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದಂತೆ ಕಾಣುವ ಈ ದೃಶ್ಯವು ಸಕ್ಕರೆ ಬಾಟಲಿ ಮತ್ತು ಮೇಕಪ್‌ನಿಂದ ಮಾಡಿದ ತಮಾಷೆಯಾಗಿತ್ತು. ಇದು ಬ್ಲೂಪರ್ ವಿಡಿಯೋ ಆಗಿದ್ದು, ಈಗ ಮತ್ತೆ ಚರ್ಚೆಯಲ್ಲಿದೆ.

ನಿರ್ದೇಶಕ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದರಾ ದೀಪಿಕಾ ಪಡುಕೋಣೆ?
ದೀಪಿಕಾ-ರೋಹಿತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: May 15, 2026 | 8:14 AM

Share

ಬಾಲಿವುಡ್ ಅಷ್ಟೇ ಅಲ್ಲದೆ, ಈಗ ದಕ್ಷಿಣ ಭಾರತದ ಸಿನಿಮಾಗಳಲ್ಲೂ ಮಿಂಚುತ್ತಿರುವ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುತ್ತಾರೆ. ಪ್ರಭಾಸ್ ನಟನೆಯ ‘ಕಲ್ಕಿ’ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಈಗ ಅಟ್ಲೀ ನಿರ್ದೇಶನದ ಹಾಗೂ ಅಲ್ಲು ಅರ್ಜುನ್ ನಟನೆಯ ‘ರಾಕಾ’ ಚಿತ್ರಕ್ಕೂ ಇವರೇ ನಾಯಕಿ . ಸಿನಿಮಾ ಬದುಕು, ವೈಯಕ್ತಿಕ ಜೀವನದ ನಡುವೆ ದೀಪಿಕಾ ಅವರ ಹಳೆಯ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಏನಿದು ಬಾಟಲಿ ಪ್ರಹಸನ?

ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟನೆಯ ಬ್ಲಾಕ್‌ಬಸ್ಟರ್ ಸಿನಿಮಾ ‘ಚೆನ್ನೈ ಎಕ್ಸ್‌ಪ್ರೆಸ್’ ಸೆಟ್‌ನಲ್ಲಿ ನಡೆದ ಕುತೂಹಲಕಾರಿ ಘಟನೆ ಇದಾಗಿದೆ. 2013ರಲ್ಲಿ ಬಿಡುಗಡೆಯಾಗಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದ ಈ ಚಿತ್ರದ ಚಿತ್ರೀಕರಣದ ವೇಳೆ ಒಂದು ವಿಚಿತ್ರ ಸನ್ನಿವೇಶ ಎದುರಾಗಿತ್ತು.

ಸೆಟ್‌ನಲ್ಲಿ ದೀಪಿಕಾ ಅವರು ವಿಶ್ರಾಂತಿ ಪಡೆಯುತ್ತಾ ಕೂಲ್ ಡ್ರಿಂಕ್ ಕುಡಿಯುತ್ತಿದ್ದಾಗ, ನಿರ್ದೇಶಕ ರೋಹಿತ್ ಶೆಟ್ಟಿ ಅವರು ಏನೋ ವಿಷಯಕ್ಕೆ ಅವರನ್ನು ಅಡ್ಡಗಟ್ಟಿದ್ದಾರೆ. ಇದರಿಂದ ತಮಾಷೆಯಾಗಿ ಸಿಟ್ಟಾದ ದೀಪಿಕಾ, ತಕ್ಷಣವೇ ತಮ್ಮ ಕೈಯಲ್ಲಿದ್ದ ಬಾಟಲಿಯನ್ನು ತೆಗೆದುಕೊಂಡು ರೋಹಿತ್ ಶೆಟ್ಟಿ ಅವರ ತಲೆಗೆ ಹೊಡೆದಿದ್ದಾರೆ! ಬಾಟಲಿ ಚೂರು ಚೂರಾಗಿ ಒಡೆದು, ರೋಹಿತ್ ಅವರ ತಲೆಯಿಂದ ರಕ್ತ ಸುರಿಯಲಾರಂಭಿಸಿದೆ. ಇದನ್ನು ನೋಡಿದ ಸೆಟ್‌ನಲ್ಲಿದ್ದವರೆಲ್ಲ ಒಂದು ಕ್ಷಣ ದಿಗ್ರಮಗೊಂಡಿದ್ದಾರೆ.

ವಿಡಿಯೋದ ಹಿಂದಿರುವ ಅಸಲಿ ಸತ್ಯ!

ಆದರೆ ಗಾಬರಿಪಡುವ ಅಗತ್ಯವಿಲ್ಲ, ಇದೆಲ್ಲವೂ ಕೇವಲ ತಮಾಷೆಗಾಗಿ ನಡೆದ ಘಟನೆ. ದೀಪಿಕಾ ಹೊಡೆದಿದ್ದು ನಿಜವಾದ ಗಾಜಿನ ಬಾಟಲಿಯಿಂದಲ್ಲ, ಬದಲಾಗಿ ಸಿನಿಮಾಗಳಲ್ಲಿ ಬಳಸುವ ‘ಸಕ್ಕರೆ ಬಾಟಲಿ’ ಇಂದ. ಸಾಮಾನ್ಯವಾಗಿ ‘ಬಿಗ್ ಬಾಸ್’ ಅಂತಹ ರಿಯಾಲಿಟಿ ಶೋಗಳಲ್ಲಿ ಅಥವಾ ಸಿನಿಮಾದ ಸಾಹಸ ದೃಶ್ಯಗಳಲ್ಲಿ ಗಾಯವಾಗದಂತೆ ಇಂತಹ ಬಾಟಲಿಗಳನ್ನು ಬಳಸಲಾಗುತ್ತದೆ.

ಇದನ್ನೂ ಓದಿ: ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ

ರೋಹಿತ್ ಶೆಟ್ಟಿ ಅವರ ತಲೆಗೆ ರಕ್ತ ಬಂದಂತೆ ಕಂಡಿದ್ದು ಕೂಡ ಮೇಕಪ್ ಟ್ರಿಕ್ ಅಷ್ಟೇ. ಚಿತ್ರೀಕರಣದ ನಡುವೆ ಸುಮ್ಮನೆ ತಮಾಷೆಗಾಗಿ ಈ ‘ಬ್ಲೂಪರ್’ ವಿಡಿಯೋ ಮಾಡಲಾಗಿತ್ತು. ಈಗ ಈ ಹಳೆಯ ವಿಡಿಯೋ ಮತ್ತೆ ಮುನ್ನೆಲೆಗೆ ಬಂದಿದ್ದು, “ದೀಪಿಕಾ ಅವರಿಗೆ ಇಷ್ಟೊಂದು ಕೋಪವೇ?” ಎಂದು ನೆಟ್ಟಿಗರು ತಮಾಷೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ