ಹೊಸ ಮನೆ ನಿರ್ಮಾಣ ವೀಕ್ಷಿಸಿದ ದೀಪಿಕಾ; ಬೇಬಿ ಬಂಪ್ ಫೋಟೋ ವೈರಲ್

ದೀಪಿಕಾ ಪಡುಕೋಣೆ ಗರ್ಭಿಣಿಯಾಗಿದ್ದು, ರಣವೀರ್ ಸಿಂಗ್ ಜೊತೆ ಹೊಸ ಬಾಂದ್ರಾ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ದೀಪಿಕಾ ಬೇಬಿ ಬಂಪ್ ಸ್ಪಷ್ಟವಾಗಿ ಗೋಚರಿಸಿದ್ದು, ಫೋಟೋಗಳು ವೈರಲ್ ಆಗಿವೆ. ಈ ದಂಪತಿ ಮಗು ನಿರೀಕ್ಷೆಯಲ್ಲಿದ್ದಾರೆ. ಮೊದಲ ಮಗುವಿಗೆ 'ದುವಾ' ಎಂದು ಹೆಸರಿಡಲಾಗಿದೆ. ಗರ್ಭಾವಸ್ಥೆಯ ನಡುವೆಯೂ ದೀಪಿಕಾ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ.

ಹೊಸ ಮನೆ ನಿರ್ಮಾಣ ವೀಕ್ಷಿಸಿದ ದೀಪಿಕಾ; ಬೇಬಿ ಬಂಪ್ ಫೋಟೋ ವೈರಲ್
ದೀಪಿಕಾ-ರಣವೀರ್

Updated on: Jun 09, 2026 | 12:27 PM

ಬಾಲಿವುಡ್‌ನ ಸ್ಟಾರ್ ಜೋಡಿ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ ಸದ್ಯ ತಮ್ಮ ಜೀವನದ ಅತ್ಯಂತ ಸುಂದರ ಕ್ಷಣಗಳನ್ನು ಆನಂದಿಸುತ್ತಿದ್ದಾರೆ. ನಟಿ ದೀಪಿಕಾ ಪಡುಕೋಣೆ ಈಗ ತುಂಬು ಗರ್ಭಿಣಿ. ಇತ್ತೀಚೆಗೆ ಈ ದಂಪತಿ ಮುಂಬೈನ ಐಷಾರಾಮಿ ಬಾಂದ್ರಾ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ತಮ್ಮ ಹೊಸ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ದೀಪಿಕಾ ಅವರ ಬೇಬಿ ಬಂಪ್ ಸ್ಪಷ್ಟವಾಗಿ ಕಾಣಿಸಿಕೊಂಡಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.

ಸೋಮವಾರ (ಜೂನ್ 9) ಈ ಜೋಡಿ ತಮ್ಮ ಹೊಸ ನಿವಾಸಕ್ಕೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಇಂಟೀರಿಯರ್ ಹಾಗೂ ಕನ್ಸ್ಟ್ರಕ್ಷನ್ ಕೆಲಸಗಳ ಪ್ರಗತಿಯನ್ನು ಪರಿಶೀಲಿಸಿದೆ. ಬಿಳಿ ಬಣ್ಣದ ಡ್ರೆಸ್ ಧರಿಸಿದ್ದ ದೀಪಿಕಾ ಮುಖದಲ್ಲಿ ಪ್ರೆಗ್ನೆನ್ಸಿ ಗ್ಲೋ ಎದ್ದು ಕಾಣುತ್ತಿತ್ತು. ಇನ್ನು ರಣವೀರ್ ಸಿಂಗ್ ಕೆಂಪು ಟಿ-ಶರ್ಟ್ ಮತ್ತು ಬ್ಲ್ಯಾಕ್ ಟ್ರ್ಯಾಕ್ ಪ್ಯಾಂಟ್ ಧರಿಸಿ ಕ್ಯಾಶುಯಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಹೊಸ ಮನೆಯ ಬಾಲ್ಕನಿಯಲ್ಲಿ ನಿಂತು ಇಬ್ಬರೂ ಗಂಭೀರವಾಗಿ ಚರ್ಚಿಸುತ್ತಿರುವ ಫೋಟೋಗಳನ್ನು ಅಭಿಮಾನಿಗಳು ಮುಗಿಬಿದ್ದು ಶೇರ್ ಮಾಡುತ್ತಿದ್ದಾರೆ.

ದೀಪಿಕಾ ಹಾಗೂ ರಣವೀರ್

ದೀಪಿಕಾ ಮತ್ತು ರಣವೀರ್ ಸಿಂಗ್ ದಂಪತಿ ಇತ್ತೀಚೆಗಷ್ಟೇ ತಾವಿಬ್ಬರು ಎರಡನೇ ಮಗುವಿನ ನಿರೀಕ್ಷೆಯಲ್ಲ ಇರುವುದಾಗಿ ಅಧಿಕೃತವಾಗಿ ಘೋಷಿಸಿದ್ದರು. 2018ರಲ್ಲಿ ಇಟಲಿಯಲ್ಲಿ ವಿವಾಹವಾಗಿದ್ದ ಈ ಜೋಡಿಗೆ, ಸೆಪ್ಟೆಂಬರ್ 2024ರಲ್ಲಿ ಮೊದಲ ಹೆಣ್ಣು ಮಗು ಜನಿಸಿತ್ತು. ಆ ಮಗುವಿಗೆ ಇವರು ‘ದುವಾ’ಎಂದು ಹೆಸರಿಟ್ಟಿದ್ದಾರೆ.

ಇದನ್ನೂ ಓದಿ: ತೆಲುಗು ಚಿತ್ರರಂಗವ ಕೊಂಡಾಡಿ, ದೀಪಿಕಾ ಪಡುಕೋಣೆಗೆ ಟಾಂಗ್ ಕೊಟ್ಟ ಜಾನ್ಹವಿ

ಗರ್ಭಾವಸ್ಥೆಯ ನಡುವೆಯೂ ದೀಪಿಕಾ ಪಡುಕೋಣೆ ತಮ್ಮ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಶಾರುಖ್ ಖಾನ್ ನಟನೆಯ ‘ಕಿಂಗ್’ ಚಿತ್ರದ ಶೂಟಿಂಗ್ ಮುಗಿಸಿ ದಕ್ಷಿಣ ಆಫ್ರಿಕಾದಿಂದ ಮರಳಿದ್ದಾರೆ. ಈ ಚಿತ್ರ ಇದೇ ಡಿಸೆಂಬರ್ 24ರಂದು ಬಿಡುಗಡೆಯಾಗಲಿದೆ. ಇದರ ಜೊತೆಗೆ ಅಟ್ಲಿ ನಿರ್ದೇಶನದ, ಅಲ್ಲು ಅರ್ಜುನ್ ನಾಯಕತ್ವದ ‘ರಾಕಾ’ ಚಿತ್ರದಲ್ಲೂ ದೀಪಿಕಾ ನಟಿಸುತ್ತಿದ್ದಾರೆ. ಇತ್ತ ರಣವೀರ್ ಸಿಂಗ್ ಕೂಡ ತಮ್ಮ ಮುಂಬರುವ ಜಾಂಬಿ ಅಡ್ವೆಂಚರ್ ಚಿತ್ರ ‘ಪ್ರಳಯ್’ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us