ಶಿಲ್ಪಾ ಶೆಟ್ಟಿ- ರಾಜ್ ಕುಂದ್ರಾಗೆ ಹೊಸ ಸಂಕಷ್ಟ; 41 ಲಕ್ಷ ರೂ ವಂಚಿಸಿದ್ದಾರೆಂದು ದೂರು ನೀಡಿದ ದೆಹಲಿ ಮೂಲದ ಉದ್ಯಮಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾಗೆ ಹೊಸ ಸಂಕಷ್ಟ ಎದುರಾಗಿದೆ. ದೆಹಲಿ ಮೂಲದ ಉದ್ಯಮಿಯೊಬ್ಬರು ದಂಪತಿಯ ವಿರುದ್ಧ ವಂಚನೆಯ ಪ್ರಕರಣವನ್ನು ದಾಖಲಿಸಿದ್ದಾರೆ.

ಶಿಲ್ಪಾ ಶೆಟ್ಟಿ- ರಾಜ್ ಕುಂದ್ರಾಗೆ ಹೊಸ ಸಂಕಷ್ಟ; 41 ಲಕ್ಷ ರೂ ವಂಚಿಸಿದ್ದಾರೆಂದು ದೂರು ನೀಡಿದ ದೆಹಲಿ ಮೂಲದ ಉದ್ಯಮಿ
ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ
Follow us
TV9 Web
| Updated By: shivaprasad.hs

Updated on: Sep 02, 2021 | 7:30 PM

ನವದೆಹಲಿ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ(Shilpa Shetty) ಹಾಗೂ ಅವರ ಪತಿ ಉದ್ಯಮಿ ರಾಜ್ ಕುಂದ್ರಾಗೆ(Raj Kundra) ಸಂಕಷ್ಟಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ.  ನ್ಯಾಯಾಂಗ ಬಂಧನದಲ್ಲಿರುವ ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿ ವಿರುದ್ಧ ದೆಹಲಿ ಮೂಲದ ಉದ್ಯಮಿಯೊಬ್ಬರು ವಂಚನೆ ಮಾಡಿದ್ದಾರೆ ಎಂದು ದೂರು ನೀಡಿದ್ದು, ಪೊಲೀಸರಲ್ಲಿ ಎಫ್​ಐಆರ್​ ದಾಖಲಿಸುವಂತೆ ಕೋರಿಕೊಂಡಿದ್ದಾರೆ. ದೂರಿನ ಪ್ರಕಾರ ರಾಜ್ ಕುಂದ್ರಾ ಅವರು ಮುಂಬೈ ಮೂಲದ ಕಂಪನಿಯೊಂದರಲ್ಲಿ ಉದ್ಯಮಿಗೆ ಹಣ ಹೂಡಲು ಮನವೊಲಿಸಿದ್ದರು. ಅದರ ಪ್ರಕಾರ 41 ಲಕ್ಷ ರೂಗಳನ್ನು ಹೂಡಿದ ಉದ್ಯಮಿಯ ಹಣವನ್ನು ದುರುದ್ದೇಶಕ್ಕೆ ಬಳಸಲಾಗಿದೆ ಎಂದು ದೂರಲಾಗಿದೆ.

ಟೈಮ್ಸ್ ಆಫ್ ಇಂಡಿಯಾ ಪ್ರಕಾರ, “ಆರೋಪಿತರು(ರಾಜ್ ಕುಂದ್ರಾ, ಶಿಲ್ಪಾ ಶೆಟ್ಟಿ) ಉದ್ದೇಶಪೂರ್ವಕವಾಗಿ ದೂರುದಾರರನ್ನು(ಉದ್ಯಮಿ) 41,33,782 ರೂ.ಗಳನ್ನು ಹೂಡಿಕೆ ಮಾಡಲು ಪ್ರೇರೇಪಿಸಿ ನಂತರ ದುರುಪಯೋಗಪಡಿಸಿಕೊಂಡಿದ್ದಾರೆ. ಹಾಗೂ ಅದನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿದ್ದಾರೆ ಮತ್ತು ಅದರಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಣವನ್ನು ಗೇಮಿಂಗ್, ಅನಿಮೇಷನ್ ಮತ್ತು ಸೌಂದರ್ಯ ಉತ್ಪನ್ನಗಳಿಗೆ ಬಳಸುವುದಾಗಿ ರಾಜ್ ಹೇಳಿಕೊಂಡಿದ್ದರು. ಆದರೆ ಅವರು ಹಣವನ್ನು ಡಿಜಿಟಲ್ ಅಪ್ಲಿಕೇಶನ್‌ಗಳ ಮೂಲಕ ವಯಸ್ಕರ ವಿಷಯವನ್ನು ಸೃಷ್ಟಿಸಲು ಮತ್ತು ಪ್ರಕಟಿಸಲು ಹೂಡಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಸ್ವಾರ್ಥ ಹಾಗೂ ವಂಚನೆಯ ಉದ್ದೇಶದಿಂದ ಹಣವನ್ನು ಹೂಡಿಕೆ ಮಾಡಲು ತಿಳಿಸಿದ್ದಕ್ಕಾಗಿ ಹಾಗೂ ಕೆಟ್ಟ ಉದ್ದೇಶಗಳಿಗೆ ಹಣವನ್ನು ಬಳಸಿದ್ದಕ್ಕಾಗಿ ದೆಹಲಿಯ ಉದ್ಯಮಿ ದೂರು ನೀಡಿದ್ದಾರೆ.

ರಾಜ್ ಕುಂದ್ರಾ, ಶಿಲ್ಪಾ ಶೆಟ್ಟಿ ಹಾಗೂ ಇತರ ಆರು ಜನರ ವಿರುದ್ಧ ವಂಚನೆ, ಮಾಹಿತಿ ತಂತ್ರಜ್ಞಾನ ಕಾಯ್ದೆ, ಮಹಿಳೆಯರ ಅಸಭ್ಯ ಪ್ರಾತಿನಿಧ್ಯ(ನಿಷೇಧ) ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲು ಉದ್ಯಮಿ ಕೋರಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ಕುರಿತು ದೆಹಲಿಯ ನ್ಯಾಯಾಲಯವು ನವೆಂಬರ್ 9ರ ಒಳಗೆ ವರದಿಯನ್ನು ನೀಡುವಂತೆ ಪೊಲೀಸರಿಗೆ ತಿಳಿಸಿದೆ.

ಇದನ್ನೂ ಓದಿ:

‘ಈಗಾಗಲೇ ಸಾಮಾನ್ಯ ಜನರು ಬಡತನ, ನಿರುದ್ಯೋಗದ ಕಾರಣ 3ನೇ ಅಲೆಯನ್ನು ಅನುಭವಿಸುತ್ತಿದ್ದಾರೆ’: ಸೋನು ಸೂದ್

ಕಿಚ್ಚ ಸುದೀಪ್​ ಜನ್ಮದಿನ: ಬರಬೇಡಿ ಎಂದರೂ ಮನೆ ಬಾಗಿಲಿಗೆ ಬಂದು ಕಾದ ಫ್ಯಾನ್ಸ್​

(Delhi based entrepreneur accused and file a complaint against Shilpa Shetty and Raj Kundra for fraud)

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!